7:29 AM Wednesday26 - November 2025
ಬ್ರೇಕಿಂಗ್ ನ್ಯೂಸ್
ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ

ಇತ್ತೀಚಿನ ಸುದ್ದಿ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: 3991 ಪುಟಗಳ ಸುದೀರ್ಘ ಚಾರ್ಜ್​ಶೀಟ್​ ನ್ಯಾಯಾಲಯಕ್ಕೆ ಸಲ್ಲಿಕೆ

04/09/2024, 16:38

ಬೆಂಗಳೂರು(reporterkarnataka.com): ರೇಣುಕಾಸ್ವಾಮಿ ಅಮಾನುಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ 3,991 ಪುಟಗಳ ಸುದೀರ್ಘ ಚಾರ್ಜ್​ಶೀಟ್​ ಸಲ್ಲಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 17 ಮಂದಿ
ಆರೋಪಿಗಳ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಸಲಾಗಿದೆ. 3 ಪ್ರತ್ಯಕ್ಷ ಸಾಕ್ಷ್ಯಗಳು, ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್ಎಸ್ಎಲ್) ಹಾಗೂ ಕೇಂದ್ರೀಯ ವಿಧಿ ವಿಜ್ಞಾನ ಪ್ರಯೋಗಾಲಯ (ಸಿಎಫ್ಎಸ್ಎಲ್) ದಿಂದ ಪಡೆದಿರುವ 8 ವರದಿಗಳನ್ನೂ
ಬಗ್ಗೆ ಚಾರ್ಜ್ ಶೀಟ್ ನಲ್ಲಿ
ಉಲ್ಲೇಖಿಸಲಾಗಿದೆ. ತನಿಖೆ ಇನ್ನೂ ಸಹ ಪೂರ್ಣಗೊಂಡಿಲ್ಲದಿರುವುದರಿಂದ ಸಿಆರ್​ಪಿಸಿ 173(8) ಅಡಿ ನ್ಯಾಯಾಲಯಕ್ಕೆ ಪ್ರಾಥಮಿಕ ಚಾರ್ಜ್​ಶೀಟ್ ಸಲ್ಲಿಕೆ ಮಾಡಲಾಗಿದೆ.
ಪ್ರಕರಣದ ಎ2 ಆರೋಪಿಯಾದ ಕನ್ನಡದ ಪ್ರಸಿದ್ದ ನಟ ದರ್ಶನ್ ಅವರನ್ನು ಚಾರ್ಜ್​ಶೀಟ್​ನಲ್ಲಿ ಎ1 ಆರೋಪಿಯಾಗಿ ಬದಲಿಸಬಹುದು ಎನ್ನಲಾಗಿತ್ತು. ಆದರೆ, ಚಾರ್ಜ್​ಶೀಟ್​ನಲ್ಲಿ ಆರೋಪಿಗಳನ್ನು ಯಥಾವತ್ ಮುಂದುವರೆಸಲಾಗಿದೆ.
ರೇಣುಕಾಸ್ವಾಮಿಯ ಹತ್ಯೆ ಪ್ರಕರಣದ ಎ1 ಆರೋಪಿಯಾಗಿರುವ ಪವಿತ್ರಾ ಗೌಡ, ಹತ್ಯೆಯ ನಡೆದ ಸ್ಥಳದಲ್ಲಿ ಹಾಜರಿದ್ದು ರೇಣುಕಾಸ್ವಾಮಿಗೆ ಚಪ್ಪಲಿಯಲ್ಲಿ ಹೊಡೆದಿದ್ದಾರೆ. ಆ ಸ್ಥಳದಲ್ಲಿ ಆ್ಯಕ್ಟಿವ್ ಆಗಿದ್ದ ಪವಿತ್ರ ಗೌಡ ಅವರ ಮೊಬೈಲ್ ನಂಬರ್ ಅವರ ಭಾಗಿಯ ಕುರಿತು ಸಾಕ್ಷ್ಯವಾಗಿದೆ ಎಂದು ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು