3:55 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ ಆಳದ ಬೇಬಿ ಪೂಲ್ ಗೆ ಹಾರಿದ ಪ್ರವಾಸಿ ಯುವಕ ದಾರುಣ ಅಂತ್ಯ

29/06/2026, 15:12

ಸಿಂಧುದುರ್ಗ(reporterkarnataka.com): ಪ್ರವಾಸಕ್ಕೆಂದು ಸ್ನೇಹಿತರೊಂದಿಗೆ ಬಂದು ರೆಸಾರ್ಟ್ ನಲ್ಲಿ ಮೋಜು-ಮಸ್ತಿ ಮಾಡಲು ಹೋಗಿ ಯುವಕನೊಬ್ಬ ದುರಂತ ಅಂತ್ಯ ಕಂಡಿರುವ ಘಟನೆ ನಡೆದಿದೆ. ಈಜುಕೊಳದ ಆಳ ತಿಳಿಯದೆ ಎಂಟರಿಂದ ಹತ್ತು ಅಡಿ ಎತ್ತರದಿಂದ ತಲೆಕೆಳಗಾಗಿ ದುಮುಕಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಮಾಲ್ವಣ್‌ನ ವಾಯರಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಕೊಲ್ಲಾಪುರ ಜಿಲ್ಲೆಯ ಶ್ರೇಣಿಕ್ ಮಿಲಿಂದ್ ಟಾಕಳೆ (25) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ.
ಮೃತ ಶ್ರೇಣಿಕ್ ಮಿಲಿಂದ್ ತನ್ನ ಒಂಬತ್ತು ಜನ ಸ್ನೇಹಿತರ ತಂಡದೊಂದಿಗೆ ಮಾಲ್ವಣ್‌ನ ವಾಯರಿ ವ್ಯಾಪ್ತಿಯ ರೆಸಾರ್ಟ್‌ಗೆ ಜೂನ್ 28 ರಂದು ಪ್ರವಾಸಕ್ಕೆ ಬಂದಿದ್ದನು. ದುರಂತ ಸಂಭವಿಸುವ ಕೆಲವೇ ಕ್ಷಣಗಳ ಮುನ್ನ ಸ್ನೇಹಿತರೆಲ ಸೇರಿ ಈಜುಕೊಳದ ಪಕ್ಕದಲ್ಲಿ ಅತ್ಯಂತ ಸಡಗರದಿಂದ ಡ್ಯಾನ್ಸ್ ಮಾಡುತ್ತಿದ್ದರು. ಈ ದೃಶ್ಯವನ್ನು ಆತನ ಸ್ನೇಹಿತರೊಬ್ಬರು ಮೊಬೈಲ್‌ನಲ್ಲಿ ರೆಕಾರ್ಡ್​ ಮಾಡುತ್ತಿದ್ದರು. ಈ ವೇಳೆ ಶ್ರೇಣಿಕ್ ಸುಮಾರು 8 ರಿಂದ 10 ಅಡಿ ಎತ್ತರದ ಗೋಡೆಯನ್ನು ಹತ್ತಿ, ಅಲ್ಲಿಂದ ನೇರವಾಗಿ ಈಜುಕೊಳಕ್ಕೆ ತಲೆಕೆಳಗಾಗಿ ಡೈವ್ ಮಾಡಿದ್ದಾನೆ.
ಶ್ರೇಣಿಕ್ ಡೈವ್ ಮಾಡಿದ ಈಜುಕೊಳದ ಆ ಭಾಗ ಕೇವಲ 4 ಅಡಿ ಮಾತ್ರ ಆಳವಿತ್ತು ಹಾಗೂ ಅದನ್ನು ಮಕ್ಕಳಿಗಾಗಿ ಮೀಸಲಿಡಲಾಗಿತ್ತು. ಅತಿಯಾದ ಎತ್ತರ ಮತ್ತು ತೀವ್ರ ವೇಗದಿಂದ ದುಮುಕಿದ ಕಾರಣ ಶ್ರೇಣಿಕ್‌ನ ತಲೆ ನೇರವಾಗಿ ಈಜುಕೊಳದ ತಳಭಾಗದ ಕಾಂಕ್ರೀಟ್ ನೆಲಕ್ಕೆ ಅಪ್ಪಳಿಸಿದೆ. ತಲೆಯ ಮುಂಭಾಗಕ್ಕೆ ತೀವ್ರವಾದ ಪೆಟ್ಟು ಬಿದ್ದಿದ್ದರಿಂದ ಶ್ರೇಣಿಕ್ ಈಜುಕೊಳದ ನೀರಿನಲ್ಲೇ ಪ್ರಾಣಬಿಟ್ಟಿದ್ದಾನೆ. ತಕ್ಷಣವೇ ಆತನನ್ನು ನೀರಿನಿಂದ ಹೊರತೆಗೆದ ಸ್ನೇಹಿತರು ಮಾಲ್ವಣ್ ಗ್ರಾಮೀಣ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಆಸ್ಪತ್ರೆಗೆ ತಲುಪುವ ಮುನ್ನವೇ ಮೃತಪಟ್ಟಿದ್ದಾನೆ.
ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಮಾಲ್ವಣ್ ಪೊಲೀಸರು ಅಸ್ವಾಭಾವಿಕ ಮರಣಪ್ರಕರಣ ದಾಖಲಿಸಿಕೊಂಡಿದ್ದಾರೆ. ಶವಪರೀಕ್ಷೆಯ ಪ್ರಕ್ರಿಯೆ ಮುಗಿದ ಬಳಿಕ ಯುವಕನ ಮೃತದೇಹವನ್ನು ಆತನ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಪ್ರವಾಸಿಗರು ರೆಸಾರ್ಟ್‌ಗಳಲ್ಲಿ ಇಂತಹ ಸಾಹಸಗಳಿಗೆ ಕೈಹಾಕದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು