9:20 AM Friday3 - October 2025
ಬ್ರೇಕಿಂಗ್ ನ್ಯೂಸ್
ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ… ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಪಟ್ಟದ ಆನೆ, ಕುದುರೆ, ಒಂಟೆಗೂ ಪೂಜೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸರಾ ಸಂಭ್ರಮ: ದೇಶ – ವಿದೇಶಗಳ ಪ್ರಯಾಣಿಕರಿಗೆ… ಸಾಲ ಮರು ಪಾವತಿಸಲು ಬ್ಯಾಂಕ್ ಅಧಿಕಾರಿಗಳ ಕಿರುಕುಳ: ರೈತ ಮನನೊಂದು ಆತ್ಮಹತ್ಯೆ ಕಲ್ಯಾಣದ ನೆರೆ ಸಂತ್ರಸ್ತರಿಗೆ ಸ್ಪಂದಿಸದ ರಾಜ್ಯ ಸರಕಾರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ… ಹಾರಂಗಿ ಜಲಾಶಯ ವೀಕ್ಷಣೆ ಮಾಡಿ ಹಿಂತಿರುಗುತ್ತಿದ್ದ ಪ್ರವಾಸಿ ಬಸ್ ಅಪಘಾತ: ಹಲವು ವಿದ್ಯಾರ್ಥಿಗಳಿಗೆ…

ಇತ್ತೀಚಿನ ಸುದ್ದಿ

“ಡ್ರಾಪ್ ಆಫ್ ಹೋಪ್” ರಕ್ತದಾನ ಅಭಿಯಾನಕ್ಕೆ ಸ್ಪಂದನೆ; 250 ಮಂದಿಯಿಂದ ಯಶಸ್ವಿ ರಕ್ತದಾನ; ಸಂಸದರ ಶ್ಲಾಘನೆ.

28/09/2025, 11:35

ದಾವಣಗೆರೆ(reporterkarnataka.com); ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಅವರ 58ನೇ ಜನ್ಮದಿನಾಚರಣೆಯ ಅಂಗವಾಗಿ, ಎಸ್‌ಎಸ್ ಕೇರ್ ಟ್ರಸ್ಟ್ ವಿದ್ಯಾರ್ಥಿ ವಿಭಾಗವು “ಡ್ರಾಪ್ ಆಫ್ ಹೋಪ್” ಎಂಬ ಶೀರ್ಷಿಕೆಯಡಿ ಆಯೋಜಿಸಿದ್ದ ರಕ್ತದಾನ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದ್ದು ನಗರದ ಬಿಐಇಟಿ ಕಾಲೇಜಿನಲ್ಲಿ ಒಂದೇ ದಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 250 ಮಂದಿ ರಕ್ತದಾನ ಮಾಡಿದ್ದಾರೆ.
ರಕ್ತದಾನ ಮಾಡಿದ ಎಲ್ಲರಿಗೂ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅಭಿನಂದಿಸಿದ್ದಾರೆ.


ಈ ವೇಳೆ ಮಾತನಾಡಿದ ಸಂಸದರು “ಡ್ರಾಪ್ ಆಫ್ ಹೋಪ್” ಎಂಬ ಶೀರ್ಷಿಕೆಯಡಿ ಆಯೋಜಿಸಿದ್ದ ರಕ್ತದಾನ ಅಭಿಯಾನ ಯಶಸ್ವಿಯಾಗಿ ಮುಂದುವರೆದಿದೆ. ದಾವಣಗೆರೆಯ ಬಿಐಇಟಿ ಕಾಲೇಜಿನಲ್ಲಿ ನಡೆದ ಅಭಿಯಾನದಲ್ಲಿ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿರುವುದು ಶ್ಲಾಘನೀಯ.ಸುಮಾರು 250 ಮಂದಿ ರಕ್ತದಾನ ಮಾಡುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ. ಸೆ.30ರವರೆಗೆ ರಕ್ತದಾನ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.
ರಕ್ತದಾನ ಅಭಿಯಾನವು ಬಾಪೂಜಿ ಎಜುಕೇಶನಲ್ ಅಸೋಸಿಯೇಷನ್ ಸಂಸ್ಥೆಗಳಾದ್ಯಂತ ಸೆಪ್ಟೆಂಬರ್ 19ರಿಂದ ಪ್ರಾರಂಭಗೊಂಡಿದೆ.ಪ್ರತಿದಿನ 9 ರಿಂದ ಸಂಜೆ 5 ಗಂಟೆಯವರೆಗೆ ರಕ್ತದಾನ ಶಿಬಿರ ನಡೆಯುತ್ತಿದೆ.ಇದೇ ಸೆ.30 ರಂದು ಅಭಿಯಾನ ಕೊನೆಗೊಳ್ಳಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು