3:56 AM Wednesday31 - December 2025
ಬ್ರೇಕಿಂಗ್ ನ್ಯೂಸ್
ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:…

ಇತ್ತೀಚಿನ ಸುದ್ದಿ

Result | 2nd ಪಿಯುಸಿ ಫಲಿತಾಂಶ: ತುಂಬೆ ಪದವಿಪೂರ್ವ ಕಾಲೇಜಿಗೆ ಉತ್ತಮ ಫಲಿತಾಂಶ

11/04/2025, 10:54

ಬಂಟ್ವಾಳ(reporterkarnataka.com):2024-25 ರ ಶೈಕ್ಷಣಿಕ ಸಾಲಿನಲ್ಲಿ 93% ದೊಂದಿಗೆ ತುಂಬೆ ಪದವಿಪೂರ್ವ ಕಾಲೇಜಿಗೆ ದ್ವಿತೀಯ ಪಿಯುಸಿಯಲ್ಲಿ ಉತ್ತಮ ಫಲಿತಾಂಶ ಪಡೆದಿದೆ.
ವಿಜ್ಞಾನ ವಿಭಾಗದಲ್ಲಿ 66 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 66 ವಿದ್ಯಾರ್ಥಿಗಳು ಉತ್ತೀರ್ಣರಾಗಿ, ಮೊಹಮ್ಮದ್ ಸಿನಾನ್ 568 ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ ಪಡೆದರೆ, ವಾಣಿಜ್ಯ ವಿಭಾಗದಲ್ಲಿ 68 ಮಂದಿ ಹಾಜರಾಗಿ 63 ವಿದ್ಯಾರ್ಥಿಗಳು ತೇರ್ಗಡೆಯಾಗಿ ವಿದ್ಯಾರ್ಥಿನಿ ನಮ್ರತಾ
547 ಅಂಕಗಳೊಂದಿಗೆ ಪ್ರಥಮ ಹಾಗೂ ಕಲಾ ವಿಭಾಗದಲ್ಲಿ 15 ವಿದ್ಯಾರ್ಥಿಗಳಲ್ಲಿ 13 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಮೆಹರುನ್ನೀಸಾ 493 ಅಂಕಗಳನ್ನು ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ.
ಕಾಲೇಜಿನ ಒಟ್ಟು ಉತ್ತಮ ಫಲಿತಾಂಶಕ್ಕಾಗಿ ಮುಹಿಯುದ್ದೀನ್ ಎಜುಕೇಶನಲ್ ಟ್ರಸ್ಟ್ ನ ಆಡಳಿತ ಮಂಡಳಿ ಉಪನ್ಯಾಸಕ ವೃಂದ ಹಾಗು ವಿದ್ಯಾರ್ಥಿಗಳಿಗೆ ಅಭಿನಂದಿಸಿರುತ್ತದೆ ಎಂಬುದಾಗಿ ಪ್ರಾಂಶುಪಾಲರಾದ ವಿ.ಎಸ್. ಭಟ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು