9:46 PM Friday3 - April 2026
ಬ್ರೇಕಿಂಗ್ ನ್ಯೂಸ್
ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ…

ಇತ್ತೀಚಿನ ಸುದ್ದಿ

ಭಾರತ ಸ್ಕೌಟ್ಸ್‌ ಮತ್ತು ಗೈಡ್ಸ್‌ ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದ ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ: ಆಸ್ಪತ್ರೆ ದಾಖಲು

03/04/2026, 20:47

ಬೆಂಗಳೂರು(reporterkarnataka.com): ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಶುಕ್ರವಾರ ನಗರದ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ ಭಾರತ ಸ್ಕೌಟ್ಸ್‌ ಮತ್ತು ಗೈಡ್ಸ್‌ ಆಯೋಜಿಸಿದ್ದ ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ ಅವರ ಕಾರ್ಯಕ್ರಮದಲ್ಲಿ ಸಂತೋಷ್‌ ಹೆಗ್ಡೆ ಅವರು ಏಕಾಏಕಿ ಕುಸಿದು ಬಿದ್ದುದರಿಂದ ಆತಂಕ ಉಂಟಾಯಿತು. ಕಾರ್ಯಕ್ರಮಕ್ಕೆ ಆಗಮಿಸಿ ಪಿಜಿಆರ್ ಸಿಂಧ್ಯಾ ಅವರೊಂದಿಗೆ ಕುಳಿತು ಮಾತನಾಡುತ್ತಿದ್ದ ಹೆಗ್ಡೆ ಅವರಿಗೆ ತಲೆ ಸುತ್ತು ಬಂದ ಹಾಗೆ ಆಯಿತು. ಕುಳಿತವರೇ ಅಲ್ಲಿಯೇ ಕುಸಿದು ಬಿದ್ದರು. ಅಲ್ಲಿದ್ದವರು ನೀರು ಕುಡಿಸಿದರೂ ಚೇತರಿಕೆ ಕಾಣಲಿಲ್ಲ.
ಕಾರ್ಯಕ್ರಮಕ್ಕೆ ಬಂದಿದ್ದ ವಿಧಾನಸಭೆಯ ಸ್ಪೀಕರ್‌ ಯು.ಟಿ.ಖಾದರ್ ಅವರ ಸರ್ಕಾರಿ ವಾಹನದಲ್ಲಿ ತಕ್ಷಣವೇ ಸಂತೋಷ್‌ ಹೆಗ್ಡೆ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.


‘ಮಧುಮೇಹದಿಂದ ಸಂತೋಷ್ ಹೆಗ್ಡೆ ಅವರು ಬಳಲುತ್ತಿದ್ದು, ಏಕಾಏಕಿ ರಕ್ತದ ಸಕ್ಕರೆ ಅಂಶದಲ್ಲಿ ಕುಸಿತ ಉಂಟಾಗಿದ್ದರಿಂದ ಈ ರೀತಿ ಆಗಿರಬಹುದು. ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಪಂದಿಸುತ್ತಿದ್ದಾರೆ’ ಎಂದು ವೈದ್ಯರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು