12:05 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ರೇವ್ ಪಾರ್ಟಿ ಮೇಲೆ ರೈಡ್: ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಸೇರಿ 10 ಮಂದಿ ಅರೆಸ್ಟ್ : ಅಪಾರ ಪ್ರಮಾಣದ ಡ್ರಗ್ಸ್ ವಶ

03/10/2021, 11:54

ಮುಂಬಯಿ(reporterkarnataka.com):ಕ್ರೂಸ್ ಹಡಗಿನಲ್ಲಿ ಮೋಜು-ಮಸ್ತಿ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳ ತಂಡ ಕ್ರೋಸ್ ನ ಮೇಲೆ ದಾಳಿ ನಡೆಸಿದ್ದು, ಬಾಲಿವುಡ್ ಪ್ರಸಿದ್ಧ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿದಂತೆ 10 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ.

ಪಾರ್ಟಿ ಮಾಡುತ್ತಿದ್ದ ಸ್ಥಳದಿಂದ ಕೊಕೇನ್, ಹಶೀಶ್ ಹಾಗೂ ಎಂಡಿಎಂಎ ಸೇರಿ ಹಲವು ರೀತಿಯ ಮಾದಕ ದ್ರವ್ಯಗಳನ್ನು ಪತ್ತೆ ಮಾಡಿ, ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

ರೇವ್ ಪಾರ್ಟಿಯಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಪುತ್ರ ಕೂಡಾ ಈ ರೇವ್ ಪಾರ್ಟಿಯಲ್ಲಿದ್ದ ಎನ್ನಲಾಗಿದೆ. ಎರಡು ವಾರಗಳ ಹಿಂದಷ್ಟೇ ಉದ್ಘಾಟನೆಯಾಗಿದ್ದ ಕಾರ್ಡೆಲಿಯಾ ಕ್ರೂಸ್‌ ಲೈನರ್‌ನ “ದಿ ಎಂಪ್ರಸ್‌’ ಹಡಗಿನೊಳಗೆ ಡ್ರಗ್ಸ್‌ ಪಾರ್ಟಿ ನಡೆಸಲಾಗುತ್ತಿತ್ತು. ಈ ಹಡಗು ಮುಂಬೈನಿಂದ ಗೋವಾಕ್ಕೆ ತೆರಳುತ್ತಿತ್ತು ಎನ್ನಲಾಗಿದೆ. ಸಮುದ್ರ ತೀರ ಬಿಟ್ಟು ಸ್ವಲ್ಪ ಸಮಯದಲ್ಲೇ ಪಾರ್ಟಿ ಆರಂಭಿಸಲಾಗಿದೆ.

ಬಂಧಿತರನ್ನು ಇಂದು ಬಾಂಬೆ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆಯಿದೆ.

ಇತ್ತೀಚಿನ ಸುದ್ದಿ

ಜಾಹೀರಾತು