8:18 AM Friday27 - February 2026
ಬ್ರೇಕಿಂಗ್ ನ್ಯೂಸ್
ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ… ಖಾಲಿಯಿರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ

ಇತ್ತೀಚಿನ ಸುದ್ದಿ

ರೇವಾ ವಿವಿ: 5 ಶಾಸ್ತ್ರೀಯ ನೃತ್ಯ ಪ್ರಕಾರಗಳಲ್ಲಿ ಪಿಜಿ, ಪದವಿ, ಡಿಪ್ಲೊಮಾ, ಸರ್ಟಿಫಿಕೇಟ್ ಕೋರ್ಸ್ ಗಳಿಗೆ ಅವಕಾಶ

25/07/2022, 23:52

ಬೆಂಗಳೂರು(reporterkarnataka.com): ರೇವಾ ವಿಶ್ವವಿದ್ಯಾಲಯದ ಪ್ರದರ್ಶಕ ಕಲೆ ಮತ್ತು ಭಾರತೀಯ  ಅಧ್ಯಯನ ಶಾಸ್ತ್ರ ವಿಭಾಗವು ದಕ್ಷಿಣ ಭಾರತದಲ್ಲಿ ಇತಿಹಾಸವನ್ನು ಸೃಷ್ಟಿಸಿದೆ. ಭಾರತದ 8 ಶಾಸ್ತ್ರೀಯ ನೃತ್ಯ ಪ್ರಕಾರಗಳ ಪೈಕಿ 5 ಶಾಸ್ತ್ರೀಯ ನೃತ್ಯ ಪ್ರಕಾರಗಳಾದ ಭರತನಾಟ್ಯ, ಕೂಚಿಪುಡಿ , ಒಡಿಸ್ಸಿ, ಮೋಹಿನಿಯಾಟ್ಟಂ ಮತ್ತು ಕಥಕ್ ನೃತ್ಯಗಳಲ್ಲಿ ಪದವಿ, ಸ್ನಾತಕೋತ್ತರ, ಪದವಿ, ಡಿಪ್ಲೊಮಾ (online), ಸರ್ಟಿಫಿಕೇಟ್ (online) ಕೋರ್ಸುಗಳಲ್ಲದೆ ಈ ಎಲ್ಲಾ ವಿಭಾಗಗಳಲ್ಲಿ ಸಂಶೋಧನೆ ನಡೆಸುವ ಅವಕಾಶವನ್ನು ವಿದ್ಯಾರ್ಥಿಗಳಿಗೆ ಮತ್ತು ಆಸಕ್ತರಿಗೆ ಕಲ್ಪಿಸಿದೆ. ಅಷ್ಟೇ ಅಲ್ಲದೆ ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ ಶೈಲಿಗಳಲ್ಲಿ ಹಾಗೂ ನಾಟಕ ವಿಭಾಗದಲ್ಲಿ ಸರ್ಟಿಫಿಕೇಟ್ ಡಿಪ್ಲೊಮಾ ಪದವಿ ಮತ್ತು ಸ್ನಾತಕೋತ್ತರ ಪದವಿಗಳಿಗೆ ಅವಕಾಶ ಕಲ್ಪಿಸಿದೆ. 

ಈ ಎಲ್ಲಾ ವಿಭಾಗಗಳಲ್ಲಿ ಪರಿಣತ ಅಧ್ಯಾಪಕರನ್ನು ನೇಮಕ ಮಾಡಲಾಗಿದ್ದು, ವಿದ್ಯಾರ್ಥಿಗಳಿಗೆ  ಪ್ರತಿಷ್ಠಿತ ವೇದಿಕೆಗಳಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಅವಕಾಶ ಮಾಡಿಕೊಡಲಾಗುವುದು ಎಂದು ಅಧ್ಯಯನ ವಿಭಾಗದ ಪ್ರಕಟಣೆ ತಿಳಿಸಿದೆ. 

ಭಾರತೀಯ ಅಧ್ಯಯನ ಶಾಸ್ತ್ರ ವಿಭಾಗದಲ್ಲಿ ಇಂಡಾಲಜಿ ಡಿಪ್ಲೊಮಾ ಮತ್ತು ಇಂಡಾಲಜಿ ಸ್ನಾತಕೋತ್ತರ ಪದವಿ ಮತು ಡಿಪ್ಲೊಮಾ ಕೋರ್ಸ್ಗಳನ್ನು ಕೂಡ ಆರಂಭಿಸಲಾಗಿದೆ. ವಿಶ್ವವಿದ್ಯಾನಿಲಯದ ಭಾರತೀಯ ಪ್ರದರ್ಶಕ ಕಲೆಗಳು ಮತ್ತು ಭಾರತೀಯ ಅಧ್ಯಯನ ವಿಭಾಗವು ಅತ್ಯಾಧುನಿಕ ವ್ಯವಸ್ಥೆಯುಳ್ಳ ಸ್ಟುಡಿಯೋಗಳನ್ನು ತರಗತಿಗಳನ್ನು ಹಚ್ಚಹಸಿರಿನ ನಡುವೆ ನೃತ್ಯ ಸಂಗೀತ ಮತ್ತು ನಾಟಕ ಅಭ್ಯಾಸಕ್ಕೆ ಮಂಟಪಗಳನ್ನು ವೇದಿಕೆಗಳನ್ನು ಮತ್ತು ಅತ್ಯಾಧುನಿಕ ವ್ಯವಸ್ಥೆಯುಳ್ಳ ಆಡಿಟೋರಿಯಂಗಳನ್ನು ಹೊಂದಿದೆ. ಇಂಡೋಲಜಿ ವಿಭಾಗದಲ್ಲಿ ಭಾರತೀಯ ಶಾಸ್ತ್ರ ಮತ್ತು ಭಾರತೀಯ ಪಾರಂಪರಿಕ ಕಲೆಗಳು ಶಾಸ್ತ್ರೀಯ ನೃತ್ಯ, ಶಾಸ್ತ್ರೀಯ ಸಂಗೀತ, ನಾಟಕ, ಸೌಂದರ್ಯ ಮೀಮಾಂಸೆ, ನ್ಯಾಯಶಾಸ್ತ್ರ, ಸನಾತನ ಸಂಸ್ಥೆಗಳು, ಪ್ರಾಚೀನ ಸಾಮಾಜಿಕ, ರಾಜಕೀಯ ವಿಷಯಗಳ ಕುರಿತ ಅಧ್ಯಯನ ಭಾರತದ ಪ್ರಾಚೀನ ಭಾರತದಲ್ಲಿ ವಿಜ್ಞಾನ, ಗಣಿತ, ಖಗೋಳ ಶಾಸ್ತ್ರ, ರಸಾಯನ ಶಾಸ್ತ್ರ ಇತ್ಯಾದಿ ವಿಷಯಗಳ ಬಗ್ಗೆ ಆಳವಾದ ಅಧ್ಯಯನ ಹಾಗೂ ಸಂಶೋಧನೆ ನಡೆಸಲಾಗುವುದು. ಅಷ್ಟೇ ಅಲ್ಲದೆ ತಾಳೆ ಗ್ರಂಥಗಳು, ಪ್ರಾಚೀನ ಹಸ್ತಪ್ರತಿಗಳು ಮತ್ತು ಶಿಲಾಶಾಸನಗಳ ಕುರಿತ ಆಳವಾದ ಅಧ್ಯಯನಕ್ಕೆ ಅವಕಾಶ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ- 9886062843, 9886673452

ಇತ್ತೀಚಿನ ಸುದ್ದಿ

ಜಾಹೀರಾತು