6:17 PM Friday22 - May 2026
ಬ್ರೇಕಿಂಗ್ ನ್ಯೂಸ್
ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ

ಇತ್ತೀಚಿನ ಸುದ್ದಿ

ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್ ನ ಗುಂಡಿಕ್ಕಿ ಹತ್ಯೆ

22/05/2026, 18:16

ಇಸ್ಲಾಮಾಬಾದ್(reporterkarnataka.com): 2019 ರಲ್ಲಿ ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದಿದ್ದ ಸೇನಾ ವಾಹನದ ಮೇಲಿನ ದಾಳಿಯ ಮಾಸ್ಟರ್​ ಮೈಂಡ್​ ಡಾಕ್ಟರ್​ ಅಲಿಯಾಸ್​ ಹಂಜಾ ಬರ್ಮನ್​ ಪಾಕಿಸ್ತಾನದ ಮುಜಫರಾಬಾದ್​ನಲ್ಲಿ ಅಪರಿಚಿತ ಬಂದೂಕುಧಾರಿ ಯ ಗುಂಡಿಗೆ ಬಲಿಯಾಗಿದ್ದಾನೆಂದು ತಿಳಿದು ಬಂದಿದೆ.
ಮಾಹಿತಿ ಪ್ರಕಾರ, ಹಂಜಾ ಬರ್ಮನ್​ ಪಾಕ್​ ಆಕ್ರಮಿತ ಕಾಶ್ಮೀರ ಪ್ರದೇಶದಲ್ಲಿರುವ ಮುಜಫರಾಬಾದ್​ನಲ್ಲಿ ಸಂಚರಿಸುತ್ತಿದ್ದ ವೇಳೆ ಅಪರಿಚಿತರು ಗುಂಡಿನ ದಾಳಿ ನಡೆಸಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ಮಾಹಿತಿ ಲಭ್ಯವಾಗಿದೆ.
ಯಾರು ಈ ಹಂಜಾ ಬರ್ಮನ್​?
ಪುಲ್ವಾಮಾದ ಖರ್ಬತ್ಪೋರಾದಲ್ಲಿ ಜನಿಸಿದ್ದ ಹಂಜಾ ಬರ್ಮನ್​ 2017 ರಲ್ಲಿ, ಉನ್ನತ ವ್ಯಾಸಂಗಕ್ಕಾಗಿ ಪಾಕಿಸ್ತಾನಕ್ಕೆ ಹೋಗುವುದಾಗಿ ಮನೆಯವರಿಗೆ ತಿಳಿಸಿ, ಅಲ್​-ಬದರ್​ ಎಂಬ ಭಯೋತ್ಪಾದಕ ಸಂಘಟನೆಯನ್ನು ಸೇರಿಕೊಂಡಿದ್ದ.
ನಂತರ 2019 ರಲ್ಲಿ ಪುಲ್ವಾಮಾದಲ್ಲಿ ಸಿಆರ್​ಪಿಎಫ್​ ಸಿಬ್ಬಂದಿಗಳ ಮೇಲೆ ನಡೆದಿದ್ದ ಬಾಂಬ್​ ದಾಳಿಯ ಹಿಂದಿರುವ ಮಾಸ್ಟರ್​ ಮೈಂಡ್​ ಈ ಹಂಜಾ ಬರ್ಮನ್​ ಎಂದು ಭಾರತೀಯ ಗುಪ್ತಚರ ಇಲಾಖೆ ಮಾಹಿತಿಯನ್ನು ಕಲೆಹಾಕಿದ್ದವು. ಇವನು ಕುರಿತು ತನಿಖೆ ನಡೆಸಿದ ಗುಪ್ತಚರ ಇಲಾಖೆಯ ವರದಿಯನ್ನು ಆಧರಿಸಿ ಕೇಂದ್ರ ಗೃಹ ಸಚಿವಾಲಯ ಹಂಜಾ ಬರ್ಮನ್​ನನ್ನು 2022 ರಲ್ಲಿ ಅಧಿಕೃತವಾಗಿ ಭಯೋತ್ಪಾದಕ ಎಂದು ಘೋಷಿಸಿತು.
ಪುಲ್ವಾಮಾ ದಾಳಿ; ಪ್ರತಿದಾಳಿ!
ಪುಲ್ವಾಮಾ ದಾಳಿ ಭಾರತದ ಇತಿಹಾಸದಲ್ಲಿ ನಡೆದಿರುವ ದುರಂತಗಳಲ್ಲಿ ಒಂದಾಗಿದೆ. 2019ರ ಫೆಬ್ರವರಿ 14ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಲೆಥ್‌ಪೋರಾ ಎಂಬಲ್ಲಿ ಭಾರತದ ಹೆದ್ದಾರಿ 44ರಲ್ಲಿ ಈ ಭೀಕರ ಭಯೋತ್ಪಾದಕ ದಾಳಿ ನಡೆಯಿತು. ಜಮ್ಮುವಿನಿಂದ ಶ್ರೀನಗರಕ್ಕೆ ಸುಮಾರು 2,500ಕ್ಕೂ ಹೆಚ್ಚು ಕೇಂದ್ರೀಯ ಮೀಸಲು ಪೊಲೀಸ್ ಪಡೆ ಜವಾನರನ್ನು ಕರೆದೊಯ್ಯುತ್ತಿದ್ದ ವಾಹನಗಳ ಸರಣಿಯ ಮೇಲೆ ಈ ದಾಳಿ ನಡೆಸಲಾಯಿತು. ಸ್ಫೋಟಕಗಳನ್ನು ತುಂಬಿದ್ದ ಕಾರೊಂದನ್ನು ಚಲಾಯಿಸಿಕೊಂಡು ಬಂದ ಉಗ್ರನೊಬ್ಬ ಜವಾನರಿದ್ದ ಬಸ್‌ಗೆ ಜೋರಾಗಿ ಡಿಕ್ಕಿ ಹೊಡೆದನು. ಈ ಭೀಕರ ಆತ್ಮಹತ್ಯಾ ಬಾಂಬ್ ದಾಳಿಯ ತೀವ್ರತೆಗೆ ಭಾರತದ 40 ವೀರ ಸಿಆರ್‌ಪಿಎಫ್ ಜವಾನರು ವೀರಮರಣ ಹೊಂದಿದರು ಮತ್ತು ಅನೇಕರು ತೀವ್ರವಾಗಿ ಗಾಯಗೊಂಡರು. ಈ ಕೃತ್ಯದ ಜವಾಬ್ದಾರಿಯನ್ನು ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ ಎಂಬ ಉಗ್ರಗಾಮಿ ಸಂಘಟನೆ ವಹಿಸಿಕೊಂಡಿತು.
ಈ ಘಟನೆಯು ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾದ ಹಿನ್ನಲೆ ಭಾರತ ಮತ್ತು ಪಾಕಿಸ್ತಾನದ ನಡುವಿನ ರಾಜತಾಂತ್ರಿಕ ಸಂಬಂಧ ಹಾಳಾಯಿತು. ಈ ಕೃತ್ಯವನ್ನು ಜಗತ್ತು ತೀವ್ರವಾಗಿ ಖಂಡಿಸಿತು.

ಇತ್ತೀಚಿನ ಸುದ್ದಿ

ಜಾಹೀರಾತು