12:25 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ರೈತ ಕಾರ್ಮಿಕರ ಹೋರಾಟದ ಪ್ರಚಾರಾಂದೋಲನ: ಮಂಗಳೂರಿನಲ್ಲಿ ಪಾದಯಾತ್ರೆ

03/08/2021, 08:18

ಮಂಗಳೂರು(reporterkarnataka.com): ಕ್ವಿಟ್ ಇಂಡಿಯಾ ಚಳುವಳಿಯ ಸವಿನೆನಪಿನಲ್ಲಿ ರೈತ ಕಾರ್ಮಿಕರ  ಸಖ್ಯತೆಯಲ್ಲಿ ಬೃಹತ್ ಹೋರಾಟವು ಆಗಸ್ಟ್ 9 ರಂದು ದೇಶಾದ್ಯಂತ ನಡೆಯಲಿದ್ದು, ಅದರ ಪ್ರಚಾರಾಂದೋಲನದ ಭಾಗವಾಗಿ ನಗರದಲ್ಲಿ ಸೋಮವಾರ ಸಿಐಟಿಯು ನೇತೃತ್ವದಲ್ಲಿ ಪಾದಯಾತ್ರೆ ನಡೆಸಿ ಸಾರ್ವಜನಿಕರಲ್ಲಿ ಜಾಗ್ರತಿ ಮೂಡಿಸಲಾಯಿತು.

ಪಾದಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಸಿಐಟಿಯು ಜಿಲ್ಲಾಧ್ಯಕ್ಷ ಜೆ. ಬಾಲಕೃಷ್ಣ ಶೆಟ್ಟಿ, ದೇಶವನ್ನಾಳುವ ನರೇಂದ್ರ ಮೋದಿ ಸರಕಾರವು ಪ್ರತೀ ಹೆಜ್ಜೆಯಲ್ಲಿಯೂ ರೈತ ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೊಳಿಸುವ ಮೂಲಕ ದೇಶದ ಆರ್ಥಿಕತೆಯನ್ನು ಸರ್ವನಾಶಗೊಳಿಸಿದೆ. ಜನತೆಯ ಹಿತ ಕಾಪಾಡುವ ಬದಲು ಕಾರ್ಪೋರೇಟ್ ಕಂಪನಿಗಳ ಹಿತಾಸಕ್ತಿಗಳನ್ನು ಕಾಪಾಡುತ್ತಿದೆ. ಆ ಮೂಲಕ ದೇಶದ ಅಮೂಲ್ಯ ಸಂಪತ್ತುಗಳನ್ನು ಕಾರ್ಪೋರೇಟ್ ಕಂಪೆನಿಗಳಿಗೆ ಧಾರೆ ಎರೆದು ಕೊಡುತ್ತಿದೆ. ರೈತ ವಿರೋಧಿ ಮಸೂದೆಗಳನ್ನು ಜಾರಿಗೊಳಿಸಲು ಹೊರಟ ಕೇಂದ್ರ ಸರಕಾರವು ದೇಶದ ಕೃಷಿರಂಗವನ್ನೇ ಬುಡಮೇಲುಗೊಳಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮಾತನಾಡಿ, ಅಂದು ಈಸ್ಟ್ ಇಂಡಿಯಾ ಕಂಪೆನಿಯ ಮೂಲಕ ದೇಶದ ಸಂಪತ್ತನ್ನು ದೋಚಿದ ಬ್ರಿಟೀಷರ ವಿರುದ್ದ ದೇಶದ ಜನತೆ ಸಮರ ಧೀರ ಹೋರಾಟ ನಡೆಸಿದರೆ, ಇಂದು ನಮ್ಮ ದೇಶದ ಸಂಪತ್ತನ್ನು ಕೊಳ್ಳೆಹೊಡೆಯುತ್ತಿರುವ ನೂರಾರು ಕಾರ್ಪೋರೇಟ್ ಕಂಪೆನಿಗಳ ವಿರುದ್ಧ ದೇಶದ ರೈತ ಕಾರ್ಮಿಕರು ಒಂದಾಗಿ ಪ್ರಬಲ ಚಳುವಳಿ ರೂಪಿಸಬೇಕಾಗಿದೆ ಎಂದು ಹೇಳಿದರು.

ಪಾದಯಾತ್ರೆಯಲ್ಲಿ ಸಿಐಟಿಯು ಜಿಲ್ಲಾ ಮುಖಂಡರಾದ ಜಯಂತಿ ಶೆಟ್ಟಿ, ಭಾರತಿ ಬೋಳಾರ, ಜಯಲಕ್ಷ್ಮಿ, ಸಂತೋಷ್ ಆರ್.ಎಸ್, ಅಶೋಕ್ ಸಾಲ್ಯಾನ್, ಕೃಷ್ಣ ತಣ್ಣೀರುಬಾವಿ, ಅನ್ವರ್ ಶೇಕ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು