ಇತ್ತೀಚಿನ ಸುದ್ದಿ
ರೋಲ್ಸ್ ರಾಯ್ ಕಂಪನಿಯಲ್ಲಿ ನೌಕರಿ ಗಿಟ್ಟಿಸಿದ ರಿತು ಪರ್ಣಗೆ ಎನ್ ಎಸ್ ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ನೇತೃತ್ವದಲ್ಲಿ ಸನ್ಮಾನ
14/07/2025, 22:33

ಮಂಗಳೂರು(reporterkarnataka.com): ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿನಿ, ವಿಶ್ವದ ಪ್ರತಿಷ್ಠಿತ “Rolls Royce” ಕಂಪೆನಿಯಲ್ಲಿ ಕೆಲಸ ಗಿಟ್ಟಿಸಿಕೊಂಡ ಕರ್ನಾಟಕದ ಕಿರಿಯ ವಯಸ್ಸಿನ ಮೊದಲ ಯುವತಿ ಎಂಬ ಹೆಗ್ಗಳಿಕೆಗೆ ಪಾತ್ರರಾದ “ರಿತುಪರ್ಣ” ರವರ ನಿವಾಸಕ್ಕೆ ಭೇಟಿ ನೀಡಿ ಅವರನ್ನು ಎನ್ ಎಸ್ ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಅವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು.
ಅತೀ ಕಿರಿಯ ವಯಸ್ಸಿನಲ್ಲಿ ತನ್ನ ಕನಸಿನಂತೆ “Rolls Royce” ಕಂಪೆನಿಯಲ್ಲಿ ಕೆಲಸ ಪಡೆಯಲು ಯಶಸ್ವಿಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಕೀರ್ತಿ ತರುವ ಮೂಲಕ ವಿದ್ಯಾರ್ಥಿ ಸಮುದಾಯಕ್ಕೂ ಪ್ರೇರಣೆಯಾಗಿದ್ದಾರೆ.