1:16 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

​ಅತಿಯಾದ ಭಾರ ಹೊತ್ತ ಲಾರಿಗಳ ಸಂಚಾರಕ್ಕೆ ರಸ್ತೆ ಧ್ವಂಸ: ಬಾಳೂರು ಗ್ರಾಮಸ್ಥರ ಆಕ್ರೋಶ; ಪ್ರತಿಭಟನೆ

29/07/2026, 20:34

​​​ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಬಾಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲಕ್ಕಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಏಕೈಕ ಗ್ರಾಮೀಣ ರಸ್ತೆಯು ಇತ್ತೀಚೆಗೆ ಕಾಂಕ್ರೀಟೀಕರಣಗೊಂಡಿದ್ದರೂ, ಅತಿಯಾದ ಭಾರ ಹೊತ್ತ ಲಾರಿಗಳ ನಿರಂತರ ಸಂಚಾರದಿಂದಾಗಿ ಸಂಪೂರ್ಣವಾಗಿ ಹಾಳಾಗಿದ್ದು, ಗ್ರಾಮಸ್ಥರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
​ಸುಮಾರು ಮೂರು ವರ್ಷಗಳ ಹಿಂದಷ್ಟೇ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಈ ಕಾಂಕ್ರೀಟ್ ರಸ್ತೆಯು, ಕಲ್ಲಕ್ಕಿ ಎಸ್ಟೇಟ್‌ನಿಂದ ತಂದ ಮರ ಹಾಗೂ ಟಿಂಬರ್ ಸಾಗಣೆ ಮಾಡುವ ಭಾರೀ ತೂಕದ ಲಾರಿಗಳಿಂದಾಗಿ ಬಿರುಕು ಬಿಟ್ಟು ಸಂಪೂರ್ಣವಾಗಿ ಕುಸಿದುಬಿದ್ದಿದೆ.



​ಲಾರಿ ತಡೆದು ಗ್ರಾಮಸ್ಥರ *ಪ್ರತಿಭಟನೆ:* ರಸ್ತೆ ತೀವ್ರವಾಗಿ ಹಾನಿಗೊಳಗಾಗಿದ್ದರಿಂದ ಆಕ್ರೋಶಗೊಂಡ ಬಾಳೂರು ಮತ್ತು ಕಲ್ಲಕ್ಕಿ ಭಾಗದ ಗ್ರಾಮಸ್ಥರು, ಅತಿಯಾದ ಮರ ತುಂಬಿಕೊಂಡು ಸಂಚರಿಸುತ್ತಿದ್ದ ಲಾರಿಯನ್ನು ಮಾರ್ಗಮಧ್ಯದಲ್ಲೇ ತಡೆದು ನಿಲ್ಲಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
​”ಮಳೆಗಾಲದ ಸಮಯದಲ್ಲಿ ಇಷ್ಟೊಂದು ಹೆವಿ ಲೋಡ್ ಹೊತ್ತ ಲಾರಿಗಳು ಸಂಚರಿಸಿದರೆ ಯಾವುದೇ ರಸ್ತೆಯೂ ಉಳಿಯುವುದಿಲ್ಲ. ದುರಸ್ತಿಯಾದ ರಸ್ತೆಯು ಸಂಪೂರ್ಣ ಹಾಳಾಗಿದ್ದು, ಇನ್ನು ಕೆಲವೇ ದಿನಗಳಲ್ಲಿ ರಸ್ತೆ ಸಂಪರ್ಕವೇ ಕಡಿತಗೊಳ್ಳುವ ಭೀತಿ ಎದುರಾಗಿದೆ. ತಕ್ಷಣವೇ ಸಂಬಂಧಪಟ್ಟ ಇಲಾಖಾಧಿಕಾರಿಗಳು, ಎಸ್ಟೇಟ್ ಹಾಗೂ ಟಿಂಬರ್ ಮಾಲೀಕರು ಮಧ್ಯಪ್ರವೇಶಿಸಿ, ರಸ್ತೆಗೆ ಆಗಿರುವ ಹಾನಿಗೆ ಸೂಕ್ತ ಪರಿಹಾರ ನೀಡಿ ತಕ್ಷಣ ರಸ್ತೆ ದುರಸ್ತಿ ಮಾಡಿಸಿಕೊಡಬೇಕು.” ಸ್ಥಳೀಯ ಗ್ರಾಮಸ್ಥರು
​ಮಳೆಗಾಲದಲ್ಲಿ ಗ್ರಾಮೀಣ ಭಾಗಕ್ಕೆ ರಸ್ತೆ ಸಂಪರ್ಕ ಸಿಗುವುದೇ ಕಷ್ಟವಾಗಿರುವಾಗ, ಈ ರೀತಿ ಬೇಜವಾಬ್ದಾರಿಯಿಂದ ರಸ್ತೆ ಹಾಳುಮಾಡುತ್ತಿರುವುದಕ್ಕೆ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಇಲಾಖೆಯು ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು