11:20 AM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ 3 ಮಂದಿ ಸ್ಥಳದಲ್ಲೇ ಸಾವು; ಓರ್ವ ಗಂಭೀರ ಗಾಯ

29/01/2025, 19:05

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು- ಗುಂಡ್ಲುಪೇಟೆ ರಾಷ್ಟ್ರೀಯ ಹೆದ್ದಾರಿ 766 ರಲ್ಲಿ ರಸ್ತೆ ಅಪಘಾತಗಳು ಹೆಚ್ಚುತ್ತಿದ್ದು ನಂಜನಗೂಡು ಹಾಗೂ ಗುಂಡ್ಲುಪೇಟೆ ಹೆದ್ದಾರಿ ಹಿರೀಕಾಟಿ ಗೇಟ್ ಬಳಿ ಮಂಗಳವಾರ ರಾತ್ರಿ ನಡೆದ
ಭೀಕರ ರಸ್ತೆ ಅಪಘಾತದಲ್ಲಿ ಅಪಘಾತದಲ್ಲಿ ಒಂದೇ ಕುಟುಂಬದ ಮೂರು ಮಂದಿ ಸ್ಥಳದಲ್ಲೇ ದಾರುಣ ಸಾವನ್ನಪ್ಪಿ ಮತ್ತೊಬ್ಬರು ತೀವ್ರ ಗಾಯಗೊಂಡಿದ್ದಾರೆ.
ನಂಜನಗೂಡು ತಾಲೂಕಿನ ಕೂಡ್ಲಾಪುರ ಗ್ರಾಮದ ಶಶಿಧರ ಆತನ ಪತ್ನಿ ಶಾಲಿನಿ ತಾಯಿ ಭಾಗ್ಯಮ್ಮ ಒಂದೇ ಕುಟುಂಬದ ಮೃತ ದುರ್ದೈವಿಗಳಾಗಿದ್ದು ಓರ್ವನ ಹೆಸರು ತಿಳಿದು ಬಂದಿಲ್ಲ. ಮೃತರು ಸರಗೂರು ತಾಲೂಕಿನ ಪುಣ್ಯ ಕ್ಷೇತ್ರ ಚಿಕ್ಕದೇವಮ್ಮನ ಬೆಟ್ಟದಿಂದ ಪೂಜಾ ಕಾರ್ಯಕ್ರಮ ಮುಗಿಸಿಕೊಂಡು ಎರಡು ಬೈಕುಗಳಲ್ಲಿ ಕೂಡ್ಲಾಪುರಕ್ಕೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.
ತೆರಳುವ ಮಾರ್ಗ ಮಧ್ಯೆ ಹಿರೀಕಾಟಿ ಬಳಿ ನಂಜನಗೂಡಿನಿಂದ ಗುಂಡ್ಲುಪೇಟೆ ಕಡೆ ತೆರಳುತ್ತಿದ್ದ ಕಾರೊಂದು ಎರಡು ಬೈಕ್ ಗಳಿಗೂ ಡಿಕ್ಕಿ ಹೊಡೆದ ಪರಿಣಾಮವಾಗಿ ಭೀಕರ ಅಪಘಾತದಲ್ಲಿ ಮೂರು ಮಂದಿ ಸ್ಥಳದಲ್ಲೇ ಮೃತಪಟ್ಟಿರುತ್ತಾರೆ.
ಮತ್ತೋರ್ವ ವ್ಯಕ್ತಿಗೆ ಗಾಯವಾಗಿದ್ದು ಬೇಗೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಅಪಘಾತ ಸ್ಥಳದಿಂದ ಚಾಲಕರು ಕಾರು ಬಿಟ್ಟು ಪರಾರಿಯಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಬೇಗೂರು ಠಾಣೆಯ ಪೊಲೀಸ್ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಕಾರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ
ಮೃತಪಟ್ಟ ಶಶಿಧರ ಮತ್ತು ಶಾಲಿನಿ ಅವರಿಗೆ ಕಳೆದ ವರ್ಷವಷ್ಟೇ ಮದುವೆಯಾಗಿತ್ತು ಎಂದು ಹೇಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು