12:35 AM Wednesday4 - December 2024
ಬ್ರೇಕಿಂಗ್ ನ್ಯೂಸ್
ದತ್ತ ಜಯಂತಿ ಹಿನ್ನೆಲೆ: ಡಿ.11ರಿಂದ 14 ವರೆಗೆ ಮುಳ್ಳಯ್ಯನಗಿರಿ, ದತ್ತಪೀಠ, ಮಾಣಿಕ್ಯಧಾರ ಪ್ರವೇಶಕ್ಕೆ… ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವಕ್ಕೆ 3 ದಶಕಗಳ ಮೆರುಗು: ಡಿ.10ರಿಂದ 15ರ ವರೆಗೆ ಆಳ್ವಾಸ್… ಕೇರಳದಲ್ಲಿ ಭೀಕರ ರಸ್ತೆ ಅಪಘಾತ: 5 ಮಂದಿ ವೈದ್ಯಕೀಯ ವಿದ್ಯಾರ್ಥಿಗಳ ದಾರುಣ ಸಾವು ಫೆಂಗಲ್ ಎಫೆಕ್ಟ್: ಬೆಂಗಳೂರಿನಲ್ಲಿ ಸಾಧಾರಣ ಮಳೆ; ಎಂದಿನಂತೆ ತೆರೆದುಕೊಂಡ ಶಾಲಾ- ಕಾಲೇಜು ಕೂಡ್ಲಿಗಿ: ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರ ಬಂಧನ; ಸಾಮಗ್ರಿ ಜಪ್ತಿ ಮಲೆನಾಡಲ್ಲಿ ಫೆಂಗಲ್ ಅಬ್ಬರ: ಮೂಡಿಗೆರೆ ತಾಲೂಕಿನಲ್ಲಿ ಭಾರೀ ಮಳೆ; ಕಾಫಿ ಬೆಳೆಗಾರರು ಕಂಗಾಲು ತುಮಕೂರು: ಭೀಕರ ರಸ್ತೆ ಅಪಘಾತ; 3 ಮಂದಿ ಮಹಿಳೆಯರ ದಾರುಣ ಸಾವು ಜೀ ಕನ್ನಡ ಡ್ರಾಮಾ ಜೂನಿಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರಗೆ ಮುಖ್ಯಮಂತ್ರಿ ಮೆಚ್ಚುಗೆ ಫೆಂಗಲ್ ಚಂಡಮಾರುತ: ದ.ಕ., ಉಡುಪಿ ಜಿಲ್ಲೆಯ ಶಾಲೆ ಹಾಗೂ ಪಿಯು ಕಾಲೇಜಿಗಳಿಗೆ ನಾಳೆ… ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ವೈಭವದ ಲಕ್ಷದೀಪೋತ್ಸವ ಸಂಪನ್ನ: ದಾಖಲೆ ಸಂಖ್ಯೆಯಲ್ಲಿ ನೆರೆದ…

ಇತ್ತೀಚಿನ ಸುದ್ದಿ

ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ತುಳು ಸಿನಿಮಾಕ್ಕೆ ಮುಹೂರ್ತ: ಒಂದೇ ಹಂತದಲ್ಲಿ ಚಿತ್ರೀಕರಣ

26/10/2024, 19:00

ಮಂಗಳೂರು(reporterkarnataka.com): ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಜೈ ತುಳು ಸಿನಿಮಾದ ಮುಹೂರ್ತ ಸಮಾರಂಭ ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಿತು. ಶರವು ರಾಘವೇಂದ್ರ ಶಾಸ್ತ್ರೀ ಕ್ಲಾಪ್ ಮಾಡಿ ಸಿನಿಮಾಕ್ಕೆ ಶುಭ ಹಾರೈಸಿದರು.
ಸಮಾರಂಭದಲ್ಲಿ ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ್, ತಾರಾನಾಥ ಶೆಟ್ಟಿ ಬೋಳಾರ್, ಮಂಜುನಾಥ ಅತ್ತಾವರ, ಬಾಳ ಜಗನ್ನಾಥ ಶೆಟ್ಟಿ, ನವೀನ್ ಶೆಟ್ಟಿ ಆರ್ಯನ್ಸ್ ಮೊದಲಾದವರು ಉಪಸ್ಥಿತರಿದ್ದರು.
ಗಿರಿಗಿಟ್, ಗಮ್ಜಾಲ್, ಸರ್ಕಸ್ ಚಿತ್ರಗಳ ಯಶಸ್ಸಿನ ಬಳಿಕ ರೂಪೇಶ್ ಶೆಟ್ಟಿ ಅವರು ಮತ್ತೊಂದು ಬಿಗ್ ಬಜೆಟ್ ನ ಸಿನಿಮಾಕ್ಕೆ ಕೈ ಹಾಕಿದ್ದಾರೆ. ಜೈ ಸಿನಿಮಾ ಆರ್ ಎಸ್ ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗುತ್ತಿದೆ.

ರೂಪೇಶ್ ಶೆಟ್ಟಿ ಸಿನಿಮಾದ ನಿರ್ದೇಶಕರಾಗಿದ್ದು, ಕತೆ ಹಾಗೂ ಸಂಭಾಷಣೆಯನ್ನು ಪ್ರಸನ್ನ ಶೆಟ್ಟಿ ಬೈಲೂರು ಬರೆದಿದ್ದಾರೆ. ಕ್ಯಾಮರಾ ವಿನುತ್ ಕೆ, ಸಂಗೀತ ಲೊಯ್ ವೆಲೆಂಟಿನ್ ಸಲ್ದಾನ, ಸಂಕಲನ ರಾಹುಲ್ ವಸಿಷ್ಠ, ನಿರ್ಮಾಪಕರು ಅನಿಲ್ ಶೆಟ್ಟಿ, ಸುಧಾಕರ ಶೆಟ್ಟಿ ಮುಗ್ರೋಡಿ, ಮಂಜುನಾಥ ಅತ್ತಾವರ, ಸಹ ನಿರ್ಮಾಪಕರು ದೀಕ್ಷಿತ್ ಆಳ್ವ, ನೃತ್ಯ ಹಾಗೂ ಎಕ್ಸಿಕ್ಯೂಟಿವ್ ಪ್ರೊಡ್ಯುಸರ್ ನವೀನ್ ಶೆಟ್ಟಿ ಆರ್ಯನ್ಸ್.
“‘ಜೈ ಸಿನಿಮಾದಲ್ಲಿ ದೇವದಾಸ್ ಕಾಪಿಕಾಡ್, ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಉಮೇಶ್ ಮಿಜಾರ್, ಮೊದಲಾದವರು ಅಭಿನಯಿಸಲಿದ್ದಾರೆ.
ಸಿನಿಮಾಕ್ಕೆ ಒಂದೇ ಹಂತದಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ನಟ, ನಿರ್ದೇಶಕ ರೂಪೇಶ್ ಶೆಟ್ಟಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು