2:31 PM Friday11 - April 2025
ಬ್ರೇಕಿಂಗ್ ನ್ಯೂಸ್
ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:… Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್…

ಇತ್ತೀಚಿನ ಸುದ್ದಿ

ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸಿರಿಧಾನ್ಯ ಸಹಕಾರಿ: ಬೆಳಗಾವಿ ಅಂತಾರಾಷ್ಟ್ರೀಯ ಸಾವಯವ ಮೇಳದಲ್ಲಿ ಸಿಎಂ ಸಿದ್ದರಾಮಯ್ಯ

13/12/2024, 18:23

ಬೆಳಗಾವಿ (reporterkarnataka.com): ಜನರಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಹಾಗೂ ಸಕ್ಕರೆ ಕಾಯಿಲೆಯನ್ನು ನಿಯಂತ್ರಿಸಲು ಸಿರಿಧಾನ್ಯದ ಬಳಕೆ ಸಹಕಾರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಬೆಳಗಾವಿ ಸುವರ್ಣಸೌಧದಲ್ಲಿ ಅಂತಾರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳದ ಪೂರ್ವಭಾವಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿರಿಧಾನ್ಯದಲ್ಲಿ ಪ್ರೊಟೀನ್ ಹಾಗೂ ನಾರಿನ ಅಂಶ ಹೆಚ್ಚಾಗಿದ್ದು, ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸಿರಿಧಾನ್ಯ ಕೃಷಿಯನ್ನು ತೊಡಗಿಕೊಳ್ಳಬೇಕು ಎಂದರು.
ದೇಶದಲ್ಲಿ ಕರ್ನಾಟಕ ರಾಜ್ಯ ಸಿರಿಧಾನ ಉತ್ಪಾದನೆಯಲ್ಲಿ ಮೂರನೇ ಸ್ಥಾನದಲ್ಲಿದೆ. ಸುಮಾರು 18.38 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 22.16 ಲಕ್ಷ ಟನ್ ಗಳಷ್ಟು ಸಿರಿಧಾನ್ಯವನ್ನು ರಾಜ್ಯದಲ್ಲಿ ಬೆಳೆಯಲಾಗುತ್ತಿದೆ ಎಂದು ತಿಳಿಸಿದರು.
ದೇಶ ವಿದೇಶಗಳಲ್ಲಿ ಸಿರಿಧಾನ್ಯಗಳ ಬೇಡಿಕೆ ಹೆಚ್ಚಾಗುತ್ತಿದ್ದು, ವಿಶ್ವದಲ್ಲಿ 903.61 ಲಕ್ಷ ಟನ್ ಗಳಷ್ಟು ಸಿರಿಧಾನ್ಯವನ್ನು ಬೆಳೆಯಲಾಗುತ್ತಿದೆ. ಭಾರತದಲ್ಲಿ 31.50 ರಷ್ಟು ಸಿರಿಧಾನ್ಯವನ್ನು
ಬೆಳೆಯುತ್ತಿದ್ದು, ವಿಶ್ವದಲ್ಲಿ ಅತ್ಯಂತ ಹೆಚ್ಚು ಸಿರಿಧಾನ್ಯ ಬೆಳೆಯುವ ದೇಶವಾಗಿದೆ ಎಂದರು.


ಬೆಂಗಳೂರಿನ ನಗರದ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಅಂತರರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳವನ್ನು ಡಿಸೆಂಬರ್ 23, 24 ಮತ್ತು 25 ರಂದು ಹಮ್ಮಿಕೊಳ್ಳಲಾಗಿದ್ದು, ಮೇಳದ ಪೂರ್ವಭಾವಿ ಕಾರ್ಯಕ್ರಮಕ್ಕೆ ಚಾಲನೆ ನೀಡಿರುವುದಾಗಿ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ, ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಡಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಅರಣ್ಯ ಸಚಿವ ಈಶ್ವರ ಖಂಡ್ರೆ, ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು, ಮಾಜಿ ಸಚಿವ ಆರ್.ವಿ. ದೇಶಪಾಂಡೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು