5:18 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ರೋಗ ಪತ್ತೆ ಶೀಘ್ರವಾಗಿ ಮಾಡಿದಲ್ಲಿ ಕ್ಯಾನ್ಸರ್ ಕಾಯಿಲೆ ಗುಣಪಡಿಸಲು ಸಾಧ್ಯ: ಕಸ್ತೂರಬಾ ಮೆಡಿಕಲ್ ಕಾಲೇಜಿನ ಡಾ.ಪ್ರಶಾಂತ್ ಬಿ.

25/07/2022, 22:13

ಮಂಗಳೂರು(reporterkarnataka.com): ಕ್ಯಾನ್ಸರ್ ಗುಣಪಡಿಸಲಾರದ ರೋಗವೇನೂ ಅಲ್ಲ. ರೋಗ ಪತ್ತೆ ಶೀಘ್ರವಾಗಿ ಮಾಡಿದಲ್ಲಿ ಕ್ಯಾನ್ಸರ್ ಕಾಯಿಲೆಯನ್ನು ಗುಣಪಡಿಸಲು ಸಾಧ್ಯ ಎಂದು ಕಸ್ತೂರಬಾ ಮೆಡಿಕಲ್ ಕಾಲೇಜಿನ ಡಾ.ಪ್ರಶಾಂತ್ ಬಿ.ಹೇಳಿದರು.

ಅವರು ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಕದ್ರಿಯ ಲಯನ್ಸ್ ಕ್ಲಬ್ ಜಂಟಿಯಾಗಿ ಆಯೋಜಿಸಿದ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.

ಕುಳಿತೇ ಇರುವ ಜೀವನ ಶೈಲಿ, ವಿಟಮಿನ್ , ಜೀವಸತ್ವಗಳ ಕೊರತೆ, ದುರ್ಬಲವಾದ ರೋಗನಿರೋಧಕ ಶಕ್ತಿ , ಅನುವಂಶೀಯತೆ – ಹೀಗೆ ಹಲವು ಕಾರಣಗಳಿಂದ ಕ್ಯಾನ್ಸರ್ ಬರಲು ಸಾಧ್ಯವಿದೆ. ಆದಷ್ಟು ಹೊರಗಿನ ಆಹಾರಗಳಿಗೆ ಮೊರೆ ಹೋಗದೆ, ಪೌಷ್ಟಿಕಾಹಾರ ಸೇವನೆ, ಲಘು ವ್ಯಾಯಾಮ, ಒಂದಷ್ಟು ನಡಿಗೆ- ಹೀಗೆ ಜೀವನಶೈಲಿ ಯನ್ನು ಬದಲಿಸಿಕೊಂಡಲ್ಲಿ ಕ್ಯಾನ್ಸರ್ ನ್ನು ತಡೆಯಲು ಸಾಧ್ಯ ಎಂದು ಅವರು ಹೇಳಿದರು.

ಕ್ಯಾನ್ಸರ್ ನ ಗುಣಲಕ್ಷಣಗಳು, ಅದರ ಚಿಕಿತ್ಸೆ, ತಡೆಗಟ್ಟುವ ಬಗೆ ಇತ್ಯಾದಿಗಳ ಬಗ್ಗೆ ಸವಿವರವಾದ ಮಾಹಿತಿಗಳನ್ನು ನೀಡುವುದರ ಮೂಲಕ ವಿದ್ಯಾರ್ಥಿಗಳಲ್ಲಿ ಜಾಗೃತಿಯನ್ನು ಮೂಡಿಸಿದರು.

ಕೆನರಾ ಕಾಲೇಜಿನ ರಾ.ಸೇ.ಯೋ.ಅಧಿಕಾರಿಗಳಾದ ಸೀಮಾ ಪ್ರಭು,ವಾಣಿ ಯು.ಎಸ್. ಹಾಗೂ ಕದ್ರಿ ಲಯನ್ಸ್ ಕ್ಲಬ್ ನ ಅಧ್ಯಕ್ಷೆ ಸುಮಿತ್ರಾ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. 

ಲಯನ್ ಶ್ರೀಧರ್, ಲಯನ್ ರಿತೇಶ್ ರಾವ್, ಲಯನ್ ಸತೀಶನ್, ಲಯನ್ ಪ್ರಶಾಂತ್ ಪೈ,ಲಯನ್ ಅಶೋಕ್ ಕಾಮತ್, ಲಯನ್ ವಿದ್ಯಾ ಕಾಮತ್ ಕಾರ್ಯಕ್ರಮದಲ್ಲಿ  ಉಪಸ್ಥಿತರಿದ್ದರು.


ಅಭಿನ್ ಬಂಗೇರ ಸ್ವಾಗತಿಸಿದರು.ಪ್ರತೀಶ್ ಮಲ್ಲಿ ವಂದಿಸಿದರು.ಶರಣ್ಯ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು