8:44 PM Wednesday14 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ಮಂಗಳೂರಿನ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ರೋಹನ್ ಕಾರ್ಪೊರೇಷನ್‌ಗೆ 32 ವರ್ಷಗಳ ಸಂಭ್ರಮ

14/01/2026, 20:02

ಮಂಗಳೂರು(reporterkarnataka.com): ಮಂಗಳೂರಿನ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಷನ್ ತನ್ನ ಯಶಸ್ವಿ ಸೇವೆಯ 32 ವರ್ಷಗಳನ್ನು ಪೂರ್ಣಗೊಳಿಸಿದೆ. 1994ರಲ್ಲಿ ರೋಹನ್ ಮೊಂತೆರೊ ಅವರು ಸ್ಥಾಪಿಸಿದ ಈ ಸಂಸ್ಥೆ, ಇಂದು ಮಂಗಳೂರಿನ ಅತ್ಯಂತ ವಿಶ್ವಾಸಾರ್ಹ ಮತ್ತು ಗೌರವಾನ್ವಿತ ರಿಯಲ್ ಎಸ್ಟೇಟ್ ಕಂಪನಿಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ.

ಕಳೆದ ಮೂರು ದಶಕಗಳಲ್ಲಿ ರೋಹನ್ ಕಾರ್ಪೊರೇಷನ್ ಒಟ್ಟು 25 ಯೋಜನೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ಪ್ರಸ್ತುತ 12 ಯೋಜನೆಗಳು ವಿವಿಧ ಹಂತಗಳಲ್ಲಿ ನಿರ್ಮಾಣದಲ್ಲಿವೆ. ಅಲ್ಲದೆ, 16 ಹೊಸ ಯೋಜನೆಗಳು ಪ್ರಸ್ತುತ ನಿರ್ಮಾಣದ ಹಂತದಲ್ಲಿವೆ. ವಸತಿ ಹಾಗೂ ವಾಣಿಜ್ಯ ಕ್ಷೇತ್ರಗಳನ್ನು ಒಳಗೊಂಡ ಈ ಯೋಜನೆಗಳು ಮಂಗಳೂರಿನ ನಗರಾಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿವೆ.
ಈ ಸಂದರ್ಭದಲ್ಲಿ ಮಾತನಾಡಿದ ವ್ಯವಸ್ಥಾಪಕ ನಿರ್ದೇಶಕ ರೋಹನ್ ಮೊಂತೆರೊ ರವರು,
“ಮಂಗಳೂರಿನ ಬೆಳವಣಿಗೆಯಲ್ಲಿ ಸಾಧ್ಯವಾದಷ್ಟು ಕೊಡುಗೆ ನೀಡಲು ನಮಗೆ ಅವಕಾಶ ದೊರೆತಿರುವುದು ಅಪಾರ ಹೆಮ್ಮೆಯ ವಿಷಯ. ಈ 32 ವರ್ಷದ ಪಯಣ ಅತ್ಯಂತ ತೃಪ್ತಿದಾಯಕವಾಗಿದೆ. ವರ್ಷಗಳ ಕಾಲ ನಮ್ಮೊಂದಿಗೆ ನಿಂತು ಬೆಂಬಲಿಸಿದ ಗ್ರಾಹಕರು, ಪಾಲುದಾರರು ಮತ್ತು ಸಿಬ್ಬಂದಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ” ಎಂದು ಹೇಳಿದರು.
ನಿರ್ದೇಶಕ ಡಿಯಾನ್ ಮೊಂತೆರೊ ಅವರು ಮಾತನಾಡಿ,
“32 ವರ್ಷಗಳನ್ನು ಪೂರೈಸಿರುವುದು ಕೇವಲ ಒಂದು ಸಂಸ್ಥೆಯ ಸಾಧನೆಯಷ್ಟೇ ಅಲ್ಲ; ಇದು ನಮ್ಮ ಗ್ರಾಹಕರು, ಪಾಲುದಾರರು ಹಾಗೂ ಸಿಬ್ಬಂದಿಯ ನಮ್ಮ ಮೇಲಿನ ವಿಶ್ವಾಸದ ಪ್ರತಿಬಿಂಬವಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹೊಣೆಗಾರಿಕೆ, ಗುಣಮಟ್ಟ ಮತ್ತು ಮೌಲ್ಯಗಳೊಂದಿಗೆ ಕಾರ್ಯನಿರ್ವಹಿಸುವ ಸಂಕಲ್ಪ ನಮ್ಮದು” ಎಂದು ತಿಳಿಸಿದರು.
ಗುಣಮಟ್ಟ ಮತ್ತು ವಿಶ್ವಾಸಾರ್ಹತೆಯನ್ನು ಮೂಲಮಂತ್ರವಾಗಿಸಿಕೊಂಡು ಮುಂದುವರಿಯುತ್ತಿರುವ ರೋಹನ್ ಕಾರ್ಪೊರೇಷನ್, ಮಂಗಳೂರಿನ ನಗರಾಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು