7:44 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ರೋಹನ್ ಕಾರ್ಪೊರೇಶನ್: ಮಂಗಳೂರು ಮಹಾನಗರ ಪಾಲಿಕೆಯ ಪೌರ ಕಾರ್ಮಿಕರಿಗೆ ಸುರಕ್ಷತಾ ಪಾದರಕ್ಷೆಗಳ ವಿತರಣೆ

29/09/2025, 18:46

ಮಂಗಳೂರು(reporterkarnataka.com): ಮಂಗಳೂರಿನ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಕಂಪನಿ ರೋಹನ್ ಕಾರ್ಪೊರೇಶನ್ ಪೌರ ಕಾರ್ಮಿಕರ ಆರೋಗ್ಯ ಮತ್ತು ಸುರಕ್ಷತೆಯನ್ನು ಕಾಳಜಿ ವಹಿಸುವ ಉದ್ದೇಶದಿಂದ, ಸೆಪ್ಟೆಂಬರ್ 29 ರಂದು ಮಂಗಳೂರು ಮಹಾನಗರ ಪಾಲಿಕೆಗೆ 100 ಜೋಡಿ ಸುರಕ್ಷತಾ ಪಾದರಕ್ಷೆಗಳನ್ನು ವಿತರಣೆ ಮಾಡುವ ಮೂಲಕ ಸಾಮಾಜಿಕ ಕಾರ್ಯವನ್ನು ಹಮ್ಮಿಕೊಂಡಿತು.
ಈ ಕಾರ್ಯಕ್ರಮವು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾದ ರವಿಚಂದ್ರ ನಾಯಕ್ ಉಪಸ್ಥಿತರಿದ್ದರು. ರೋಹನ್ ಕಾರ್ಪೊರೇಶನ್ ಮಾರ್ಕೆಟಿಂಗ್ ಮ್ಯಾನೇಜರ್ ಮಾಕ್ಷಿಮ್ ಲೋಬೊ ಕಾರ್ಮಿಕರಿಗೆ ಪಾದರಕ್ಷೆಗಳನ್ನು ಹಸ್ತಾಂತರಿಸಿದರು.
“ಪೌರ ಕಾರ್ಮಿಕರು ನಮ್ಮ ಸಮಾಜದ ಬೆನ್ನೆಲುಬು. ಅವರ ಶ್ರಮದಿಂದಲೇ ನಗರ ಸ್ವಚ್ಛವಾಗಿರುತ್ತದೆ. ಅವರ ಸುರಕ್ಷತೆಗಾಗಿ ನಾವು ಕೈಗೊಂಡಿರುವ ಈ ಉಪಕ್ರಮ ನಮ್ಮ ಸಾಮಾಜಿಕ ಜವಾಬ್ದಾರಿಯ ಭಾಗವಾಗಿದೆ” ಎಂದು ರೋಹನ್ ಕಾರ್ಪೊರೇಶನ್ ಮಾರ್ಕೆಟಿಂಗ್ ಮ್ಯಾನೇಜರ್ ಮಾಕ್ಷಿಮ್ ಲೋಬೊ ಹೇಳಿದರು.
ಮಹಾ ನಗರ ಪಾಲಿಕೆ ಆಯುಕ್ತರು ಈ ಸಂದರ್ಭದಲ್ಲಿ, ಪೌರ ಕಾರ್ಮಿಕರ ಸುರಕ್ಷತೆಯ ಕಡೆ ಗಮನ ಹರಿಸಿರುವ ರೋಹನ್ ಕಾರ್ಪೊರೇಶನ್ ನ ಸಮಾಜಮುಖಿ ಕಾರ್ಯವನ್ನು ಮೆಚ್ಚಿ, ಮುಂದೆಯೂ ಇಂತಹ ಸಮಾಜಮುಖಿ ಕಾರ್ಯಗಳು ನಡೆಯಲಿ ಎಂದು ಹಾರೈಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು