1:41 PM Tuesday6 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಬಾಗಲಕೋಟೆ ಮುಗಳೊಳ್ಳಿ ತಾಂಡಾ ಸರಕಾರಿ ಶಾಲೆ ಛಾವಣಿ ಕುಸಿತ: ಅದೃಷ್ಟವಶಾತ್ ಎಲ್ಲ ಮಕ್ಕಳು ಸುರಕ್ಷಿತ

02/09/2026, 20:19

ಬಾಗಲಕೋಟೆ(reporterkarnataka.com): ​ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ತಾಂಡಾದ ಸರ್ಕಾರಿ ಶಾಲೆಯಲ್ಲಿ ಪಾಠ ಕೇಳುತ್ತಿದ್ದ ಮಕ್ಕಳ ಮೇಲೆ ಶಾಲೆಯ ಮೇಲ್ಚಾವಣಿಯ ಕಾಂಕ್ರೀಟ್ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಸಣ್ಣಪುಟ್ಟ ಗಾಯಗೊಂಡಿರುವ ವಿದ್ಯಾರ್ಥಿಗಳಿಗೆ ತಕ್ಷಣವೇ ಚಿಕಿತ್ಸೆ ಒದಗಿಸಲಾಗಿದೆ ಎಂದು ಬಾಗಲಕೋಟೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು (CEO) ತಿಳಿಸಿದ್ದಾರೆ.


*​ಮಕ್ಕಳು ಸುರಕ್ಷಿತ*: ಘಟನೆಯಲ್ಲಿ ಗಾಯಗೊಂಡಿರುವ ಆರೂ (06) ಮಕ್ಕಳು ಸಂಪೂರ್ಣ ಸುರಕ್ಷಿತವಾಗಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಒದಗಿಸಲಾಗುತ್ತಿದೆ.

*​ತಕ್ಷಣದ ರಿಪೇರಿಗೆ ಸೂಚನೆ*: ಶಾಲೆಯ ಕುಸಿದಿರುವ ಛಾವಣಿಯನ್ನು ತಕ್ಷಣವೇ ದುರಸ್ತಿಗೊಳಿಸಲು ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗಕ್ಕೆ (PRED) ಸ್ಪಷ್ಟ ನಿರ್ದೇಶನ ನೀಡಲಾಗಿದೆ.

*​ಸ್ಥಳದಲ್ಲಿ ಹಿರಿಯ ಅಧಿಕಾರಿಗಳು*: ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (DDPI) ಖುದ್ದಾಗಿ ಆಸ್ಪತ್ರೆಯಲ್ಲಿದ್ದು, ಮಕ್ಕಳ ಆರೋಗ್ಯ ಸ್ಥಿತಿ ಹಾಗೂ ಚಿಕಿತ್ಸೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.
​ಶಾಲೆ ಶಿಥಿಲಾವಸ್ಥೆಯಲ್ಲಿರುವುದನ್ನು ಗಮನಿಸಿರುವ ಪೋಷಕರು ಶಾಶ್ವತ ದುರಸ್ತಿ ಹಾಗೂ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದು, ಆಡಳಿತ ಮಂಡಳಿಯು ದುರಸ್ತಿ ಕಾರ್ಯವನ್ನು ತುರ್ತಾಗಿ ಪೂರ್ಣಗೊಳಿಸಲು ಕ್ರಮ ವಹಿಸುತ್ತಿದೆ ಎಂದು ಬಾಗಲಕೋಟೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ ಗಜಾನನ ಬಾಲೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು