ಇತ್ತೀಚಿನ ಸುದ್ದಿ
ಆರೆಸ್ಸೆಸ್ ಬಗ್ಗೆ ಮಾತನಾಡುವ ನೈತಿಕ ಹಕ್ಕು ಸಿದ್ದರಾಮಯ್ಯರಿಗಿಲ್ಲ: ಮಹಾಂತೇಶ್ ಕವಟಗಿಮಠ
29/09/2021, 15:59
ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com
ಜಾತಿ-ಜಾತಿ, ಧರ್ಮ-ಧರ್ಮದ ನಡುವೆ ದ್ವೇಷವನ್ನು ಹುಟ್ಟುಹಾಕುವ ಕಾರ್ಯ ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ. ಆರೆಸ್ಸೆಸ್ ಬಗ್ಗೆ ಮಾತನಾಡುವ ನೈತಿಕ ಹಕ್ಕು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಮಾಂತೇಶ್ ಕವಟಗಿಮಠ ಹೇಳಿದರು.
ಅವರು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಕಾಗವಾಡ ಶಾಸಕ ಜತೆಗೂಡಿ ಉದ್ಘಾಟನೆ ನೆರವೇರಿಸಿ ನಂತರ ಮಾದ್ಯಮ ಜತೆ ಮಾತನಾಡಿದರು.
ಇತ್ತಿಚಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರ್ ಎಸ್ ಎಸ್ ನಡುವಳಿಕೆ ತಾಲಿಬಾನಿಗಳ ತರ ಎಂದು ಆರೋಪಿಸಿದರು. ಇದಕ್ಕೆ ಮಹಾಂತೇಶ ಕವಟಗಿಮಠ ಪ್ರತಿಕ್ರಿಯೆ ನೀಡಿ ಮಾತನಾಡಿ, ದೇಶದಲ್ಲಿ ಹಿಂದು ಪರವಾಗಿ ಇರುವ ಪಕ್ಷ ಅಂದ್ರೆ ಭಾರತಿ ಜನತಾ ಪಕ್ಷ, ಭಾರತ ದೇಶ ಅಖಂಡವಾಗಿರುವ ಹಿಂದೂ ದೇಶ, ಇಲ್ಲಿರುವ ಎಲ್ಲಾ ರಾಷ್ಟ್ರೀಯ ಜನರು ಸೌಹಾರ್ದತೆಯಿಂದ ಬದುಕಬೇಕೆಂಬುದು ಪಕ್ಷದ ಉದ್ದೇಶ. ಆದರೆ ಕಾಂಗ್ರೆಸ್ ಪಕ್ಷ ಮತ ಮತಗಳ ನಡುವೆ ಮತ್ತು ಧರ್ಮ ಧರ್ಮದ ನಡುವೆ ದ್ವೇಷವನ್ನು ಹುಟ್ಟುಹಾಕುವ ಪಕ್ಷ. ಆರ್ ಎಸ್ ಎಸ್ ಬಗ್ಗೆ ಮಾತನಾಡುವ ನೈತಿಕ ಹಕ್ಕು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಲ್ಲವೆಂದು ಖಾರವಾಗಿ ಪ್ರತಿಕ್ರಿಯಿಸಿದರು.
ಮಾಜಿ ಸಿಎಂ ಸಿದ್ದರಾಮಯ್ಯ ವೀರಶೈವ ಲಿಂಗಾಯತ ಧರ್ಮವನ್ನು ಒಡೆಯಲು ಹೋಗಿ ಅಧಿಕಾರ ಕಳೆದುಕೊಂಡರು. ಭಾರತಿಯ ಜನತಾ ಪಕ್ಷ ಎಲ್ಲರನ್ನೂ ಒಗ್ಗೂಡಿಸಿ ಸೌಹಾರ್ದತೆಯಿಂದ ಹಾಗೂ ವಿಶ್ವಾಸ ಹೊಂದಿರುವ ಪಕ್ಷ ಎಂದು ತಿಳಿಸಿದರು.
ಸಿಂದಗಿ ಹಾಗೂ ಹಾನಗಲ್ ವಿಧಾನಸಭೆ ಉಪ ಚುನಾವಣೆ ಎರಡು ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸುತ್ತದೆ ಎಂದ ಅವರು, ಕಾಗವಾಡ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಪರ್ವ ಸುರುವಾಗಿದೆ ಒಂದೇ ದಿನ ಒಂದೇ ಗ್ರಾಮದಲ್ಲಿ ೨೨ ಕಾಮಗಾರಿಗಾಗೆ ಚಾಲನೆ ನೀಡಲಾಗಿದೆ. ಇದು ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರ ಅಭಿವೃದ್ಧಿ ಪರ್ವ ಪ್ರಾರಂಭವಾಗಿದೆ ಎಂಬುದಕ್ಕೆ ಸಾಕ್ಷಿ ಎಂದರು.
ಇದೇ ಸಂದರ್ಭದಲ್ಲಿ ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಮಾತನಾಡಿ, ಎರಡು ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷ ಜಯಭೇರಿ ಬಾರಿಸುತ್ತದೆ ಎಂದು ಭವಿಷ್ಯ ನುಡಿದರು.














