3:30 PM Thursday11 - December 2025
ಬ್ರೇಕಿಂಗ್ ನ್ಯೂಸ್
ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ ರಾಜ್ಯದಲ್ಲಿ 37,48,700 ವಸತಿ ರಹಿತರು: ವಿಧಾನ ಪರಿಷತ್ ನಲ್ಲಿ ಸಚಿವ ಜಮೀರ್ ಖಾನ್ ಬೆಂಗಳೂರು ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಧರ್ಮ ಮತ್ತು ಸಂಸ್ಕೃತಿ ಅಧ್ಯಯನ ಕೇಂದ್ರ ಉದ್ಘಾಟನೆ ಬೆಂಗಳೂರು ನಗರದಲ್ಲಿ ಕ್ವಾಂಟಮ್ ಮೆಟೀರಿಯಲ್ಸ್ ನೆಟ್‌ವರ್ಕ್ (Q-MINt) ಸ್ಥಾಪಿಸಲು ಪ್ರಧಾನಿಗೆ ಸಿಎಂ ಪತ್ರ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನೆಗಳ ಸಮರ್ಪಕ ಜಾರಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೆಎಸ್ಸಾರ್ಟಿಸಿ ಬಸ್ ಪಲ್ಟಿ; ಶಾಲಾ ವಿದ್ಯಾರ್ಥಿಗಳು ಸೇರಿದಂತೆ 15 ಜನರಿಗೆ ಗಾಯ; ಕಂಡಕ್ಟರ್… ಸುವರ್ಣಸೌಧ ಮುತ್ತಿಗೆ ಹಾಕಲು ಯತ್ನ; ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿ ಪ್ರತಿಭಟನಾಕಾರರು ಪೊಲೀಸ್… ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ನೂತನ ಪ್ರಭಾರ ಅಧ್ಯಕ್ಷರಾಗಿ ಗೀತಾ ರಮೇಶ್ ಆಯ್ಕೆ

ಇತ್ತೀಚಿನ ಸುದ್ದಿ

ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

11/12/2025, 15:25

ನವದೆಹಲಿ(reporterkarnataka.com): “ಆರೆಸ್ಸೆಸ್ ಶಬ್ದ ಕೇಳಿದರೆ ಸಾಕು ಉರಿದುಬಿಡುತ್ತಿದ್ದ ಕಾಂಗ್ರೆಸ್ಸಿಗರಿಗೆ ಇದೀಗ ಅವರ ಸರ್ಕಾರದಿಂದಲೇ ತಕ್ಕ ಉತ್ತರ ಸಿಕ್ಕಿದೆ” ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ತಿರುಗೇಟು ಕೊಟ್ಟಿದ್ದಾರೆ.
ಕರ್ನಾಟಕದಲ್ಲಿ ಬೃಹತ್ತಾಗಿ 518 ಆರೆಸ್ಸೆಸ್ ಪಥಸಂಚಲನ ಕಾರ್ಯಕ್ರಮಗಳು ಅತ್ಯಂತ ಶಿಸ್ತುಬದ್ಧವಾಗಿ ಯಶಸ್ವಿಗೊಂಡಿವೆ. ಕಾಂಗ್ರೆಸ್ಸಿಗರು ಮಾಡಿದ ಅಪಪ್ರಚಾರಕ್ಕೆ ಇದು ತಕ್ಕ ಉತ್ತರವಾಗಿದೆ ಎಂದಿದ್ದಾರೆ ಜೋಶಿ.
ರಾಷ್ಟ್ರೀಯ ಸ್ವಯಂ ಸೇವಕರ ಪಥಸಂಚಲನಕ್ಕೆ ಅವಕಾಶ ಕೊಟ್ಟರೆ ಗದ್ದಲ, ಗಲಾಟೆ, ಕೋಮು ಗಲಭೆಗೆ ಕಾರಣವಾಗುತ್ತದೆ ಎಂದು ಕಾಂಗ್ರೆಸ್ ಅಪಪ್ರಚಾರ ಮಾಡುತ್ತಲೇ ಇತ್ತು. ಆದರೆ, ರಾಜ್ಯದಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಪಥಸಂಚಲನ ನಡೆಸಿದ್ದರೂ ಅಂತಹ ಯಾವುದೇ ಅಹಿತಕರ ವಾತಾವರಣ ಉಂಟಾಗಿಲ್ಲ ಎಂದು ಜೋಶಿ ನುಡಿದರು.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹೆಸರು ಕೇಳಿದರೆ ಸಾಕು ಕಾಂಗ್ರೆಸ್ ನಾಯಕರಿಗೆ ಮೈ ಉರಿಯುತ್ತದೆ. ಇಂಥವರಿಗೆ ಇದೀಗ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರವೇ ತಕ್ಕ ಉತ್ತರ ನೀಡಿದೆ‌ ಎಂದು ಕಾಂಗ್ರೆಸ್ ನಾಯಕರಿಗೆ ತುಸು ಜೋಶ್ ಆಗಿಯೇ ಟಾಂಗ್ ಕೊಟ್ಟಿದ್ದಾರೆ.
ಆರ್ ಎಸ್ ಎಸ್ ಸಂಘಟನೆಗೆ ಪಥಸಂಚಲನಕ್ಕೆ ಅನುಮತಿ ನೀಡಿದರೆ ಗಲಾಟೆ, ದೊಂಬಿ ಹಾಗೂ ಕೋಮು ಗಲಭೆಗಳಿಗೆ ದಾರಿಯಾಗುತ್ತದೆ‌ ಎಂಬ ಕಾಂಗ್ರೆಸ್ ನಾಯಕರ ಅಪಪ್ರಚಾರದ ನಡುವೆಯೂ ಧೃತಿಗೆಡದೆ ರಾಜ್ಯದಲ್ಲಿ ಬರೋಬ್ಬರಿ 518 ರಾಷ್ಟ್ರೀಯ ಪಥಸಂಚಲನ ಕಾರ್ಯಕ್ರಮಗಳನ್ನು ನಡೆಸಿದೆ. ಇದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶಿಸ್ತಿಗೆ ಪ್ರತೀಕವಾಗಿದೆ ಮತ್ತು ‘ದೇಶ ಮೊದಲು, ದೇಶ ಸೇವೆಯೇ ಪರಮೋಚ್ಚ’ ಎಂಬ ಆರ್ ಎಸ್ ಎಸ್ ಸಿದ್ಧಾಂತವನ್ನು ಮತ್ತಷ್ಟು ಬಲವಾಗಿ ಪ್ರತಿಪಾದಿಸಿದೆ ಎಂದು ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದ್ದಾರೆ.
ಕಾಂಗ್ರೆಸ್ಸಿಗರು ಇನ್ನಾದರೂ ಪಾಠ ಕಲಿಯಲಿ. ಆರೆಸ್ಸೆಸ್ ಯಾವತ್ತೂ ರಾಷ್ಟ್ರೀಯ ಹಿತಕ್ಕಾಗಿ ಇರುವಂಥ ಒಂದು ಶತು ಮತ್ತು ಜಾಗೃತೆಯ ಸಂಘಟನೆಯೇ ಹೊರತು ಕೋಮುವಾದ ಬಿತ್ತುವುದು ಅದರ ಕೆಲಸವಲ್ಲ. ದೇಶವನ್ನು ಜಾಗೃತಗೊಳಿಸುವುದೇ ಅದರ ಧ್ಯೇಯ ಮತ್ತು ಶಕ್ತಿ ಎಂಬುದನ್ನು ಅರಿತುಕೊಳ್ಳಲಿ ಎಂದು ಸಚಿವ ಜೋಶಿ ಕಾಂಗ್ರೆಸ್ ನಾಯಕರಿಗೆ ತಿವಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು