11:53 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದರೆ ಜೋಕೆ: ಪಾಲಿಕೆಯಿಂದ ದಂಡ ವಸೂಲು

24/08/2023, 13:49

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯೊಳಗೆ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ರಸ್ತೆ ಬದಿ ಎಲ್ಲೆಂದರಲ್ಲಿ ಸಾರ್ವಜನಿಕರು ತ್ಯಾಜ್ಯ ಎಸೆಯುತ್ತಿರುವುದರಿಂದ ನಗರದ ವಿವಿಧ ಸ್ಥಳಗಳಲ್ಲಿ ತ್ಯಾಜ್ಯಗಳ ಬ್ಲ್ಯಾಕ್ ಉಂಟಾಗಿ ನಗರದ ಸೌಂದರ್ಯಕ್ಕೆ ಹಾಗೂ ಸ್ವಚ್ಚತೆಗೆ ದಕ್ಕೆ ಉಂಟುಮಾಡುತ್ತಿದ್ದು, ಈ ರೀತಿಯ ಅನಧಿಕೃತ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಹಾಗೂ ಸೌಂದರ್ಯಕ್ಕೆ ಹಾಗೂ ಸ್ವಚ್ಚತೆಗೆ ದಕ್ಕೆ ತರುವವರ ವಿರುದ್ದ ದಂಡ ವಿಧಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಉದ್ದೇಶಿಸಲಾಗಿದೆ.
ಆದ್ದರಿಂದ ನಗರದ ಮಣ್ಣಗುಡ್ಡ ಪ್ರದೇಶದಲ್ಲಿ ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ರಾಶಿ ಹಾಕಿರುವವರ ಮೇಲೆ ಘನತ್ಯಾಜ್ಯ ನಿರ್ವಹಣೆ ಉಪವಿಧಿ ಉಲ್ಲಂಘನೆ ಪ್ರಕರಣದಡಿ 4,000 ರೂ.ಗಳ ದಂಡ ವಿಧಿಸಿ, ಮೊತ್ತ ವಸೂಲಿ ಮಾಡಲಾಗಿದೆ.
ಇನ್ನು ಮುಂದೆ ಈ ರೀತಿ ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದಿರುವುದು ಕಂಡು ಬಂದಲ್ಲಿ ಸಂಬಂಧಪಟ್ಟವರ ವಿರುದ್ದ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಿದ್ದು, ಈ ಬಗ್ಗೆ ಎಚ್ಚರ ವಹಿಸುವಂತೆ ಮಂಗಳೂರು ಮಹಾನಗರ ಪಾಲಿಕೆ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು