5:42 AM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಸಾವಿನಲ್ಲೂ ಧನ್ಯತೆ ಮೆರೆದ ಧನ್ಯಕುಮಾರ್: ಪುತ್ರ ಶೋಕದ ದು:ಖದಲ್ಲೂ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು

12/12/2022, 13:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸಬ್ಬೇನಹಳ್ಳಿ ಬಳಿ
ಕ್ಯಾಂಟರ್ ಡಿಕ್ಕಿಯಿಂದ ಧನ್ಯಕುಮಾರ್( 37)ಮೆದುಳು ಸಂಪೂರ್ಣ ನಿಷ್ಕ್ರಿಯಗೊಂಡಿತ್ತು.

ಎಷ್ಟೇ ಪ್ರಯತ್ನಪಟ್ಟರೂ ಬದುಕಿಸಲು ಸಾಧ್ಯವಾಗಲ್ಲ ಎಂದು ವೈದ್ಯರು ತಿಳಿಸಿದ್ದರು.ಆದರೆ ಧನ್ಯಕುಮಾರ್ ದೇಹದ ಇತರೆ ಭಾಗಗಳು ಸುರಕ್ಷಿತವಾಗಿವೆ ಎಂದು ವೈದ್ಯರು ನುಡಿದರು.
ವೈದ್ಯರ ಸಲಹೆ ಮೇರೆಗೆ ಅಂಗಾಂಗ ದಾನಕ್ಕೆ ಕುಟುಂಬಸ್ಥರು ಒಪ್ಪಿಕೊಂಡಿದ್ದಾರೆ.ಸದ್ಯ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಅಂಗಾಂಗ ದಾನ ಪ್ರಕ್ರಿಯೆ ನಡೆಯುತ್ತಿದೆ.


ಹೃದಯ, ಕಿಡ್ನಿ, ಲಿವರ್, ಕಣ್ಣು ಸೇರಿದಂತೆ ದೇಹದ ಪ್ರಮುಖ ಭಾಗಗಳ ಅಂಗಾಂಗ ದಾನ ಮಾಡಲಾಗುತ್ತಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೊರಟ್ಟಿ ಗ್ರಾಮದವರು ಧನ್ಯಕುಮಾರ್.

ಧನ್ಯ ಕುಮಾರ್ ಅವರು 4 ವರ್ಷದ ಮಗಳು, ಪತ್ನಿ, ತಂದೆ-ತಾಯಿಯನ್ನ ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು