1:36 PM Sunday13 - April 2025
ಬ್ರೇಕಿಂಗ್ ನ್ಯೂಸ್
DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,…

ಇತ್ತೀಚಿನ ಸುದ್ದಿ

ಶಬರಿಮಲೆ: ಪಂಬ ಸನ್ನಿಧಿಯಲ್ಲಿ ಕುಸಿದು ಬಿದ್ದು ಸೋಲಾಪುರ ಮೂಲದ ಬಂಟ್ವಾಳದ ಶಿಕ್ಷಕ ಸಾವು

11/04/2025, 17:14

ಬಂಟ್ವಾಳ(reporterkarnataka.com): ಅಯ್ಯಪ್ಪ ವ್ರತಧಾರಿಯಾಗಿ ಸ್ನೇಹಿತರ ಜೊತೆಗೆ ಶಬರಿಮಲೆ ಯಾತ್ರೆಗೆ ತೆರಳಿದ್ದ ಮುಖ್ಯ ಶಿಕ್ಷಕರೋರ್ವರು ಪಂಬ ಸನ್ನಿಧಿಯಲ್ಲಿ ಕುಸಿದು ಇಹಲೋಕ ತ್ಯಜಿಸಿದ್ದಾರೆ.
ಬಂಟ್ವಾಳ ತಾಲೂಕಿನ ಪಾಟ್ರಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕರಾಗಿದ್ದ ಉಮರಗಿ ಶರಣಪ್ಪ (57)ಅವರು ಅಯ್ಯಪ್ಪ ವ್ರತಧಾರಿಗಳ ಗುಂಪಿನಲ್ಲಿ ಬುಧವಾರ ಮುಂಜಾನೆ ಸುಮಾರು 6.30ರ ಹೊತ್ತಿಗೆ ದೇವರ ದರ್ಶನಕ್ಕೆ ಹೋಗುತ್ತಿದ್ದಾಗ ಕುಸಿದು ಬಿದ್ದಿದ್ದರು. ತಕ್ಷಣ ಜೊತೆಗಿದ್ದವರು ಪ್ರಥಮ ಚಿಕಿತ್ಸೆ ನೀಡಿ ಸ್ಥಳೀಯ ‌ಆಸ್ಪತ್ರೆಗೆ ಅಂಬುಲೆನ್ಸ್ ನಲ್ಲಿ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಲಾಯಿತಾದರೂ ಬಳಿಕ ಹೃದಯ ಸ್ಥಂಭನಗೊಂಡು ನಿಧನರಾದರು.
ಮೂಲತಃ ಕರ್ನಾಟಕ- ಮಹಾರಾಷ್ಟ್ರ ಗಡಿಪ್ರದೇಶದ ಸೋಲಾಪುರ ನಿವಾಸಿಯಾಗಿದ್ದು ಕಳೆದ 28 ವರ್ಷಗಳಿಂದ ಬಂಟ್ವಾಳ ತಾಲೂಕಿನ ನರಿಕೊಂಬುವಿನಲ್ಲಿ‌ ವಾಸವಾಗಿದ್ದರು.
ಬಿ.ಸಿ.ರೋಡಿನ ಕರ್ನಾಟಕ ತೆಂಗು ಉತ್ಪಾದಕರ ಸೌಹಾರ್ದ ಸಹಕಾರಿ ಸಂಘದ‌ ಉಪಾಧ್ಯಕ್ಷರಾಗಿದ್ದರು. ವಿಟ್ಲ ಅಧ್ಯಾಪಕರ ಸಹಕಾರಿ ಸಂಘದ ನಿರ್ದೇಶಕರಾಗಿ, ಮುಖ್ಯ ಶಿಕ್ಷಕರ ಸಂಘದ ಉಪಾಧ್ಯಕ್ಷ ರಾಗಿ ಸೇವೆ ಸಲ್ಲಿಸಿದ್ದ ಅವರು ಸ್ಕೌಟ್ಸ್ ಗೈಡ್ಸ್ ಸಂಘಟನೆಯಲ್ಲಿ ಮಾಣಿ ವಲಯ ಕಾರ್ಯ ದರ್ಶಿಯಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು,ಪುತ್ರಿ, ಸೊಸೆಯಂದಿರನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು