5:50 AM Wednesday9 - July 2025
ಬ್ರೇಕಿಂಗ್ ನ್ಯೂಸ್
ಪುನರ್ವಸು ಮಳೆ ಅಬ್ಬರ: ಕೊಚ್ಚಿ ಹೋಗುವ ಭೀತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ! ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ…

ಇತ್ತೀಚಿನ ಸುದ್ದಿ

ಸಭೆಗಳಿಗೆ ಗೈರಾಗಿ ಕಳ್ಳಾಟವಾಡುವ ಅಧಿಕಾರಿಗಳೇ ತಾಲೂಕು ಬಿಟ್ಟು ತೊಲಗಿ: ಶಾಸಕ ದರ್ಶನ್ ಖಡಕ್ ಎಚ್ಚರಿಕೆ

08/08/2024, 23:44

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮೈಸೂರು ಜಿಲ್ಲೆಯ ನಂಜನಗೂಡು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರ ತವರು ಜಿಲ್ಲೆ ಎಂಬುವುದನ್ನು ತಾಲೂಕು ಮಟ್ಟದ ಅಧಿಕಾರಿಗಳು ಮರೆಯಬಾರದು. ಜಾಗೃತಿಯಿಂದ ಮತ್ತು ಪ್ರಾಮಾಣಿಕವಾಗಿ ಜನರ ಸೇವೆ ಮಾಡುವುದಕ್ಕೆ ಆಗುವುದಿಲ್ಲ.


ಕಳ್ಳಾಟವಾಡಿ ದಿನದೊಡುತ್ತೇವೆ, ಸಂಬಳ ಪಡೆಯುತ್ತೇವೆ ಎಂಬ ಮನಸ್ಥಿತಿ ಇರುವ ಅಧಿಕಾರಿಗಳೇ ನೀವಾಗಿ ನೀವೇ ತಾಲೂಕು ಬಿಟ್ಟು ತೊಲಗಿ ಎಂದು ಖಡಕ್ಕಾಗಿ ನಂಜನಗೂಡು ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಗೈರಾದ ಅಧಿಕಾರಿಗಳಿಗೆ ಶಾಸಕ ದರ್ಶನ್ ದ್ರುವ ನಾರಾಯಣ ಎಚ್ಚರಿಸಿದರು.
ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯ ಅಧ್ಯಕ್ಷರು ಮತ್ತು ತಹಸೀಲ್ದಾರ್ ಶಿವಕುಮಾರ್ ಕಾಸ್ನೂರ್ ಅವರ ಅಧ್ಯಕ್ಷತೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆ ಕಾರ್ಯಕ್ರಮವನ್ನ ಆಯೋಜನೆ ಮಾಡಲಾಗಿತ್ತು.
ಸಭೆಯಲ್ಲಿ ಕೆಲವೇ ಕೆಲವು ಅಧಿಕಾರಿಗಳು ಮಾತ್ರ ಹಾಜರಿದ್ದರು. ಸಂಘ ಸಂಸ್ಥೆಗಳ ಮುಖಂಡರು ಮತ್ತು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಹೆಚ್ಚಿನ ರೀತಿಯಲ್ಲಿ ಹಾಜರಿದ್ದರು. ಇದನ್ನು ಗಮನಿಸಿದ ಶಾಸಕ ದರ್ಶನ್ ಧ್ರುವ ನಾರಾಯಣ ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇದೇ ತಿಂಗಳ 15ರಂದು ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮವನ್ನು ಅದ್ದೂರಿ ಮತ್ತು ಸಡಗರ ಸಂಭ್ರಮದಿಂದ ಆಚರಿಸಲು ತಾಲೂಕು ಆಡಳಿತ ಮುಂದಾಗಿದೆ ಪ್ರತಿ ವರ್ಷದಂತೆ ನಡೆಯುವ ಕಾರ್ಯಕ್ರಮದಂತೆ ಎಲ್ಲಾ ರೀತಿಯ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಅತಿ ಹೆಚ್ಚು ಶಿಕ್ಷಣ ಇಲಾಖೆಗೆ ಜವಾಬ್ದಾರಿ ನೀಡಲಾಗಿದೆ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಜೆ ವೇಳೆಗೆ ನಡೆಸಿ ಸಂಭ್ರಮಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಧ್ವಜಾರೋಹಣ ಕಾರ್ಯಕ್ರಮ ಸೇರಿದಂತೆ ವಿದ್ಯಾರ್ಥಿಗಳು ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳ ಪಥಸಂಚಲನ ಹಾಗೂ ವಿವಿಧ ಬಗೆಯ ಜಾಗೃತಿ ಸಂದೇಶಗಳನ್ನು ತಿಳಿಸುವ ಕಾರ್ಯಕ್ರಮಗಳನ್ನು ಕೂಡ ಮಾಡಲು ತಯಾರಿ ನಡೆಸಲಾಗಿದೆ. ಇಂತಹ ಪ್ರಮುಖ ಕಾರ್ಯಕ್ರಮಕ್ಕೆ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು. ಈ ಪೂರ್ವಭಾವಿ ಸಭೆಗೆ ಗೈರು ಹಾಜರಾಗಿರುವ ಅಧಿಕಾರಿಗಳ ವಿರುದ್ಧ ಕೂಡಲೇ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳ ಬಳಿ ವಿಚಾರ ಮಾಡಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುತ್ತೇವೆ. ಕಾರ್ಯಕ್ರಮದಲ್ಲಿ ಗೈರಾಗಿರುವ ಅಧಿಕಾರಿಗಳ ಪಟ್ಟಿ ಮಾಡಿ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರ್ ರವರಿಗೆ ಶಾಸಕ ದರ್ಶನ್ ದ್ರುವ ನಾರಾಯಣ ಸಭೆಯಲ್ಲಿ ತಿಳಿಸಿದರು.
ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್, ಸಿಡಿಪಿಒ ಭವ್ಯಶ್ರೀ, ನಗರಸಭಾ ಆಯುಕ್ತ ನಂಜುಂಡಸ್ವಾಮಿ, ಪಿಎಸ್ಐ ಪ್ರಕಾಶ್ ಸಿದ್ದಪ್ಪ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು