5:09 PM Sunday18 - January 2026
ಬ್ರೇಕಿಂಗ್ ನ್ಯೂಸ್
ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಸಚಿವ ಈಶ್ವರಪ್ಪ 40% ಕಮಿಷನ್ ಕೇಳಿದರೇ?: ದೂರು ಪ್ರಧಾನಿ ಕಾರ್ಯಾಲಯ ತಲುಪಿರುವುದರಿಂದ ಪಿಎಂ ಮಧ್ಯಪ್ರವೇಶಿಸುವರೇ?

28/03/2022, 15:26

ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರ ಕಮಿಷನ್ ವ್ಯವಹಾರದಲ್ಲಿ ನಿರತವಾಗಿದೆಯೇ? ಸರಕಾರದ ಹಿರಿಯ ಸಚಿವ, ಪಂಚಾಯತ್‌ ರಾಜ್‌ ಮತ್ತು ಗ್ರಾಮೀಣಾಭಿವೃದ್ಧಿ ಮಂತ್ರಿ  ಕೆ. ಎಸ್‌. ಈಶ್ವರಪ್ಪ ಅವರು ಕಮಿಷನ್  ಬೇಡಿಕೆ ಮುಂದಿಟ್ಟರೇ? 

ಯಾರಲ್ಲಿ ಅವರು ಕಮಿಷನ್ ಕೇಳಿದ್ರು? ಆರೋಪ ಮಾಡಿದವರು ಯಾರು?

ಈಶ್ವರಪ್ಪ ಅವರು ಕಮಿಷನ್ ಕೇಳಿದ ಬಗ್ಗೆ ಈಗಾಗಲೇ ಪ್ರಧಾನಿ ಕಚೇರಿಗೆ ದೂರು ಹೋಗಿದೆ.ಅವರ ವಿರುದ್ಧ ಹಿಂದು ವಾಹಿನಿಯ ರಾಷ್ಟ್ರೀಯ ಕಾರ್ಯದರ್ಶಿ ಸಂತೋಷ್‌ ಕೆ. ಪಾಟೀಲ್‌ ಅವರು  ಪ್ರಧಾನ ಮಂತ್ರಿಗಳ ಕಾರ್ಯಾಲಯಕ್ಕೆ ದೂರು ನೀಡಿದ್ದಾರೆ. ರಾಜ್ಯ ಬಿಜೆಪಿ ಸರಕಾರ 40% ಕಮಿಷನ್ ಕೇಳುತ್ತಿದೆ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಆರೋಪ ಮಾಡಿದ್ದರು. ಇದೀಗ ಹಿಂದೂ ಸಂಘಟನೆಯ ಮುಖಂಡರೇ ಆಗಿರುವ ಸಂತೋಷ್ ಅವರು ಪ್ರಧಾನ ಮಂತ್ರಿ ಕಚೇರಿಗೆ ದೂರು ನೀಡಿದ್ದಾರೆ. 

ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಅವರು 40%  ಕಮಿಷನ್ ಕೇಳುತ್ತಿದ್ದಾರೆ ಎಂದು ನೇರವಾಗಿ ಆರೋಪ ಮಾಡಿದ್ದಾರೆ. 

ಈ ನಡುವೆ ಈಶ್ವರಪ್ಪ ಅವರ ರಾಜೀನಾಮೆಗೆ ಒತ್ತಡ ಹೆಚ್ಚುತ್ತಿದೆ. ವಿಧಾನ ಪರಿಷತ್ ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಈಶ್ವರಪ್ಪ ಅವರ ರಾಜೀನಾಮೆಗೆ ಒತ್ರಾಯಿಸಿದ್ದಾರೆ.

ಈಗಾಗಲೇ ಗುತ್ತಿಗೆದಾರ ಸಂಘದ ಅಧ್ಯಕ್ಷರು ರಾಜ್ಯ ಬಿಜೆಪಿ ಸರ್ಕಾರ 40% ಕಮಿಷನ್ ಕೇಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ‌. ಈಗ ಸ್ವತಃ ಬಿಜೆಪಿ ಕಾರ್ಯಕರ್ತ ಹಾಗೂ ಹಿಂದೂ ಸಂಘಟನೆ ಪ್ರಮುಖ ನಾಯಕ ಸಚಿವರ ಮೇಲೆ ಗಂಭೀರ ಆರೋಪ ಮಾಡಿದ್ದಾರೆ’ ಎಂದು ಹೇಳಿದರು.  

‘ಗ್ರಾಮೀಣಾಭಿವೃದ್ಧಿ ಸಚಿವ 40% ಕಮಿಷನ್ ಕೇಳುತ್ತಿದ್ದಾರೆ ಎಂದು ನೇರವಾಗಿ ಆರೋಪ ಮಾಡಿದ್ದಾರೆ. ಈಗಾಗಲೇ 40 % ಸರ್ಕಾರದ ಬಗ್ಗೆ ಪರಿಷತ್ ನಲ್ಲಿ ಚರ್ಚೆಗೆ ಅವಕಾಶ ಕೇಳಿದ್ದೇವೆ. ದಿನದಿಂದ ದಿನಕ್ಕೆ ಕಮಿಷನ್ ಆರೋಪ ಹೆಚ್ಚಾಗುತ್ತಿದ್ದು,  ಸರ್ಕಾರದ ಈ ವಿಷಯವನ್ನ ಗಂಭೀರ ವಾಗಿ ತೆಗೆದುಕೊಂಡಿಲ್ಲ. ಇದೀಗ  ಅವರ ಪಕ್ಷದಿಂದಲೇ ಕೇಳಿ ಬಂದಿರುವ ಆರೋಪವಾಗಿದ್ದು,  ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ತಕ್ಷಣ ರಾಜೀನಾಮೆ ಕೊಟ್ಟು, ಆರೋಪದಿಂದ ಮುಕ್ತರಾಗುವವರೆಗೂ ಮಂತ್ರಿ ಮಂಡಲದಲ್ಲಿ ಇರಬಾರದು’ ಎಂದು ಒತ್ತಾಯ ಮಾಡ್ತೇ‌ನೆ ಎಂದು ಹರಿಪ್ರಸಾದ್ ಅವರು ತಿಳಿಸಿದರು.  

.

ಇತ್ತೀಚಿನ ಸುದ್ದಿ

ಜಾಹೀರಾತು