3:41 AM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಸಚಿವ ಈಶ್ವರಪ್ಪ ಕೊರಳಿಗೆ ಬಿಗಿಯಾಗುತ್ತಿರುವ ಸಂತೋಷ್ ಆತ್ಮಹತ್ಯೆಯ ಉರುಳು: ಸಂಜೆಯೊಳಗೆ ರಾಜೀನಾಮೆ?

13/04/2022, 11:33

ಮೈಸೂರು (reporterkarnataka.com):  ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಪ್ರವಾಸದಲ್ಲಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ .ಈಶ್ವರಪ್ಪ ಅವರು ಕಾರ್ಯಕ್ರಮವನ್ನು ಮೊಟಕುಗೊಳಿಸಿ ಬೆಂಗಳೂರಿಗೆ ದೌಡಾಯಿಸಿದ್ದಾರೆ. ಸಚಿವರು ರಾಜ್ಯಪಾಲರನ್ನು ಭೇಟಿಯಾಗಿ ಸಂಜೆಯೊಳಗೆ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ಇದಕ್ಕೆ ಮುನ್ನ ಈಶ್ವರಪ್ಪ ಅವರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಈ ಮಧ್ಯೆ

ಮೊಬೈಲ್‌ ಕರೆಯೊಂದರ ಹಿನ್ನೆಲೆಯಲ್ಲಿ ತಮ್ಮ ಪ್ರವಾಸ ಮೊಟಕುಗೊಳಿಸಿದ ಈಶ್ವರಪ್ಪ ಅವರು ಮೈಸೂರಿನಿಂದ ಬೆಂಗಳೂರಿನತ್ತ ದೌಡಾಯಿಸಿದ್ದಾರೆ.

ಮೈಸೂರಿನ ಲಲಿತ್ ಮಹಲ್ ಪ್ಯಾಲೇಸ್ ನಲ್ಲಿ ಬಿಜೆಪಿಯ ವಿಭಾಗೀಯ ಮಟ್ಟದ ಸಭೆ ನಡೆಯುತ್ತಿರುವ ಹಿನ್ನಲೆಯಲ್ಲಿ ಈಶ್ವರಪ್ಪ ಸೇರಿದಂತೆ
ಬಿಜೆಪಿಯ ಹಲವು ನಾಯಕರು ಅಲ್ಲಿದ್ದರು.

ಈ ವೇಳೆ ಮೊಬೈಲ್ ಕರೆಯೊಂದು ಸಚಿವರಿಗೆ ಬಂದಿದ್ದು, ಬಳಿಕ ದಿಢೀರನೆ ಕಾರಿನಲ್ಲಿ ಬೆಂಗಳೂರಿನತ್ತ ಹೊರಟಿದ್ದಾರೆ ಎಂದು ತಿಳಿದು ಬಂದಿದೆ.

ಸಂತೋಷ್‌ ಪಾಟೀಲ ಆತ್ಮಹತ್ಯೆ ಪ್ರಕರಣದಲ್ಲಿ ನೇರವಾಗಿ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಾಗಿರುವುದರಿಂದ ಹೈಕಮಾಂಡ್ ಸೂಚನೆಯ ಮೇರೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡುವ ಸಾಧ್ಯತೆ ಇದೆ ಎಂಬ ಮಾತು ಮಾತು ಬಿಜೆಪಿಯೊಳಗೆ ಹರಿದಾಡುತ್ತಿದೆ.

 

ಇತ್ತೀಚಿನ ಸುದ್ದಿ

ಜಾಹೀರಾತು