ಇತ್ತೀಚಿನ ಸುದ್ದಿ
ಸಚಿವ ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಆತ್ಮಹತ್ಯೆ: ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ
12/04/2022, 15:21
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರ ವಿರುದ್ಧ 40% ಕಮಿಷನ್ ಆರೋಪ ಮಾಡಿ ಪ್ರಧಾನಿಗೆ ಪತ್ರ ಬರೆದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ
ಚಿಕ್ಕಮಗಳೂರು ನಗರದಲ್ಲಿ ಕಾಂಗ್ರೆಸ್ ಹಾಗೂ ಸಿಪಿಐ ಪಕ್ಷಗಳಿಂದ ಪ್ರತಿಭಟನೆ ನಡೆಯಿತು.
ನಗರದ ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್, ಸಿಪಿಐ ಹಾಗೂ ವಿವಿಧ ಸಂಘಟನೆಗಳು ಪಾಲ್ಗೊಂಡಿದ್ದವು.ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನ ವಜಾಗೊಳಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.