9:30 PM Wednesday11 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಸಚಿವ ರಾಜಣ್ಣರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಮನುಸ್ಮೃತಿ ಪಾಠ; ಕೊನೆಗೆ ನಗೆಚಟಾಕಿ

18/01/2025, 21:30

ತುಮಕೂರು(reporterkarnataka.com):ಪತ್ರಕರ್ತರ 39ನೇ ರಾಜ್ಯ ಸಮ್ಮೇಳನದ ಉದ್ಘಾಟನಾ ಭಾಷಣದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಅವರಿಗೆ ಮನುಸ್ಮೃತಿ ಓದಲು ಹೇಳಿದ ಪ್ರಸಂಗ ನಡೆಯಿತು.
ಮುಖ್ಯಮಂತ್ರಿಗಳು ತಮ್ಮ ಭಾಷಣದಲ್ಲಿ ಸಮಾಜದಲ್ಲಿರುವ ಜಾತಿ ತಾರತಮ್ಯವನ್ನು ಉಲ್ಲೇಖಿಸಿ ಮಾತನಾಡುವಾಗ ಮೇಲು “ಜಾತಿ-ಕೆಳ ಜಾತಿ” ಎನ್ನುವ ಪದ ಬಳಸಿದರು.
ಈ ವೇಳೆ ಸಚಿವ ರಾಜಣ್ಣ ಅವರು ಮೇಲುಜಾತಿ-ಕೆಳಜಾತಿ ಎನ್ನುವ ಬದಲಿಗೆ ಮುಂದುವರೆದವರು, ಹಿಂದುಳಿದವರು ಎಂದು ಹೇಳಬಹುದು ಎಂದರು.
ಇದಕ್ಕೆ ಆಕ್ಷೇಪಿಸಿದ ಸಿಎಂ, ಜಾತಿ ಅನ್ನುವುದು ಈ ಸಮಾಜದ ವಾಸ್ತವ. ನೀನು ಮನುಸ್ಮೃತಿ ಓದಿದರೆ ಈ ಬಗ್ಗೆ ಇನ್ನಷ್ಟು ಸ್ಪಷ್ಟವಾಗುತ್ತದೆ. ಜಾತಿಯ ತಾರತಮ್ಯ ಎಷ್ಟು ಭೀಕರವಾಗಿದೆ ಎಂದು ಗೊತ್ತಾಗಬೇಕಾದರೆ ಅದಕ್ಕೆ ಮನುಸ್ಮೃತಿ ಓದು ಎಂದರು.
ಈ ಬಗ್ಗೆ ಕೆಲ ಕ್ಷಣ ಇಬ್ಬರ ನಡುವೆ ಚರ್ಚೆ ನಡೆಯಿತು. ಬಳಿಕ, ಮುಖ್ಯಮಂತ್ರಿಗಳು “ನಾನು ಮೇಲು ಜಾತಿ-ಕೆಳ ಜಾತಿ ಅಂತಲೇ ಬಳಸ್ತೀನಿ. ಇದು ನನ್ನ‌ ಸ್ವಾತಂತ್ರ್ಯ, ನೀವು ಹಿಂದುಳಿದವರು-ಮುಂದುವರೆದವರು ಅಂತಲೇ ಬಳಸಿ ಎಂದು ನಗೆಚಟಾಕೆ ಹಾರಿಸಿ ಭಾಷಣ ಮುಂದುವರೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು