6:58 AM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಸಚಿವ ಸೋಮಶೇಖರ್ ಪುತ್ರನಿಗೆ ಬ್ಲ್ಯಾಕ್ ಮೇಲ್…!:  ಇಬ್ಬರು ಆರೋಪಿಗಳ ಬಂಧನ; ಶಾಸಕರೊಬ್ಬರ ಪುತ್ರಿ ಕೈವಾಡ ?

10/01/2022, 11:34

ಬೆಂಗಳೂರು(reporterkarnataka.com): ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಪುತ್ರ ನಿಶಾಂತ್ ಸೋಮಶೇಖರ್ ಗೆ ಬ್ಲ್ಯಾಕ್ ಮೇಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಂಗಳೂರಿನ ಚಂದ್ರಶೇಖರ್ ಸ್ವಾಮೀಜಿ ಎಂಬ ಜ್ಯೋತಿಷಿಯೊಬ್ಬರ ಪುತ್ರ ರಾಹುಲ್ ಭಟ್ ಎಂಬ ಪ್ರಮುಖ ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿರುವ ಸಿಸಿಬಿ ಪೊಲೀಸರು, ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ 5 ದಿನಗಳ ಕಾಲ ಪೊಲೀಸ್ ವಶಕ್ಕೆ ಪಡೆದಿದ್ದಾರೆ. ಇನ್ನೋರ್ವ ಆರೋಪಿಯನ್ನು ಗೋವಾದಲ್ಲಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಸಚಿವ ಪುತ್ರನ ಬ್ಲ್ಯಾಕ್ ಮೇಲ್ ಪ್ರಕರಣದಲ್ಲಿ ಶಾಸಕರ ಪುತ್ರಿಯೋರ್ವರ ಕೈವಾಡವಿದೆ ಎಂದು ಹೇಳಲಾಗುತ್ತಿದ್ದು, ಶಾಸಕರ ಪುತ್ರಿಗಾಗಿ ಹಾಗೂ ಇನ್ನೋರ್ವ ಆರೋಪಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

ಕೆಲ ದಿನಗಳ ಹಿಂದೆ ಸಚಿವ ಎಸ್.ಟಿ.ಸೋಮಶೇಖರ್ ಅವರ ಪುತ್ರ ನಿಶಾಂತ್ ಗೆ ವಾಟ್ಸಪ್ ಮೂಲಕ ವಿಡಿಯೋವೊಂದನ್ನು ಕಳುಹಿಸಿದ್ದ ಆರೋಪಿಗಳು ಯುವತಿಯೊಂದಿಗೆ ಸಚಿವರ ಪುತ್ರ ಇರುವ ರೀತಿಯಲ್ಲಿ ಫೋಟೋ ಎಡಿಟ್ ಮಾಡಿ ಅಶ್ಲೀಲ ವಿಡಿಯೋವನ್ನು ಕಳುಹಿಸಿದ್ದರು. ಅಲ್ಲದೇ 1 ಕೋಟಿ ರೂಪಾಯಿ ಹಣ ನೀಡದಿದ್ದರೆ ವಿಡಿಯೋ ಬಹಿರಂಗ ಮಾಡುವುದಾಗಿ ಬ್ಲ್ಯಾಕ್ ಮೇಲ್ ಮಾಡಿದ್ದರು. ಈ ಕುರಿತು ನಿಶಾಂತ್ ಸೋಮಶೇಖರ್ ಸೈಬರ್ ಕ್ರೈಂ ಗೆ ದೂರು ನೀಡಿದ್ದರಲ್ಲದೇ ತಮ್ಮ ಹಾಗೂ ತಮ್ಮ ತಂದೆಯ ತೇಜೋವಧೆಗಾಗಿ ಇಂತಹ ವಿಡಿಯೋ ಎಡಿಟ್ ಮಾಡಿ ಕಳುಹಿಸಿ ಬೆದರಿಕೆಯೊಡ್ಡುತ್ತಿರುವುದಾಗಿ ತಿಳಿಸಿದ್ದರು.

ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದರು. ದುಬೈನಿಂದ ವಾಪಸ್ ಆಗುತ್ತಿದ್ದ ಆರೋಪಿ ರಾಹುಲ್ ಭಟ್ ಹಾಗೂ ಸಚಿವರ ಬಳಿಯೇ ಈ ಹಿಂದೆ ಕೆಲಸ ಮಾಡುತ್ತಿದ್ದ ಎನ್ನಲಾಗಿದ್ದ ಇನ್ನೋರ್ವ ಆರೋಪಿಯನ್ನು ಗೋವಾದಲ್ಲಿ ಬಂಧಿಸಲಾಗಿದೆ. ಇನ್ನಿಬ್ಬರು ಆರೋಪಿಗಳಿಗಾಗಿ ಶೋಧ ನಡೆಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು