5:53 AM Tuesday8 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಸಚಿವ ಸ್ಥಾನಕ್ಕಿಂತ ನನ್ನ ಕ್ಷೇತ್ರದ ಅಭಿವೃದ್ದಿಯೇ ಮುಖ್ಯ: ಶ್ರೀಮಂತ ಪಾಟೀಲ್

03/10/2022, 16:52

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಾಗವಾಡ ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಪಡಿಸುವುದೇ ನನ್ನ ಗುರಿಯಾಗಿದೆ ಹೊರತು, ಸಚಿವ ಸಂಪುಟದಲ್ಲಿ ಸೇರ್ಪಡೆಯಾಗುವುದಲ್ಲ ಎಂದು ಮಾಜಿ ಸಚಿವ ಹಾಗೂ ಕಾಗವಾಡ ಕ್ಷೇತ್ರದ ಶಾಸಕ ಶ್ರೀಮಂತ ಪಾಟೀಲ್ ಹೇಳಿದರು.

ಅವರು ಕಾಗವಾಡ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಪಾರ್ಥನಳ್ಳಿ ಗ್ರಾಮದಲ್ಲಿ 21.40 ಕೋಟಿ ವೆಚ್ಚದ ಪಾರ್ಥನಳ್ಳಿ ಹಳೆ ಕಿರಣಗಿ ರಸ್ತೆ , 212 ಲಕ್ಷ ವೆಚ್ಚದ ಪಾರ್ಥನಳ್ಳಿ ಜಾಧವ ತೋಟದ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಕಾಗವಾಡ ಮತಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವನ್ನಾಗಿಸುವ ಗುರಿ ನನ್ನದಾಗಿದೆ, ಮೂಲ ಸೌಲಭ್ಯ ಗಳಾದ ರಸ್ತೆ , ಕುಡಿಯುವ ನೀರು , ಚರಂಡಿ, ಶಾಲಾ ಕಟ್ಟಡ, ಶೌಚಾಲಯ, ರೈತರ ಜಮೀನುಗಳಿಗೆ ನೀರಾವರಿ, ಶಿಕ್ಷಕರ ನೇಮಕಾತಿ , ಆಸ್ಪತ್ರೆ ಸೇರಿದಂತೆ ಹಲವಾ ರು ಸೌಲಭ್ಯಗಳು ಜನರಿಗೆ ದೊರೆಯಬೇಕು.

ಇದೇ ಸಂದರ್ಭದಲ್ಲಿ ಜ್ಯೋತಿ ನಗರದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಅಳವಡಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿದರು.

ಈ ವೇಳೆ ಪಂಚಾಯತ್ ರಾಜ್ಯ ಇಲಾಖೆಯ ಅಭಿಯಂತರ ವೀರಣ್ಣ ವಾಲಿ, ಎಸ್ . ಎ.ಸಾಂವಗಾಂವ, ಮಾಜಿ ತಾಲೂಕಾ ಪಂಚಾಯಿತಿ ಸದಸ್ಯ ಅಪ್ಪಣ್ಣ ಮುಜಗಣ್ಣವರ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವಾನಂದ ಮುಜಗಣ್ಣವರ, ಮುಖಂಡ ಬಾಹುಸಾಹೇಬ ಜಾಧವ, ಸಿದರಾಯ ಗೊಲಬಾವಿ, ನಾನಾಸಾಹೇಬ ತೇಲಿ, ಶಿವಾನಂದ ಅವತಾಡೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು