5:22 AM Sunday14 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಸಚಿವ ಸುನಿಲ್ ಕುಮಾರ್ ಕಾರ್ಕಳದಿಂದಲೇ ಸ್ಪರ್ಧೆ: ವಿಜಯಪುರದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಸ್ಪಷ್ಟನೆ

04/02/2023, 22:26

ವಿಜಯಪುರ(reporterkarnataka.com):: ಮುಂಬರುವ ವಿಧಾನಸಭೆ ಚುನಾವಣೆಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಅವರು ಕಾರ್ಕಳ ಕ್ಷೇತ್ರದಿಂದಲೇ ಸ್ಪರ್ಧಿಸಲಿದ್ದಾರೆ. ಎಲ್ಲ 224 ಕ್ಷೇತ್ರದಲ್ಲಿಯೂ ಬಿಜೆಪಿ ಸ್ಪರ್ಧಿಸಲಿದೆ ಎಂದು ಶ್ರೀರಾಮ ಸೇನೆಯ ಆಗ್ರಹಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಖಡಕ್ ಉತ್ತರ ನೀಡಿದ್ದಾರೆ.

ಕಾರ್ಕಳ ಕ್ಷೇತ್ರದಲ್ಲಿ ಅಭ್ಯರ್ಥಿ ಹಾಕದೇ ಪ್ರಮೋದ್ ಮುತಾಲಿಕ್ ಅವರನ್ನು ಬೆಂಬಲಿಸುವಂತೆ ಬಿಜೆಪಿ ನಾಯಕರನ್ನು ಶ್ರೀರಾಮಸೇನೆ ಒತ್ತಾಯಿಸಿದೆ. ಆದರೆ ನಮ್ಮದು ರಾಷ್ಟ್ರೀಯ ಪಕ್ಷ, ಎಲ್ಲ ಕ್ಷೇತ್ರಗಳಲ್ಲಿ ಅಭ್ಯರ್ಥಿ ಹಾಕುತ್ತೇವೆ. ಕಾರ್ಕಳದಲ್ಲಿ ಸಚಿವ ಸುನೀಲ್ ಕುಮಾರ್ ಅವರು ಮೂರು ಬಾರಿ ಚುನಾವಣೆಯಲ್ಲಿ ಗೆದ್ದಿದ್ದಾರೆ. ಮಂತ್ರಿ ಕೂಡ ಆಗಿದ್ದಾರೆ. ಶ್ರೀರಾಮ ಸೇನೆಯವರು ಮನವಿ ಮಾಡಿದ್ದಾರೆ. ಇದು ಸಹಜ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಉತ್ತರಿಸಿದರು.

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಗ್ಗೆ ಡಾ.ಪರಮೇಶ್ವರ್
ಸಮಾಧಾನಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ಅದು ಅವರ ಆಂತರಿಕ ವಿಚಾರ. ಪರಮೇಶ್ವರ್ ಬಹಳ ಬುದ್ದಿವಂತರು. ಎಲ್ಲವನ್ನೂ ಅರಿತವರು. ಅಸಮಾಧಾನ ವ್ಯಕ್ತಪಡಿಸಿದ್ದಾರೆ ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದ ಶಾಸಕರನ್ನು ಭದ್ರ ಮಾಡಿಕೊಳ್ಳಲಿ. ಜವಾಬ್ದಾರಿಯುತ ಸ್ಥಾನದಲ್ಲಿರುವ ನಾನು ಅವರಿಗೆ ಇಷ್ಟೇ ಸಲಹೆ ನೀಡಲು ಸಾಧ್ಯ ಎಂದು ಬೊಮ್ಮಾಯಿ ಸಿದ್ದರಾಮಯ್ಯ ಅವರನ್ನು ಎಚ್ಚರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು