3:31 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸಚಿವ ಸುನಿಲ್ ಕುಮಾರ್ ರಾಜ್ಯಪಾಲರ ಭೇಟಿ: ಕಾರ್ಕಳ ಉತ್ಸವಕ್ಕೆ ಆಹ್ವಾನ; ಸೌಹಾರ್ದಯುತ ಚರ್ಚೆ

04/03/2022, 19:26

ಬೆಂಗಳೂರು(reporterkarnataka.com): 
ಇಂಧನ ಹಾಗೂ ಕನ್ನಡ ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್
ಶುಕ್ರವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಸೌಹಾರ್ದಯುತ ಚರ್ಚೆ ನಡೆಸಿದ್ದಾರೆ.

ಮಾರ್ಚ್ 10 ರಿಂದ 20ರವರೆಗೆ ನಡೆಯಲಿರುವ ಕಾರ್ಕಳ ಉತ್ಸವಕ್ಕೆ ರಾಜ್ಯಪಾಲರನ್ನು ಆಹ್ವಾನಿಸಿರುವ ಅವರು ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸುವುದರ ಜತೆಗೆ ಉತ್ಸವದ ವೈಶಿಷ್ಟ್ಯ ಗಳನ್ನು ವಿವರಿಸಿದ್ದಾರೆ.

ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಹಯೋಗದೊಂದಿಗೆ ಮಾರ್ಚ್ ೧೦ರಿಂದ ೨೦ರ ವರೆಗೆ ಕಾರ್ಕಳ ಉತ್ಸವ ಆಯೋಜಿಸಲಾಗಿದೆ. ತುಳು ನಾಡಿನ ಸಾಂಸ್ಕ್ರತಿಕ ಬದುಕಿನ ಅನಾವರಣದ ಜತೆಗೆ ಕೋವಿಡ್ ನಿಂದ ಏಕತಾನತೆಗೆ ಸಿಲುಕಿದ್ದ ತಾಲೂಕಿನ ಜನಜೀವನಕ್ಕೆ ಉತ್ಸಾಹ ಹಂಚುವ ಉದ್ದೇಶವನ್ನು ಉತ್ಸವ ಹೊಂದಿದೆ.

ಉತ್ಸವ ಕಾರ್ಕಳದಲ್ಲಿ ನಡೆಯುತ್ತಿದ್ದರೂ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಈಗಾಗಲೇ ಸದ್ದು ಮಾಡುತ್ತಿದೆ. ತುಳುನಾಡಿನ ಸಾಂಸ್ಕ್ರತಿಕ ವೈಭವ ಉತ್ಸವದ ಜೀವಾಳವಾಗಿದೆ.

ಈ ಹಿನ್ನೆಲೆಯಲ್ಲಿ ಸಿದ್ಧತಾ ಕಾರ್ಯ ಭರದಿಂದ ನಡೆಯುತ್ತಿದ್ದು, ಗಣ್ಯಾತಿಗಣ್ಯರು, ಅನಿವಾಸಿ ಕಾರ್ಕಳ ಜನರು ಸೇರಿದಂತೆ ಲಕ್ಷಾಂತರ ಜನರು ಭಾಗವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು