7:34 PM Friday10 - January 2025
ಬ್ರೇಕಿಂಗ್ ನ್ಯೂಸ್
ಶೃಂಗೇರಿ ದೇಗುಲಕ್ಕೆ ನಾಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ: ಸುವರ್ಣ ಮಹೋತ್ಸವದಲ್ಲಿ ಭಾಗಿ ಸುಪ್ರೀಂ ಕೋರ್ಟ್ ತೀರ್ಪು ಉಲ್ಲಂಘನೆ: ಸರಕಾರಿ ನೌಕರರ ಸಂಘಕ್ಕೆ ಚುನಾವಣೆಗೆ ಸಿವಿಲ್ ಕೋರ್ಟ್… ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರಕಾರಿ ಬಸ್: ಪ್ರಯಾಣಿಕರಲ್ಲಿ ಆತಂಕ ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ, ರಾಹುಲ್ ಗಾಂಧಿ ಕೊಟ್ಟಿದ್ದ ಭರವಸೆ ಸಾಕಾರ: ಸಚಿವ… ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ: ಮುಖ್ಯಮಂತ್ರಿ ಸೂಚನೆ ದೇಸಿ ತಿನಿಸಿನ ಬೇಡಿಕೆ ಹೆಚ್ಚಸಲು ಕ್ರಮ: ಸಚಿವ ಎನ್. ಚಲುವರಾಯಸ್ವಾಮಿ ನಂಜನಗೂಡು: ಶಿವಶರಣ ಒಕ್ಕಲಿಗರ ಮುದ್ದಣನವರ ಪ್ರಪ್ರಥಮ ಜಯಂತಿ ಆಚರಣೆ ಬಳ್ಳಾರಿ: ಎಲ್ಲ ರೈಲುಗಳ ಆರಂಭಕ್ಕಾಗಿ ರಾಜ್ಯ ರೈಲ್ವೆ ಕ್ರಿಯಾ ಸಮಿತಿಯಿಂದ ಒಂದು ತಿಂಗಳ… ಎಂಎಸ್‌ ಐಎಲ್‌ ಟೂರ್‌ ಪ್ಯಾಕೇಜ್‌ ಗೆ ಸಚಿವ ಎಂ. ಬಿ. ಪಾಟೀಲ್ ಚಾಲನೆ ಜ.10-12: ಸೌತ್ ಏಷ್ಯಾ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್-2025; ದೇಶ – ವಿದೇಶದ 2…

ಇತ್ತೀಚಿನ ಸುದ್ದಿ

ಸದ್ಯಕ್ಕಿಲ್ಲ ರಾಜ್ಯದಲ್ಲಿ ಲಾಕ್‌ಡೌನ್‌:  ಗಡಿ ಜಿಲ್ಲೆಗಳಲ್ಲಿ ಸಂಪೂರ್ಣ ವ್ಯಾಕ್ಸಿನೇಶನ್ ಗೆ ನಿರ್ಧಾರ; ಉತ್ತರ ಕರ್ನಾಟಕದಲ್ಲಿ ಟೆಸ್ಟ್‌ ಹೆಚ್ಚಳ 

14/08/2021, 20:52

ಬೆಂಗಳೂರು(reporterkarnataka.com) :  ಪಾಸಿಟಿವಿಟಿ ರೇಟ್‌ ಹೆಚ್ಚಳವಾಗಿರುವ ಕೇರಳ ಹಾಗೂ ಮಹಾರಾಷ್ಟ್ರ ಗಡಿಯಲ್ಲಿರುವ ಜಿಲ್ಲೆಗಳಲ್ಲಿ ವಾಕ್ಸಿನ್ ಪ್ರಮಾಣವನ್ನು ಹೆಚ್ಚಿಸುವ ಮೂಲಕ ಸದ್ಯ ಲಾಕ್ ಡೌನ್ ಹೇರದಿರಲು ರಾಜ್ಯ ಸರಕಾರ ತೀರ್ಮಾನಿಸಿದೆ ಎಂದು ತಿಳಿದು ಬಂದಿದೆ.

ಕೇರಳ ಹಾಗೂ ಮಹಾರಾಷ್ಟ್ರ ಗಡಿಯಲ್ಲಿರುವ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಸಂಪೂರ್ಣವಾಗಿ ವ್ಯಾಕ್ಸಿನೇಷನ್‌ ಮಾಡಲು ತೀರ್ಮಾನಿಸಲಾಗಿದೆ. ಹಾಗೆ ರಾಯಚೂರು, ಗುಲ್ಬರ್ಗಾ, ಹಾವೇರಿ, ಬೀದರ್‌ , ತುಮಕೂರು, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕೊರೊನಾ ಟೆಸ್ಟಿಂಗ್‌ ಹೆಚ್ಚಿಸಲು ಸೂಚಿಸಲಾಗಿದೆ.

ಈ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸದ್ಯಕ್ಕೆ ಲಾಕ್‌ಡೌನ್‌ ಜಾರಿ ಮಾಡದೇ ಇರಲು ತೀರ್ಮಾನಿಸಲಾಗಿದೆ. ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಸಂಪೂರ್ಣವಾಗಿ ಇಳಿಕೆಯಾಗಿಲ್ಲ. ಮುಂದಿನ ಎರಡು ವಾರಗಳ ಕಾಲ ಪ್ರಸ್ತುತ ನಿಯಮಗಳೇ ಮುಂದುವರಿಯಲಿದೆ ಎಂದು ಹೇಳಿದ್ದಾರೆ.

ರಾಜ್ಯದ ಗಡಿ ಜಿಲ್ಲೆಗಳು ಹಾಗೂ ಸಿಲಿಕಾನ್‌ ಸಿಟಿ ಬೆಂಗಳೂರಲ್ಲಿ ಕೊರೊನಾ ವೈರಸ್‌ ಸೋಂಕು ಹೆಚ್ಚಳ ವಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್‌ ಬೊಮ್ಮಾಯಿ ಅವರು ಅಧಿಕಾರಿಗಳು ಹಾಗೂ ತಜ್ಞರ ಜೊತೆಗೆ ಸಭೆ ನಡೆಸಿದ ಬಳಿಕ ಅವರು ಮಾಧ್ಯಮ ಜತೆ ಮಾತನಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು