11:54 AM Thursday21 - November 2024
ಬ್ರೇಕಿಂಗ್ ನ್ಯೂಸ್
ನೀರು ಹರಿಸುವ ನಿರ್ಣಯದಿಂದ ನಮ್ಮ ಭಾಗದ ರೈತರಿಗೆ ಅನ್ಯಾಯ: ಮಾಜಿ ಸಚಿವ ನರಸಿಂಹ… ಫೆಸ್ಟಿವಲ್ ಆಫ್ ಆಸ್ಟ್ರೇಲಿಯಾ: ಶಿಕ್ಷಣದ ಶ್ರೇಷ್ಠತೆ ಮತ್ತು ಪ್ರಿಮಿಯಂ ಎಫ್ & ಬಿ… ತೇಜಸ್ವಿ ಅವರು ನಡೆನುಡಿಯಲ್ಲಿ ಬಹುತೇಕ ಒಂದೇ ಎಂಬಂತೆ ಬದುಕಿದ ಅಪರೂಪದ ಲೇಖಕರು; ಡಾ.ಸಂಪತ್… ಮೂವರು ಯುವತಿಯರ ಸಾವಿಗೆ ಕಾರಣವಾದ ಸೋಮೇಶ್ವರ ಬೀಚ್ ರೆಸಾಟ್೯ಗೆ ಬೀಗಮುದ್ರೆ ಬಂಟ್ವಾಳ ಸಮೀಪದ ಗಡಿಯಾರದಲ್ಲಿ ಸಿಡಿಲು ಬಡಿದು ಬಾಲಕ ಮೃತ್ಯು: ಮನೆಯಂಗಳದಲ್ಲಿ ನಿಂತಿದ್ದ ವೇಳೆ… ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಸಡಗರ -ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ನೆರವೇರಿದ ಚಿಕ್ಕ… ಸಹಕಾರಿ ಕ್ಷೇತ್ರ ಜಾತಿ, ಪಕ್ಷಗಳ ಆಧಾರದಲ್ಲಿ ಕಾರ್ಯ ನಿರ್ವಹಿಸಬಾರದು: ಮಂಗಳೂರಿನಲ್ಲಿ ಸಚಿವ ಕೆ.ಎನ್.… ಉತ್ತರ ಪ್ರದೇಶ: ಝಾನ್ಸಿ ಆಸ್ಪತ್ರೆಯಲ್ಲಿ ಭೀಕರ ಬೆಂಕಿ ಅಪಘಾತ; ಕನಿಷ್ಠ 10 ನವಜಾತ… ಚಾರ್ಮಾಡಿ ಘಾಟ್‌ ರಸ್ತೆಗೆ 343.74 ಕೋಟಿ ಬಿಡುಗಡೆ: ಅಭಿವೃದ್ಧಿ ಹೆಸರಿನಲ್ಲಿ 10 ವರ್ಷ… ನಂಜನಗೂಡು ಶ್ರೀಕಂಠೇಶ್ವರಸ್ವಾಮಿ ದೇವಾಲಯ: ನ. 17ರಂದು ಚಿಕ್ಕಜಾತ್ರಾ ಮಹೋತ್ಸವ, 19ರಂದು ತೆಪ್ಪೋತ್ಸವ

ಇತ್ತೀಚಿನ ಸುದ್ದಿ

ಸಹಕಾರಿ ಕ್ಷೇತ್ರ ಜಾತಿ, ಪಕ್ಷಗಳ ಆಧಾರದಲ್ಲಿ ಕಾರ್ಯ ನಿರ್ವಹಿಸಬಾರದು: ಮಂಗಳೂರಿನಲ್ಲಿ ಸಚಿವ ಕೆ.ಎನ್. ರಾಜಣ್ಣ

16/11/2024, 17:48

ಮಂಗಳೂರು(reporterkarnataka.com): ಹಳ್ಳಿಯ ಮುಗ್ಧ ವ್ಯಕ್ತಿ ಕೂಡ ಸಹಕಾರಿ ಬ್ಯಾಂಕ್ ಪ್ರಯೋಜನ ಪಡೆಯುವಂತಾಗಬೇಕು. ಆಗ ಇಂತಹ ಸಪ್ತಾಹದ ಆಚರಣೆ ಸಾರ್ಥಕವಾಗುತ್ತದೆ. ಸಹಕಾರಿ ಕ್ಷೇತ್ರ ಜಾತಿ, ಪಕ್ಷಗಳ ಆಧಾರದಲ್ಲಿ ಕಾರ್ಯ ನಿರ್ವಹಿಸಬಾರದು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ., ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ., ಮಂಗಳೂರು, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ , ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು, ಎಲ್ಲಾ ವಿಧದ ಸಹಕಾರ ಸಂಘಗಳು ಹಾಗೂ ಸಹಕಾರ ಇಲಾಖೆಯ ಸಹಯೋಗದೊಂದಿಗೆ ನಗರದ ಲಾಲ್ ಬಾಗ್ ಸಮೀಪದ ಕರಾವಳಿ ಉತ್ಸವ ಮೈದಾನದಲ್ಲಿ ಜರುಗಿದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಹಕಾರಿ ಆಂದೋಲನದಲ್ಲಿ ಹೆಚ್ಚೆಚ್ಚು ಯುವ ಜನಾಂಗ ತೊಡಗಿಕೊಳ್ಳುವಂತಾಗಬೇಕು. ಹಳ್ಲಿಗಾಡಿನಲ್ಲಿ ಸಹಕಾರಿ ತತ್ವದ ಮೇಲೆ ನಂಬಿಕೆ ಇರಿಸಿ ಆಂದೋಲನದಲ್ಲಿ ಪಾಲು ಪಡೆಯುತ್ತಿರುವುದು ಹೆಮ್ಮೆಯ ವಿಚಾರ.‌ ಕೇಂದ್ರ ಸರಕಾರದಲ್ಲಿ ಸಹಕಾರಿ ಸಚಿವಾಲಯ ಮಾಡಬೇಕು ಎಂಬ ಬೇಡಿಕೆ ನಮ್ಮದಾಗಿತ್ತು. ಅದನ್ನು ಸರಕಾರ ನೆರವೇರಿಸಿದ್ದು ಅಮಿತ್ ಶಾ ಅದರ ನೇತೃತ್ವ ವಹಿಸಿದ್ದಾರೆ ಎಂದರು.
ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಅವರು ಮಾತನಾಡಿ, ಸಹಕಾರಿ ಕ್ಷೇತ್ರ ಬಹಳಷ್ಟು ಅಭಿವೃದ್ಧಿಯಾಗಿದೆ. ಮಹಿಳೆಯರು ಸಮಾಜದಲ್ಲಿ ಸ್ವಾಭಿಮಾನದಿಂದ ಬದುಕಲು ಸಹಕಾರಿ ಕ್ಷೇತ್ರ ಮತ್ತು ತತ್ವ ಬಹಳಷ್ಟು ಕೊಡುಗೆಯನ್ನು ನೀಡಿದೆ. ನಮ್ಮ ದೇಶ, ರಾಜ್ಯ ಮತ್ತು ಜಿಲ್ಲೆಯ ಪ್ರಗತಿಗೆ ಸಹಕಾರಿ ಕ್ಷೇತ್ರದ ಹಿರಿಯರು ಹೆಚ್ಚಿನ ಪ್ರಯತ್ನ ಪಟ್ಟಿದ್ದಾರೆ. ಗ್ರಾಮೀಣ ಭಾಗದ ಜನರು ಇಂದು ಸಹಕಾರಿ ತತ್ವದ ಮೂಲಕ ಕ್ರಾಂತಿಕಾರಿ ಬದಲಾವಣೆಯನ್ನು ತಮ್ಮ ಬದುಕಿನಲ್ಲಿ ಅನುಷ್ಠಾನಗೊಳಿಸಿದ್ದಾರೆ. ಕೇಂದ್ರ ಮಾಜಿ ವಿತ್ತ ಸಚಿವ ಜನಾರ್ದನ ಪೂಜಾರಿಯವರ ಸಾಲಮೇಳದಿಂದ ಜನಸಾಮಾನ್ಯರು ಬ್ಯಾಂಕ್ ಬಾಗಿಲು ನೋಡುವಂತಾಯಿತು ಎಂದರು.
ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್‌ ಮಾತನಾಡಿ, ಸಹಕಾರಿ ಕ್ಷೇತ್ರ ಮಹಿಳೆಯರ ಅಭೂತಪೂರ್ವ ಬೆಂಬಲ ಹಾಗೂ ಸಹಕಾರದಿಂದ ನಡೆಯುತ್ತಿದೆ. ಹಳ್ಳಿ ಹಳ್ಳಿಗಳಲ್ಲೂ ಮಹಿಳೆಯರು ಸ್ವಾವಲಂಬಿ ಜೀವನ ಸಾಗಿಸುತ್ತಿದ್ದಾರೆ. ಇವರೆಲ್ಲರ ಶ್ರಮದಿಂದ ಸಹಕಾರಿ ಕ್ಷೇತ್ರ ಶ್ರೀಮಂತವಾಗಿದೆ. ಮುಂದೆ ಇನ್ನಷ್ಟು ಸಂಭ್ರಮ ಸಡಗರದಿಂದ ಸಪ್ತಾಹ ಆಚರಣೆಯಾಗಬೇಕು ಎಂದು ನುಡಿದರು.
ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮಾತನಾಡಿ, ಸ್ವಾತಂತ್ರ್ಯದ ಬಳಿಕ ಪಂಚ ವಾರ್ಷಿಕ ಯೋಜನೆಗಳಲ್ಲಿ ಸಹಕಾರಿ ಕ್ಷೇತ್ರಕ್ಕೆ ಬಲವನ್ನು ತುಂಬುವ ಕೆಲಸ ಪ್ರಾರಂಭವಾಯಿತು. ಅಂದಿನಿಂದ ಇಂದಿನವರೆಗೂ ಸಹಕಾರಿ ಕ್ಷೇತ್ರದಲ್ಲಿ ಬಹಳಷ್ಟು ಕ್ರಾಂತಿಕಾರಿ ಬದಲಾವಣೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನಸಾಮಾನ್ಯರು ವ್ಯವಸ್ಥಿತವಾಗಿ ಸಹಕಾರಿ ಕ್ಷೇತ್ರವನ್ನು ಕಟ್ಟಿಕೊಂಡು ಯಶಸ್ವಿಯಾಗಿ ನಿರ್ವಹಣೆ ಮಾಡುತ್ತಿದ್ದಾರೆ ಎಂದರು.
ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ.ದೇವೇಗೌಡ, ಶಾಸಕರಾದ ಡಾ.ಭರತ್ ಶೆಟ್ಟಿ ವೈ., ಯಶ್‌ಪಾಲ್ ಎ. ಸುವರ್ಣ, ಮೂಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಮಂಗಳೂರು ಮೇಯರ್ ಮನೋಜ್ ಕುಮಾರ್ ಕೋಡಿಕಲ್, ಕೆ.ಎಸ್. ನವೀನ್, ಗುರುಸ್ವಾಮಿ, ರಮೇಶ್, ಪ್ರಸಾದ್ ರೆಡ್ಡಿ, ಜಯಕರ ಶೆಟ್ಟಿ ಇಂದ್ರಾಳಿ, ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ, ಪ್ರಸಾದ್ ಕೌಶಲ್ ಶೆಟ್ಟಿ, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕಿ ಲಾವಣ್ಯ ಕೆ.ಆರ್., ಎಸ್ ಸಿಡಿಸಿಸಿ ಬ್ಯಾಂಕ್ ಸಿಇಒ ಗೋಪಾಲಕೃಷ್ಣ ಭಟ್, ನಿರ್ದೇಶಕ ವಿನಯ್ ಕುಮಾರ್ ಸೂರಿಂಜೆ ಮತ್ತಿತರರು ಉಪಸ್ಥಿತರಿದ್ದರು.
ಎಸ್ ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಬೆಳಪು ದೇವಿಪ್ರಸಾದ್ ಶೆಟ್ಟಿ ಅವರು ಪ್ರಾಸ್ತಾವಿಕ ಮಾತನ್ನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಟಿ.ಜಿ.ರಾಜರಾಮ ಭಟ್ ವಂದಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉತ್ತಮ ಸಹಕಾರಿ ಸಂಘಗಳನ್ನು ಗುರುತಿಸಿ ”ಸಹಕಾರ ಮಾಣಿಕ್ಯ“ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಶಸ್ತಿ ಜೊತೆಗೆ 5 ಗ್ರಾಂ. ಚಿನ್ನದ ಪದಕ, 10000 ರೂ. ನಗದು ಹಾಗೂ ಪಾರಿತೋಷಕ ನೀಡಲಾಯಿತು. ಪತ್ರಿಕಾ ರಂಗದ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಇಂದಾಜೆ ಅವರಿಗೆ ನೀಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು