12:36 PM Thursday16 - January 2025
ಬ್ರೇಕಿಂಗ್ ನ್ಯೂಸ್
ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ…

ಇತ್ತೀಚಿನ ಸುದ್ದಿ

ಸಾಹಿತಿ ಡಾ. ಸಿ. ಸೋಮಶೇಖರ್ ಅವರ ‘ನೀನೊಲಿದ ಬದುಕು’ ಆತ್ಮಕಥೆ ಲೋಕಾರ್ಪಣೆ

22/02/2023, 00:03

ಮಂಗಳೂರು(reporterkarnataka.com): ಜೀವನಾನುಭವದ ಜೊತೆ ಆತ್ಮವಿಶ್ವಾಸ ಮತ್ತು ಆತ್ಮಸ್ಥೆ ರ್ಯ ಅಗತ್ಯ ಎಂದು ಕಾಸರಗೋಡು ಎಡನೀರು ಮಠದ ಶ್ರೀ ಸಚ್ಚಿದಾನಂದಭಾರತೀ ಸ್ವಾಮೀಜಿ ಹೇಳಿದರು.


ಕಲ್ಕೂರ ಪ್ರತಿಷ್ಠಾನ, ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ದ.ಕ. ಜಿಲ್ಲಾ ಸಮಿತಿ, ಸ್ನಾತಕೋತ್ತರ ತುಳು ಅಧ್ಯಯನ ವಿಭಾಗ, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಆಶ್ರಯದಲ್ಲಿ ನಗರದ ವಿ.ವಿ. ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಮಂಗಳವಾರ ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಮತ್ತು ಸಾಹಿತಿ ಡಾ. ಸಿ. ಸೋಮಶೇಖರ ಅವರ ‘ನೀನೊಲಿದ ಬದುಕು’ ಆತ್ಮಕಥನ ಲೋಕಾರ್ಪಣಾ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು.


ಸೋಮಶೇಖರ್ ಅವರು ಕೃತಿಯನ್ನು ಈಗಾಗಲೇ ಮುಖ್ಯಮಂತ್ರಿಗಳು ಬಿಡುಗಡೆಗೊಳಿಸಿದ್ದಾರೆ. ಇದೀಗ ದ.ಕ. ಜಿಲ್ಲೆಯ ಬಗ್ಗೆ ಅವರಿಗಿರುವ ಅಭಿಮಾನದಿಂದ ಇಲ್ಲಿ ಮತ್ತೊಮ್ಮೆ ಲೋಕಾರ್ಪಣೆಗೊಳಿಸುತ್ತಿದ್ದಾರೆ. ಸೋಮಶೇಖರ್ ಅವರು ಅಧಿಕಾರಿಯಾಗಿ ದಕ್ಷತೆಯಿಂದ ತಮ್ಮ ಕೆಲಸಕ್ಕೆ ನ್ಯಾಯ ಒದಗಿಸಿದ್ದಾರೆ. ಪ್ರಾಧಿಕಾರದ ಮೂಲಕ ಕಾಸರಗೋಡು ಜಿಲ್ಲೆಯಲ್ಲಿ ಜನಪರ ಕರ್ತವ್ಯ ನಿರ್ವಹಿಸಿದ್ದಾರೆ. ಕಾಸರಗೋಡು ಕನ್ನಡಿಗರಿಗೆ ಆಗುವ ಅನ್ಯಾಯಗಳ ವಿರುದ್ದ ಸ್ಪಂದಿಸಿ ಪರಿಹಾರ ಕಂಡುಕೊಂಡಿದ್ದಾರೆ ಎಂದು ತಿಳಿಸಿದರು.


ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ದ.ಕ.ಜಿಲ್ಲಾ
ಜಾನಪದ ಅಕಾಡೆಮಿ ಅಧ್ಯಕ್ಷ ಪ್ರವೀಣ್ ಕುಮಾರ್ ಕೊಡಿಯಾಲಬೈಲ್, ವಿ.ವಿ. ಸಂಧ್ಯಾ ಕಾಲೇಜು ಪ್ರಾಂಶುಪಾಲ ಡಾ. ಲಕ್ಷ್ಮಿದೇವಿ ಎಲ್., ಎ.ಆರ್. ಸುಬ್ಬಯ್ಯಕಟ್ಟೆ ಸೇರಿದಂತೆ ಮತ್ತಿತರರು ಇದ್ದರು.

ಹಿರಿಯ ಸಾಹಿತಿ ಮತ್ತು ವಿಶ್ರಾಂತ ಕುಲಪತಿ ಪ್ರೊ| ಬಿ.ಎ. ವಿವೇಕ ರೈ ಅವರು ಕೃತಿ ಬಿಡುಗಡೆಗೊಳಿಸಿ ಮಾತನಾಡಿದರು.
ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಽಕಾರದ ಅಧ್ಯಕ್ಷ ಡಾ| ಸಿ. ಸೋಮಶೇಖರ ಅವರು ಮಾತನಾಡಿದರು. ಕನ್ನಡ ಸಾಹಿತ್ಯ ಪರಿಷತ್ ಮಾಜಿ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಪ್ರಸ್ತಾವನೆಗೈದರು. ದ.ಕ.ಜಿ.ಪಂ. ಸಿಇಒ ಡಾ| ಕುಮಾರ್ ಕೃತಿ ಪರಿಚಯಿಸಿದರು.


ಮಂಗಳೂರು ವಿ.ವಿ. ಸ್ನಾತಕೋತ್ತರ ತುಳು ವಿಭಾಗ ಸಂಯೋಜಕ ಡಾ| ಮಾಧವ ಎಂ.ಕೆ. ಸ್ವಾಗತಿಸಿ, ಉಪನ್ಯಾಸಕಿ ಜಯಲಕ್ಷ್ಮಿ ಶೆಟ್ಟಿ ವಂದಿಸಿದರು. ಡಾ| ಪ್ರಿಯಾ ಹರೀಶ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು