1:53 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಸಾಹಿತ್ಯ ಸೇವೆ: ಹಂಪಿಯಲ್ಲಿ ಡಾ. ವಾಣಿಶ್ರೀ ಕಾಸರಗೋಡು ಅವರಿಗೆ ರಾಜ್ಯಮಟ್ಟದ ಕಾವ್ಯಶ್ರೀ ಪ್ರಶಸ್ತಿ ಪ್ರದಾನ

27/02/2023, 16:34

ಕಾಸರಗೋಡು(reporterkarnataka.com):ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನ ಹಡಗಲಿ ಹಾಗೂ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ವಿಜಯನಗರ ಇದರ ಸಹಯೋಗದೊಂದಿಗೆ ಹಂಪಿಯ ಶ್ರೀ ಶಿವರಾಮ ಅವಧೂತರ ಆಶ್ರಮ ಹೇಮಕೂಟದಲ್ಲಿ ನಡೆದ ಸಾವಿರ ಕಾವ್ಯ ಗೋಷ್ಠಿಯ ಸಂಭ್ರಮದಲ್ಲಿ ಸಾಹಿತಿ ಹಾಗೂ ಕಾಸರಗೋಡಿನ ವೈದ್ಯೆ ಆಗಿರುವ
ಡಾ ವಾಣಿಶ್ರೀ ಕಾಸರಗೋಡು ಅವರಿಗೆ ರಾಜ್ಯಮಟ್ಟದ ಕಾವ್ಯಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮಧು ನಾಯ್ಕ ಲಂಬಾಣಿ ಅವರ ನೇತೃತ್ವದಲ್ಲಿ ಭಾನುವಾರ ವಿಶ್ವ ವಿಖ್ಯಾತ ಹಂಪಿಯ ಹೇಮಕೂಟದಲ್ಲಿ ನಡೆದ ಸಾವಿರ ಕಾವ್ಯ ಗೋಷ್ಠಿಯ ಸಂಭ್ರಮದಲ್ಲಿ ಪ್ರಶಸ್ತಿ ಪ್ರದಾನ ನೆರವೇರಿತು.
ಕಾಸರಗೋಡಿನ ನೆಲ್ಲಿಕಟ್ಟೆ ಚೂರಿಪ್ಪಳ್ಳದ ಪ್ರಕೃತಿ ಆಯುರ್ವೇದ ಆಸ್ಪತ್ರೆಯ ವೈದ್ಯೆ ಆಗಿರುವ ಸಾಹಿತಿ ಡಾ.ವಾಣಿಶ್ರೀ ಕಾಸರಗೋಡು ಅವರನ್ನು ಅವರ ಸಾಹಿತ್ಯ ಸೇವೆಯನ್ನು ಗುರುತಿಸಿ ಅವರಿಗೆ ರಾಜ್ಯ ಮಟ್ಟದ ಕಾವ್ಯಶ್ರೀ ಪ್ರಶಸ್ತಿ ನೀಡಿ ಹಲವಾರು ಗಣ್ಯರ ಸಮ್ಮುಖದಲ್ಲಿ ಗೌರವಿಸಲಾಯಿತು.

ಡಾ ವಾಣಿಶ್ರೀ ಕಾಸರಗೋಡು ಅವರು ಗಡಿನಾಡು ಕಾಸರಗೋಡಿನಲ್ಲಿ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಘ (ರಿ.) ಕಾಸರಗೋಡು ಎಂಬ ಸಂಸ್ಥೆಯನ್ನು ಸ್ಥಾಪಿಸಿ ನಿರಂತರ ಸಾಹಿತ್ಯ, ಸಾಂಸ್ಕೃತಿಕ ಹಾಗೂ ಕನ್ನಡ ಪರ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಕಾಸರಗೋಡಿನಲ್ಲಿ ಕನ್ನಡ ಭಾಷೆಯ ಉಳಿಸಿ ಬೆಳೆಸಲು ತುಂಬಾ ಉತ್ಸಾಹದಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು