2:02 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ…

ಇತ್ತೀಚಿನ ಸುದ್ದಿ

ಸಾಹಿತ್ಯದಿಂದ ಮನಸ್ಸು ಕಟ್ಟುವ ಕಾರ್ಯ ನಡೆಯಲಿ: ಕಟೀಲಿನಲ್ಲಿ ಸಂಪನ್ನಗೊಂಡ ಶಿಕ್ಷಕ ಸಾಹಿತ್ಯ ಸಮ್ಮೆಳನದಲ್ಲಿ ಡಾ. ಹರಿಕೃಷ್ಣ ಪುನರೂರು

08/09/2024, 12:58

ಕಟೀಲು(reporterkarnataka.com): ಸಾಹಿತ್ಯ ಸಮ್ಮೇಳನಗಳು ಒಳ್ಳೆಯ ಮನಸ್ಸುಗಳನ್ನು ಕಟ್ಟುವ ಕಾರ್ಯ ಮಾಡಬೇಕು. ಸಾಹಿತ್ಯ ಯಾವುದೇ ಪ್ರಕಾರದಲ್ಲಿದ್ದರೂ ಓದುಗರು ಮೆಚ್ಚುವಂತಿರಬೇಕು. ಶಿಕ್ಷಕರು ಸಾಹಿತ್ಯ ಸಮ್ಮೇಳನಗಳಲ್ಲಿ ಭಾಗವಹಿಸಿ ಒಳ್ಳೆಯ ವಿಚಾರಗಳನ್ನು ಜನರಿಗೆ ನೀಡಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಡಾ. ಹರಿಕೃಷ್ಣ ಪುನರೂರು ಹೇಳಿದರು.
ಅವರು ಕಟೀಲು ಕೇತ್ರದ ಸರಸ್ವತಿ ಸಭಾಭವನದಲ್ಲಿ ಏರ್ಪಡಿಸಲಾದ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ರಾಜ್ಯಮಟ್ಟದ ಶಿಕ್ಷಕ ಸಾಹಿತಿಗಳ 7ನೇ ಸಮ್ಮೇಳನದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಆನುವಂಶಿಕ ಅರ್ಚಕರಾದ ಹರಿನಾರಾಯಣ ಆಸ್ರಣರು ದೀಪಪ್ರಜ್ವಲನೆ ಮಾಡಿ ಸಮ್ಮೇಳನಕ್ಕೆ ಚಾಲನೆ ನೀಡಿದರು. ಶ್ರೀ ಕ್ಷೇತ್ರದಲ್ಲಿ ಕಲೆ, ಸಂಸ್ಕೃತಿ ಮತ್ತು ಸಾಹಿತ್ಯಕ್ಕೆ ವಿಶೇಷ ಪ್ರೋತ್ಯಾಹ ನೀಡಲಾಗುತ್ತದೆ. ಶ್ರೀದೇವಿಯ ಅನುಗ್ರಹದಿಂದ ಕ್ಷೇತ್ರದಲ್ಲಿ ಭಕ್ತಾದಿಗಳ ಇಷ್ಟಾರ್ಥವು ನೆರವೇರುತ್ತವೆ ಎಂದು ಆಶೀರ್ವಚನ ನೀಡಿದರು. ಹೊಸಕೋಟೆಯ ಹಿರಿಯ ಶಿಕ್ಷಕ ಸಾಹಿತಿ ಶ್ರೀಕಾಂತ್ ಕೆ.ವಿ. ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿದ್ದರು. ಕ.ಚು.ಸಾ.ಪ.ರಾಜ್ಯ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ, ಉಡುಪಿ ಜಿಲ್ಲಾಧ್ಯಕ್ಷ ಜಿ.ಯು. ನಾಯಕ , ಉಪಾಧ್ಯಕ್ಷ ರಾಜು ಆಚಾರ್ಯ, ಕಾರ್ಯದರ್ಶಿ ಶಾಂತ ಪುತ್ತೂರು, ಶೇಖರ ಗೌಡ ಪಾಟೀಲ ರಟ್ಟಿಹಳ್ಳಿ ಉಪಸ್ಥಿತರಿದ್ದರು.
ದ.ಕ. ಜಿಲ್ಲಾ ಅಧ್ಯಕ್ಷ ಜಯಾನಂದ ಪೆರಾಜೆ ಸ್ವಾಗಿತಿಸಿದರು. ಅಪೂರ್ವ ಕಾರಂತ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು