5:48 AM Thursday9 - July 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ…

ಇತ್ತೀಚಿನ ಸುದ್ದಿ

ಸೈಂಟ್‌ ವಿನ್ಸೆಂಟ್‌ ಡಿ. ಪಾವ್ಲ್ ಸೊಸೈಟಿಯ ಶತಮಾನೋತ್ಸವ ವರ್ಷಾಚರಣೆಗೆ ಚಾಲನೆ

10/02/2025, 21:32

ಮಂಗಳೂರು(reporterkarnataka.com): ಮಂಗಳೂರು ಧರ್ಮಪ್ರಾಂತದ ಸೈಂಟ್‌ ವಿನ್ಸೆಂಟ್‌ ಡಿ. ಪಾವ್ಲ್ ಸೊಸೈಟಿಯ ಶತಮಾನೋತ್ಸವದ ಉದ್ಭಾಟನಾ ಸಮಾರಂಭ ಭಾನುವಾರ ನಗರದ ಬಿಜೈ ಚರ್ಚ್‌ ಸಭಾಂಗಣದಲ್ಲಿ ನಡೆಯಿತು.
ಮಂಗಳೂರು ಧರ್ಮಪ್ರಾಂತದ ವಿಕಾರ್‌ ಜನರಲ್‌ ಮೊನಿಜರ್‌ ವಂ। ಮ್ಯಾಕ್ಸಿಂ ಎಲ್‌. ನೊರೊನ್ಹಾ ಶತಮಾನೋತ್ಸವದ ಲಾಂಛನ ಬಿಡುಗಡೆ ಮಾಡಿ ಮಾತನಾಡಿ, ನೂರು ವರ್ಷಗಳಿಂದ ಎಸ್‌ವಿಪಿ ಸಂಘಟನೆಯ ಮೂಲಕ ಧರ್ಮಪ್ರಾಂತದಲ್ಲಿ ಅನೇಕ ಒಳ್ಳೆಯ ಕೆಲಸಗಳಾಗಿವೆ. ಬಡ ವರ್ಗದ ಕಷ್ಟಗಳಿಗೆ ನೆರವಾಗಲಾಗಿದೆ. ಹಲವಾರು ಕುಟುಂಬಗಳ ಕಣ್ಣೀರು ಒರೆಸುವ ಕೆಲಸಗಳಾಗಿವೆ. ಧರ್ಮಪ್ರಾಂತ್ಯ ವ್ಯಾಪ್ತಿಯಲ್ಲಿ ಸದ್ದಿಲ್ಲದೆ ಕೆಲಸ ಮಾಡುವ ಸಂಘಟನೆಯಾಗಿದೆ. ದೇವರ ಕೃಪೆ ಇದ್ದಲ್ಲಿ ನಮ್ಮ ಅಸಾಹಾಯಕತೆಯಲ್ಲೂ ಉತ್ತಮ ಕಾರ್ಯಗಳನ್ನುಮಾಡಲು ಸಾಧ್ಯವಿದೆ ಎಂದರು.
ಮಂಗಳೂರು ಸೆಂಟ್ರಲ್‌ ಕೌನ್ಸಿಲ್‌ನ ಆಧ್ಯಾತ್ಮಿಕ ಸಲಹೆಗಾರ ವಂ। ಫ್ರಾನಿಸ್‌ ಡಿ’ಸೋಜಾ ಶತಮಾನೋತ್ಸವದ ಫೋಷಣೆ ವಾಕ್ಯವನ್ನು ಬಿಡುಗಡೆಗೊಳಿಸಿ ಮಾತನಾಡಿ, ಮಂಗಳೂರು ಧರ್ಮಪ್ರಾಂತ್ಯದಲ್ಲಿ ಕಳೆದ ನೂರು ವರ್ಷಗಳಲ್ಲಿ ಹೊಸ ಶಕೆಯನ್ನು ಸಂಘಟನೆ ಬರೆದಿದೆ. ಹಿರಿಯರ ಮೂಲಕ ಸೇವೆ ಮಾಡಲು ಹಾಗೂ ಬಡವರ್ಗಕ್ಕೆ ನೆರವಾಗುವ ಕಾರ್ಯ ವಿಶಿಷ್ಟವಾದುದು. ವಿದ್ಯಾರ್ಥಿವೇತನ, ಬಡ ಕುಟುಂಬಗಳಿಗೆ ಆರ್ಥಿಕ ನೆರವು, ರೋಗಿಗಳಿಗೆ ಚಿಕಿತ್ಸೆಗೆ ಧನ ಸಹಾಯ ಸಹಿತ ನೂರಾರು ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿವೆ ಎಂದರು.


ಸೆಂಟ್ರಲ್‌ ಕೌನ್ಸಿಲ್‌ನ ಅಧ್ಯಕ್ಷ ಜ್ಯೋ ಕುವೆಲ್ಲೋ ಮಾತನಾಡಿ, ಶತಮಾನೋತ್ಸವದ ಸವಿನೆನಪಿಗಾಗಿ ಅನೇಕ ಯೋಜನೆಗಳನ್ನು ರೂಪಿಸಿದೆ. ಅವುಗಳಲ್ಲಿ ಪ್ರಮುಖವಾಗಿ ಎಸ್‌.ಎಸ್‌.ವಿ.ಪಿ.ಯ ದತ್ತು ಕುಟಂಬಗಳ ಸುಮಾರು 408 ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ನೆರವು, ‘ಆಸ್ರೊ’ ನೂರು ಕುಟಂಬಗಳಿಗೆ ತಮ್ಮ ಮನೆಗಳನ್ನು ನಿರ್ಮಿಸಲು ಅಥವಾ ದುರಸ್ತಿ ಮಾಡಲು ಧನ ಸಹಾಯ ನೀಡಲು ನಿರ್ಧಾರ ಮಾಡಲಾಗಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು