9:04 PM Tuesday22 - April 2025
ಬ್ರೇಕಿಂಗ್ ನ್ಯೂಸ್
Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್…

ಇತ್ತೀಚಿನ ಸುದ್ದಿ

ಶಿವಮೊಗ್ಗ ಜನೌಷಧಿ ಕೇಂದ್ರದಲ್ಲಿ ಇತರ ಔಷಧಿ, ಮಾತ್ರೆಗಳ ಮಾರಾಟ: ವಿಧಾನ ಪರಿಷತ್ತಿನಲ್ಲಿ ಬಿಜೆಪಿಯ ಡಿ.ಎಸ್.ಅರುಣ್ ಪ್ರಸ್ತಾಪ

20/03/2025, 21:46

ಬೆಂಗಳೂರು(reporterkarnataka.com): ಶಿವಮೊಗ್ಗದಲ್ಲಿ ಪ್ರಧಾನ ಮಂತ್ರಿ ಜನಔಷಧಿ ಕೇಂದ್ರದಲ್ಲಿ ಇತರೆ ಔಷಧಿ ಮತ್ತು ಮಾತ್ರೆಗಳನ್ನು ಮಾರಾಟ ಮಾಡುತ್ತಿರುವ ಕುರಿತು ಶೂನ್ಯ ವೇಳೆಯಲ್ಲಿ
ವಿಧಾನ ಪರಿಷತ್ ಸದಸ್ಯ ಬಿಜೆಪಿಯ ಡಿ.ಎಸ್.ಅರುಣ್ ಅವರು ವಿಷಯ ಪ್ರಸ್ತಾಪಿಸಿದರು.
ಶಿವಮೊಗ್ಗದ ಜನ ಔಷಧಿ ಕೇಂದ್ರದಲ್ಲಿ ಇತರೆ ಔಷಧಿಗಳು ಮಾರಾಟ ಮಾಡುತ್ತಿರುವ ಬಗ್ಗೆ ಜಿಲ್ಲಾ ಔಷಧಿ ವ್ಯಾಪಾರಗಳ ಸಂಘ ಹಾಗೂ ಜನೌಷಧಿ ವ್ಯಾಪಾರಗಳು ಪರಸ್ಪರ ಒಬ್ಬರ ಮೇಲೊಬ್ಬರು ಆರೋಪಿಸಿಕೊಳ್ಳುತ್ತಿರುವ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಇದಕ್ಕೊಂದು ಪರಿಹಾರ ಕಲ್ಪಿಸಿ ಕೊಡಬೇಕೆಂದು ಸದಸ್ಯರು ಆಗ್ರಹಿಸಿದರು.
ಪ್ರಧಾನ ಮಂತ್ರಿ ಜನಔಷಧಿ ಕೇಂದ್ರದ ಪ್ರಮುಖ ಉದ್ದೇಶವೆಂದರೆ ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲದೆ, ಬ್ರ್ಯಾಂಡ್ ಔಷಧಿಗಳಿಗಿಂತ ತುಂಬಾ ಕಡಿಮೆ ದರದಲ್ಲಿ ಬಡವರಿಗೆ ಹಾಗೂ ಅಗತ್ಯತೆ ಇರುವವರಿಗೆ ಸುಲಭವಾಗಿ ಔಷಧಿಗಳನ್ನು ಲಭ್ಯವಾಗಿಸುವುದೆ ಮೂಲ ಉದ್ದೇಶವಾಗಿರುತ್ತದೆ.
ಕೇಂದ್ರ ಸರ್ಕಾರದ ಜನೌಷಧಿ ಕೇಂದ್ರಗಳಲ್ಲಿ 2047 ವಿಧದ ಔಷಧಿಗಳು ಮತ್ತು 300 ಶಾಸ್ತ್ರ ಚಿಕಿತ್ಸೆ ವಸ್ತುಗಳು ಸಿಗುವಂತಿದ್ದು, ಕರ್ನಾಟಕ ರಾಜ್ಯದಲ್ಲಿ 950ಕ್ಕೂ ಹೆಚ್ಚು ಜನೌಷಧಿ ಕೇಂದ್ರಗಳಿದ್ದು, ಶಿವಮೊಗ್ಗ ನಗರದಲ್ಲಿ 14 ಜನೌಷದಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ, ಶಿವಮೊಗ್ಗದ ಜನೌಷಧಿ ಕೇಂದ್ರಗಳು ಜನರಿಕ್ ಔಷಧಿಗಳನ್ನು ತಂದು ಜನ ಔಷಧಿ ಬೆಲೆಗೆ ಸಮಾನವಾಗಿ 5-10 ರೂ ಲಾಭದಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ತಿಳಿಸಿ,ಬಿಪಿಪಿಎಐ ಸಂಸ್ಥೆ ಪಿಎಂಡಿಐ ರೂಪಾಂತರ ಹೊಂದಿ ನಿಯಮಾವಳಿಯಲ್ಲಿ ಹಲವಾರು ಮಾರ್ಪಾಡುಗಳನ್ನು ಮಾಡಿದ್ದು ಅದರಲ್ಲಿ ಜನರಿಕ್ ಔಷಧಿಗಳನ್ನು ಮಾರಬಾರದೆಂಬ ನಿಯಮವು ಸೇರಿದೆ, ಅದಾಗಿಯೂ ಜನ ಔಷಧಿ ಕೇಂದ್ರಗಳಲ್ಲಿ ಭಾರತೀಯ ಜನ ಔಷಧಿ ಪರಿ ಯೋಜನೆ ಮೋಹರಿಲ್ಲದೆ ಅಸಂಖ್ಯಾತ ಔಷಧಿಗಳನ್ನು ಅವ್ಯಾಹತವಾಗಿ ಮಾರಾಟ ಮಾಡುತ್ತಿದ್ದು, ಇದು ಜನ ಔಷಧಿ ಕೇಂದ್ರಗಳು ಸಂಬಂಧಪಟ್ಟ ಪ್ರಾಧಿಕಾರದ ಜೊತೆ ಮಾಡಿಕೊಂಡ ಒಪ್ಪಂದದ ಸ್ಪಷ್ಟ ಉಲ್ಲಂಘನೆ ಆಗಿರುತ್ತದೆ ಎಂಬ ಮಾಹಿತಿಯನ್ನು ಸದಸ್ಯರು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಕೂಸಾದ ಜನೌಷಧಿ ಕೇಂದ್ರವನ್ನು ಪ್ರಾರಂಭದಲ್ಲಿ ಇದ್ದಂತೆ ಮೂಲ ರೂಪದಲ್ಲೇ ಉಳಿಸಿಕೊಳ್ಳಬೇಕು ಹಾಗೂ 2027ರ ಒಳಗೆ ದೇಶದಲ್ಲಿ 25,000 ಜನೌಷಧಿ ಕೇಂದ್ರಗಳನ್ನು ತೆರೆಯುವ ಗುರಿಯನ್ನು ಹೊಂದಿರುವ ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡಿ,ಕೇಂದ್ರ ಸರ್ಕಾರ ರೂಪಿಸಿರುವ ನಿಯಮಾವಳಿಯಲ್ಲಿಯೇ ಜನೌಷಧಿಗಳು ಕಾರ್ಯನಿರ್ವಹಿಸುವಂತಾಗಬೇಕು ನಿಯಮಬಾಹಿರವಾಗಿ ಜನೌಷದಿ ಕೇಂದ್ರಗಳಲ್ಲಿ ಜನರಿಕ್ ಔಷಧಿಗಳನ್ನು ತಂದು ಜನೌಷದಿ ಬೆಲೆಗೆ ಮಾರಾಟ ಮಾಡುತ್ತಿರುವ ಕುರಿತು, ರಾಜ್ಯ ಸರಕಾರ ನಿಗಾ ವಹಿಸಿ ಪ್ರಧಾನಮಂತ್ರಿ ಅವರ ಅತ್ಯುತ್ತಮ ಕಾರ್ಯಕ್ರಮವನ್ನು ಬುಡಮೇಲು ಮಾಡುತ್ತಿರುವ ಎಲ್ಲಾ ಜನ ಔಷಧಿ ಕೇಂದ್ರಗಳ ಮೇಲೆ ರಾಜ್ಯದಲ್ಲಿ ನೋಡೆಲ್ ಅಧಿಕಾರಿಗಳು ನಿರಂತರವಾಗಿ ದಾಳಿ ನಡೆಸಿ ಯಾರು ಜನ ಔಷಧಿ ಕೇಂದ್ರಗಳಲ್ಲಿ ಬೇರೆ ಬೇರೆ ಔಷಧಿಗಳನ್ನು ಮಾರುತ್ತಿದ್ದಾರೋ ಅಂಥವರ ಮೇಲೆ ಕಾನೂನು ಕ್ರಮವನ್ನು ಜರಗಿಸಿ ಸಂಪೂರ್ಣವಾಗಿ ಬಂದ್ ಮಾಡಬೇಕೆಂದು ಶೂನ್ಯ ವೇಳೆಯಲ್ಲಿ ಆರೋಗ್ಯ ಸಚಿವರನ್ನು ಒತ್ತಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು