12:49 PM Wednesday21 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಸಾಲಿಗ್ರಾಮ ಪ.ಪಂ.: ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡಿದ್ದಲ್ಲಿ ಕಾನೂನು ಕ್ರಮದ ಎಚ್ಚರಿಕೆ

21/07/2023, 20:48

ಉಡುಪಿ(reporterkarnataka.com): ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪಿಯಲ್ಲಿ ಸಾರ್ವಜನಿಕರು, ಅಂಗಡಿ ಮಾಲೀಕರು, ಸಗಟು ಮಾರಾಟಗಾರರು, ಚಿಲ್ಲರೆ ವ್ಯಾಪಾರಿ ಮತ್ತು ಮಾರಾಟಗಾರರು ಪರಿಸರಕ್ಕೆ ಹಾನಿಯುಂಟು ಮಾಡುವಂತಹ ನಿಷೇಧಿತ ಪಾಸ್ಟಿಕ್ ವಸ್ತುಗಳನ್ನು ಬಳಕೆ ಮತ್ತು ಮಾರಾಟ, ಸಂಗ್ರಹಣೆ, ಸಾಗಾಣಿಕೆ ಮಾಡದಂತೆ ಈಗಾಗಲೇ ಹಲವಾರು ಬಾರಿ ತಿಳಿಸಿದ್ದರೂ ನಿಷೇಧಿತ ಬ್ಲ್ಯಾಸ್ಟಿಕ್ ವಸ್ತುಗಳನ್ನು ಬಳಸುತ್ತಿರುವುದು ಕಂಡುಬರುತ್ತಿದೆ.
ಪರಿಸರಕ್ಕೆ ಹಾನಿಯುಂಟು ಮಾಡುವ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ತಕ್ಷಣವೇ ನಿಲ್ಲಿಸಬೇಕು. ತಪ್ಪಿದಲ್ಲಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಪಟ್ಟಣ ಪಂಚಾಯತ್ ವತಿಯಿಂದ ವಶಪಡಿಸಿಕೊಳ್ಳುವುದರ ಜೊತೆಗೆ ಈ ಅಧಿಸೂಚನೆಯನ್ನು ಉಲ್ಲಂಘಿಸುವವರ ವಿರುದ್ಧ ಸೂಕ್ತ ದಂಡ ವಿಧಿಸಿ, ಉದ್ಯಮ ಪರವಾನಿಗೆ ರದ್ದುಪಡಿಸಿ ಸಂಬAಧಪಟ್ಟ ನ್ಯಾಯಾಲಯದಲ್ಲಿ ಪರಿಸರ ಸಂರಕ್ಷಣೆ ಕಾಯ್ದೆಯಡಿ ದೂರು ದಾಖಲಿಸಿ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು