10:23 AM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಸಮಾಜದಲ್ಲಿ ಮಕ್ಕಳನ್ನು ಗೌರವದಿಂದ ಕಾಣಬೇಕು: ಶರಣಗೌಡ

06/01/2022, 10:56

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಸಮಾಜದಲ್ಲಿ ಮಕ್ಕಳನ್ನು ಗೌರವದಿಂದ, ಪ್ರೀತಿ ವಾತ್ಸಲ್ಯದಿಂದ, ಮಮಕಾರದಿಂದ ಉತ್ತಮ ರೀತಿಯಲ್ಲಿ ನೋಡಿಕೊಳ್ಳಬೇಕು. ಪಾಲಕರು ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಬೇಕು.

ಮುಂದೊಂದು ದಿನ ವಿದ್ಯಾವಂತರಾಗಿ ಸಮಾಜದಲ್ಲಿ ಉನ್ನತ ಸ್ಥಾನದಲ್ಲಿರುವಾಗ ತಂದೆ-ತಾಯಿಗೆ ಕಲಿಸಿದ ಶಾಲೆಗೆ ಮತ್ತು ಶಿಕ್ಷಕರಿಗೆ ಗೌರವ, ಪ್ರೀತಿ ಸಿಗುತ್ತದೆ ಎಂದು ಮಸ್ಕಿ ವಿಭಾಗದ ವಾಟಗಲ್ ಗ್ರಾಮದಲ್ಲಿ ಜಿಲ್ಲಾ ಸಮನ್ವಯ ಅಧಿಕಾರಿ ಶರಣೆಗೌಡ ಚಿತ್ತಾಪುರ ಹೇಳಿದರು.

15 ವರ್ಷ ಮೇಲ್ಪಟ್ಟ ಎಲ್ಲ ಮಕ್ಕಳಿಗೆ ಕೋವಿಡ್ ಲಸಿಕೆ ಹಾಕುವ ಕುರಿತು ಅವರು ಮಾತನಾಡಿದರು.

ಎಲ್ಲ ಪಾಲಕರು ಮಕ್ಕಳನ್ನು ಗೌರವದಿಂದ ನೋಡಿಕೊಳ್ಳಬೇಕು. ಅಲ್ಲದೆ ಅವರಿಗೆ ಸರಿಯಾದ ಸಂಸ್ಕಾರ ಕಲಿಸಿಕೊಡಬೇಕು. ಸಂಸ್ಕಾರದಿಂದ ಮಕ್ಕಳು ಸಮಾಜದಲ್ಲಿ ನಾವು ಹೇಗೆ ಬದುಕಬೇಕು ಎಂಬುದನ್ನು ತಿಳಿದುಕೊಳ್ಳುತ್ತಾರೆ. ಅಂತಹ ಯುವಕರು ತಮ್ಮ ಪ್ರತಿಭೆಯ ಹೊರಹಾಕಿದಾಗ ಸಾಮಾನ್ಯ ಜ್ಞಾನ ಸಮಾಜಕ್ಕೆ ಮುಟ್ಟುವ ಸಾಧ್ಯತೆ ಇದ್ದು ಮುರಾರ್ಜಿ ವಸತಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳು ಸರಿಯಾದ ಉತ್ತಮ ರೀತಿಯಲ್ಲಿ ಓದಬೇಕು. ಸರಿಯಾದ ಅಂಕವನ್ನು ಪಡೆದುಕೊಂಡಾಗ ಪಾಸಾದಾಗ ಶಾಲೆಗೆ ಮತ್ತು ತಂದೆ-ತಾಯಿಗೆ ಕೀರ್ತಿ ಬರುತ್ತದೆ ಎಂದರು.

ಮಕ್ಕಳ ಬಗ್ಗೆ ಪಾಲಕರು ಗಮನಹರಿಸಿದಾಗ ಮಕ್ಕಳು ಮುಂದೆ ಬರಲು ಸಾಧ್ಯ. ಕಡು ಬಡತನದಲ್ಲಿರುವ ಪಾಲಕರು ಮಕ್ಕಳಿಗೆ ಸರಿಯಾದ ಸಂಸ್ಕಾರ ಕಳಿಸಿಕೊಡಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಉಪನ್ಯಾಸಕರು, ಊರಿನ ಪ್ರಮುಖರು ಸೇರಿದಂತೆ ಇನ್ನಿತರ ಭಾಗವಹಿಸಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು