12:29 AM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ. ಸಿದ್ದಲಿಂಗಯ್ಯ ಸಮಾಧಿ ನಿರ್ಮಿಸಿ: ಛಲವಾದಿ ನಾರಾಯಣಸ್ವಾಮಿ

20/11/2025, 18:48

ಬೆಂಗಳೂರು(reporterkarnataka.com): ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ ಹಾಗೂ ಕವಿ ಡಾ. ಸಿದ್ದಲಿಂಗಯ್ಯ ಅವರ ಸಮಾಧಿ ನಿರ್ಮಿಸಲಿ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ
ಛಲವಾದಿ ನಾರಾಯಣಸ್ವಾಮಿ ಹೇಳಿದರು.
ಸಾಲುಮರದ ತಿಮ್ಮಕ್ಕ ತೀರಿಕೊಂಡ್ರು. ಅವರನ್ನ ವೃಕ್ಷ ಮಾತೆ ಅಂತೀವಿ. ಅವರನ್ನು ಕಲಾಗ್ರಾಮದಲ್ಲಿ ಅಂತ್ಯಕ್ರಿಯೆ ಮಾಡಿದ್ರು. ಯು.ಆರ್ ಅನಂತಮೂರ್ತಿ ಹಾಗೂ ಕವಿ ಡಾ. ಸಿದ್ದಲಿಂಗಯ್ಯ ಅವರದ್ದೂ ಅಲ್ಲೇ ಅಂತ್ಯಕ್ರಿಯೆ ಆಗಿದೆ. ಮೂವರದ್ದೂ ಅಲ್ಲಿ ಸ್ಮಾರಕ ಮಾಡಬೇಕು ಎಂದು ಸರ್ಕಾರಕ್ಕೆ ನಾರಾಯಣಸ್ವಾಮಿ ಒತ್ತಾಯ ಮಾಡಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ನಿನ್ನೆ 7 ಕೋಟಿ ಹಗಲು ದರೋಡೆ ಆಗಿದೆ. ಈ ಸರ್ಕಾರ ಬದುಕಿದೆಯಾ.? ಕೊಪ್ಪಳ, ಮಂಗಳೂರು ನಲ್ಲಿ ಕೂಡ ಆಗಿದೆ ಎಂದು ಅವರು ನುಡಿದರು.
ಬೆಂಗಳೂರಿನಲ್ಲಿ ಹಾಡಹಗಲೇ ದರೋಡೆ ಅಗಿದೆ, ಪತ್ತೆ ಹಚ್ತೀವಿ ಅಂತಾರೆ. ಅತ್ಯಾಚಾರ, ದರೋಡೆ, ಕೊಲೆ ಆಗ್ತಿದೆ. ಇವರಿಗೆ ಯಾವುದನ್ನೂ ತಡೆಯಲು ಆಗ್ತಿಲ್ಲ. ಸೋಶಿಯಲಿಸ್ಟ್ ಮಾತುಗಳನ್ನ ಆಡ್ತಾರೆ. ದಲಿತರ ಬಗ್ಗೆ ಮಾತಾಡ್ತಿದ್ದಾರೆ, 31 ಬಿಲ್‌ನಲ್ಲಿ ಯಾಕೆ ಆ ಬಿಲ್ ಇಲ್ಲ ಎಂದು ಛಲವಾದಿ ಪ್ರಶ್ನಿಸಿದರು.
ಪರಿಶಿಷ್ಟ ಜಾತಿ ಮತ್ತು ವರ್ಗ ಅಂತ ಕೇಂದ್ರ ಸರ್ಕಾರ ಎರಡು ಆಯೋಗ ಮಾಡಿದೆ.ಇಲ್ಲಿ ಆಯೋಗ ಇದೆ, ಕೆಲಸ ಮಾಡ್ತಿಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು