7:29 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಸಮಾಜವೇ ತಲೆತಗ್ಗಿಸುವಂತೆ ಮಾಡಿದ ಕೃತ್ಯ : ಆರು ವರ್ಷದ ಮಗುವನ್ನೇ ಅತ್ಯಾಚಾರ ಮಾಡಿ ಕೊಂದು ಹಾಕಿದ ದುರುಳರು

13/09/2021, 14:58

ತೆಲಂಗಾಣ

ಆರು ವರ್ಷದ ಮಗುವನ್ನೇ ಅತ್ಯಾಚಾರ ಮಾಡಿ ಕೊಂದು ಹಾಕಿದ ಹೃದಯ ವಿದ್ರಾವಕ ಘಟನೆ ತೆಲಂಗಾಣದ ಸಾಯಿದ ಬಾದ್‌ನ ಸಿಂಗರೇನಿ ಕಾಲನಿಯಲ್ಲಿ ನಡೆದಿದೆ.

ಪುಟ್ಟ ಮಗುವಿನ ಮುಗ್ಧತೆಗೂ ಕರಗದ ದುರುಳರ ವಿಕೃತ ಮನಸ್ಸು ಈ ಕೃತ್ಯವನ್ನು ಗೈದಿದೆ. ಭಾರತದಲ್ಲಿ ಸತತವಾಗಿ ಈ ರೀತಿಯ ಪ್ರಕರಣಗಳು ಪ್ರತಿದಿನವೂ ಕೇಳಿ ಬರುತ್ತಿದ್ದು, ಜನರು ಹಾಗೂ ಆಡಳಿತ ವರ್ಗದಲ್ಲಿರುವ ದುರುಳರು ದಿವ್ಯ ಮೌನವನ್ನು ವಹಿಸಿದ್ದಾರೆ.

ಎಳೆಯ ಮಗುವೊ ಇಳಿಯ ಪ್ರಾಯದ ಹೆಂಗಸೊ ಎಂದು ನೋಡದೆ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳು ದೇಶದ ಆಂತರಿಕ ಸುವ್ಯವಸ್ಥೆಯನ್ನೆ ಪ್ರಶ್ನೆ ಮಾಡುತ್ತಿದೆ.

ದೇಶದ ಯಾವುದೇ ಮುಖ್ಯವಾಹಿನಿಯಲ್ಲಿರುವ ಮಾಧ್ಯಮಗಳಲ್ಲಿ ಈ ಪ್ರಕರಣ ಸುದ್ದಿಯಾಗದೆ ಇರುವುದರಿಂದ ಜನರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು