2:10 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಸಾಮಾಜಿಕ ಲೆಕ್ಕ ಪರಿಶೋಧನೆ ವರದಿಯಲ್ಲಿ ಸರಕಾರದ ನಿಯಮಗಳ ಉಲ್ಲಂಘನೆ: ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘದ ಹುಣಸಗಿ ತಾಲೂಕು ಅಧ್ಯಕ್ಷರ ಮನವಿ

10/12/2024, 17:42

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಯಿತಿಯ ಸಾಮಾಜಿಕ ಪರಿಶೋಧನೆ ವರದಿಯು ಸರ್ಕಾರದ ನಿಯಮಗಳನ್ನು ಪಾಲಿಸದೆ ಇರುವುದನ್ನು ಖಂಡಿಸಿ ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘದ ಹುಣಸಗಿ ತಾಲೂಕು ಅಧ್ಯಕ್ಷರಾದ ಶಿವು ರಾಠೋಡ ಅವರಿಂದ ಯಾದಗಿರಿ ಜಿಲ್ಲೆ ಯೋಜನಾ ನಿರ್ದೇಶಕರಾದ ( DRDA) ಚೆನ್ನಬಸವರಾಜ ದೇವರಮನಿ ಅವರಿಗೆ ಲಮನವಿ ಪತ್ರ ಸಲ್ಲಿಸಲಾಯಿತು.
ನಾರಾಯಣಪುರ, ಬರದೇವನಾಳ, ಬೈಲಕುಂಟಿ, ಕಾಮನಟಗಿ ಹಾಗೂ ಬೈಚಬಾಳ ಈ ಎಲ್ಲಾ ಗ್ರಾಮ ಪಂಚಾಯಿತಿಯಲ್ಲಿ ಸರಕಾರ ಹೊರಡಿಸಿರುವ ನಿಯಮಗಳನ್ನು ಒಂದು ಪಾಲಿಸದೆ ತಮ್ಮ ಮನ – ಇಚ್ಛೆ ಬಂದಂತೆ ಗ್ರಾಮ ಪಂಚಾಯಿತಿಯ ಲೆಕ್ಕ ಪರಿಶೋಧನ ಗ್ರಾಮ ಸಭೆಗಳನ್ನು ಮಾಡಿರೋದು ಕಾನೂನು ಬಾಹಿರ ಚಟುವಟಿಕೆಯಾಗಿದೆ ಎಂದು ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘದ ಅಧ್ಯಕ್ಷ ಶಿವು ರಾಠೋಡ ಆರೋಪಿಸಿದ್ದಾರೆ.
ಈ ಮೇಲ್ಕಂಡ ಗ್ರಾಮ ಪಂಚಾಯಿತಿಯ ಲೆಕ್ಕ ಪರಿಶೋಧನ ಗ್ರಾಮ ಸಭೆಯ ಸರಕಾರದ ನಿಯಮ ಅನುಸಾರ ಲೈವ್ ಯೂಟ್ಯೂಬ್ ವಿಡಿಯೋ ಹಾಗೂ ಜಿ.ಪಿ.ಎಸ್. ಫೋಟೋ ಸಮೇತ ಮಾಡುವುದು ಒಂದು ನಿಯಮವಾಗಿದೆ. ಆದರೆ ಇಲ್ಲಿರುವ ಅಧಿಕಾರಿಗಳಾದ ಪಿಡಿಓ ಹಾಗೆ ನೋಡಲ್ ಅಧಿಕಾರಿಗಳು ಅದರ ಜೊತೆಯಲ್ಲಿ ಹುಣಸಗಿ ತಾಲೂಕು ಲೆಕ್ಕ ಪರಿಶೋಧನಾ ವರದಿಯ ಅಧಿಕಾರಿಗಳಾದ ಸಿದ್ದನಗೌಡನವರು ಸರಕಾರದ ನಿಯಮಗಳನ್ನು ಉಲ್ಲಂಘಿಸಿರುವುದು ಖಂಡನೆ ಅಪರಾಧವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು