1:59 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ಸಾಮರಸ್ಯ ಹಾಳು ಮಾಡುವ ಯಾವುದೇ ಮತೀಯ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳಿ; ಯು.ಟಿ. ಖಾದರ್‌ 

07/05/2022, 16:57

ಮಂಗಳೂರು(reporterkarnataka.com): ಸಮಾಜದಲ್ಲಿ ಗೊಂದಲ ಹಾಗೂ ವೈಮನಸ್ಸು ಹುಟ್ಟಿಸುವ ಸಂದೇಶವನ್ನು ಹಾಕುವ ಕಿಡಿಗೇಡಿಗಳ ವಿರುದ್ಧ ಪೊಲೀಸ್‌ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಸಾಮರಸ್ಯ ಹಾಳು ಮಾಡುವ ಯಾವುದೇ ಮತೀಯ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್‌ ಹೇಳಿದರು.

ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಒಂದು ಕಾಲವಿತ್ತು ಸಾಮಾಜಿಕ ಜಾಲತಾಣದಲ್ಲಿ ಇಂತಹ ಸಂದೇಶ ಬಂದಾಗ ಅದರ ಹಿಂದೆ ಬಿದ್ದು,ಅವರ ವಿರುದ್ಧ ಕ್ರಮ ಕೈಗೊಂಡಾಗ ಬೇರೆಯವರು ಇಂತಹ ಕೃತ್ಯದಲ್ಲಿ ತೊಡಗಿಕೊಳ್ಳುವುದಕ್ಕೆ ಹೆದರುತ್ತಿದ್ದರು. ಆದರೆ ಇದೀಗ ಇಂತಹ ಕೃತ್ಯಗಳು ಮತ್ತೆ ಮತ್ತೆ ಮರುಕಳುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.

ಕೆಲದಿನಗಳ ಹಿಂದೆ ಮುಸ್ಲಿಂ ಡಿಫೆನ್ಸ್‌ ಫೋರ್ಸ್‌ (ಎಂಡಿಎಫ್‌) ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶಗಳು ಹರಿದಾಡುತ್ತಿವೆ.

ಸಮಾಜದಲ್ಲಿ ಯಾರು ಹೇಗೆ ಇರಬೇಕು-ಇರಬಾರದು ಎಂಬುವುದನ್ನು ಹೇಳಿಕೊಡಲು ತಂದೆ-ತಾಯಿ, ಕುಟುಂಬಸ್ಥರು ಹಾಗೂ ಧಾರ್ಮಿಕ ಮುಖಂಡರಿದ್ದಾರೆ. ಅದು ಬಿಟ್ಟು ಎಲ್ಲಿಯೋ ಕುಳಿತು ಎಚ್ಚರಿಕೆ ಕೊಡುವಂತರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.ಇದಕ್ಕೆ ಸರ್ಕಾರ ಕಡಿವಾಣ ಹಾಕಬೇಕು. ಇಂತಹ ಕೃತ್ಯ ನಡೆಸುವ ಮತೀಯ ಸಂಘಟನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದರು.

ಮಾಜಿ ಸಚಿವ ಅಭಯಚಂದ್ರ ಜೈನ್‌, ವಿಧಾನಪರಿಷತ್‌ ಶಾಸಕ ಹರೀಶ್‌ ಕುಮಾರ್‌ ಸೇರಿ ಮತ್ತಿತರರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು