12:12 PM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಸಂಬಳ ಕೇಳಿದಕ್ಕೆ ಯುವಕನ ಮರಕ್ಕೆ ಕಟ್ಟಿಹಾಕಿ ಅಮಾನುಷ ಹಲ್ಲೆ, ಚಿತ್ರಹಿಂಸೆ: ವೀಡಿಯೊ ವೈರಲ್; 5 ಮಂದಿ ಆರೋಪಿಗಳ ಬಂಧನ

08/02/2024, 21:44

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಸೋಮ್ಲಾಪುರ ರಸ್ತೆಯ ಪ್ಲಾಂಟೇಶನ್ ನಲ್ಲಿ ಯುವಕನ ಕಟ್ಟಿ ಹಾಕಿ ಅಮಾನುಷವಾಗಿ ಹಲ್ಲೆ ನಡೆಸಿ ಚಿತ್ರಹಿಂಸೆ ನೀಡಿದ ಪ್ರಕರಣ ಸಂಬಂಧಿಸಿದಂತೆ 5 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕಾಫಿನಾಡಲ್ಲಿ ಹೋಟೆಲ್ ಕೆಲಸದ ಸಂಬಳ ಕೇಳಿದ್ದಕ್ಕೆ ಕೊಪ್ಪ ಸಮೀಪದ ಕರ್ಕೇಶ್ವರ ಗ್ರಾಮದ ಸತೀಶ್ ಎಂಬವರನ್ನು
ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಲಾಗಿತ್ತು. ಮರಕ್ಕೆ ಯುವಕನ ಕೈ ಕಾಲು ಕಟ್ಟಿ ಹಾಕಿ 5 ಜನರು ಹಲ್ಲೆ ನಡೆಸಿದ್ದರು. ಹಗ್ಗದಿಂದ ಕೈ ಕಾಲು ಕಟ್ಟಿ ಯುವಕನಿಗೆ ಚಿತ್ರಹಿಂಸೆ ನೀಡಲಾಗಿತ್ತು.
ಯುವಕನ ಮೇಲೆ ಹಲ್ಲೆ ನಡೆಸಿ ವಿಡಿಯೋ ರೆಕಾರ್ಡ್ ಕೂಡ ಮಾಡಲಾಗಿತ್ತು. ಮದ್ಯಪಾನ ಮಾಡುತ್ತ ಯುವಕರ ತಂಡ ಹಲ್ಲೆ ನಡೆಸಿತ್ತು. ಈ ವೀಡಿಯೊ ವೈರಲ್ ಆಗಿತ್ತು. ಆರೋಪಿಗಳ ಬಂಧನಕ್ಕೆ 5 ತಂಡಗಳನ್ನು ರಚಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಆರೋಪಿಗಳಾದ ಮಹೇಶ್, ವಿಠಲ್, ಸಿರಿಲ್, ಸುನೀಲ್ ಹಾಗೂ ಮಂಜು ಎಂಬವರನ್ನು ಬಂಧಿಸಲಾಗಿದೆ.


ಗಂಭೀರ ಗಾಯಗೊಂಡ ಸತೀಶ್ ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು