ಇತ್ತೀಚಿನ ಸುದ್ದಿ
ಸಂಪರ್ಕ್ ಸೇ ಸಮರ್ಥನ್ ಅಭಿಯಾನ: ಕೇಂದ್ರ ಸರಕಾರದ ಸಾಧನೆಯ ಕಿರುಹೊತ್ತಿಗೆ ಹಂಚಿಕೆ
21/07/2023, 21:19

ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಯಶಸ್ವಿಯಾಗಿ 9 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿರುವ ಸಂಪರ್ಕ್ ಸೇ ಸಮರ್ಥನ್ ಅಭಿಯಾನದ ಅಂಗವಾಗ ಶಾಸಕ ವೇದವ್ಯಾಸ ಕಾಮತ್ ಹಾಗೂ ಮಂಡಲ ಅಧ್ಯಕ್ಷ ವಿಜಯ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಪ್ರಮುಖರು ಎಸ್.ಎಲ್. ಶೇಟ್ ಜ್ಯುವೆಲ್ಲರ್ಸ್ & ಡೈಮಂಡ್ಸ್ ಮಾಲಕರಾದ ಪ್ರಶಾಂತ್ ಶೇಟ್ ಅವರ ಮನೆಗೆ ಭೇಟಿ ನೀಡಿ ಕೇಂದ್ರ ಸರಕಾರದ ಸಾಧನೆಗಳ ಕಿರು ಹೊತ್ತಿಗೆ ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಭಾರತ ಇಂದು ಜಾಗತಿಕವಾಗಿ ಸಾಕಷ್ಟು ಬದಲಾವಣೆಗಳನ್ನು ಕಂಡಿದೆ. ಕಾಂಗ್ರೇಸ್ ಆಡಳಿತದ ಸಂದರ್ಭಕ್ಕೂ ಈಗಿನ ಭಾರತಕ್ಕೂ ಸಾಕಷ್ಟು ಬದಲಾವಣೆಗಳಾಗಿವೆ. ದಿನದ 20 ಗಂಟೆಯೂ ದೇಶಕ್ಕಾಗಿ ಶ್ರಮಿಸುವ ನರೇಂದ್ರ ಮೋದಿ ಅವರನ್ನು ಗೆಲ್ಲಿಸಲು ಸಹಕಾರ ನೀಡಬೇಕು ಎಂದರು.
ದೇಶದ ಸುರಕ್ಷತೆಗಾಗಿ ಕೇಂದ್ರ ಸರಕಾರ ಮಹತ್ವಪೂರ್ಣ ಹೆಜ್ಜೆಯಿರಿಸಿದೆ ನೀಡಿದೆ. ಆರ್ಟಿಕಲ್ 370 ರದ್ದುಪಡಿಸುವ ಮೂಲಕ ಕಾಶ್ಮೀರವನ್ನು ಈ ದೇಶದಲ್ಲಿ ಉಳಿಸಿಕೊಳ್ಳುವ ಗಟ್ಟಿತನ ತೋರಿಸಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಸಂಧ್ಯಾ ಮೋಹನ್ ಆಚಾರ್ಯ, ಬಿಜೆಪಿ ಮುಖಂಡರಾದ ನಿತಿನ್ ಕುಮಾರ್, ರೂಪಾ ಡಿ ಬಂಗೇರ, ರಮೇಶ್ ಹೆಗ್ಡೆ, ಗುರುಚರಣ್, ಗೋಕುಲ್ ದಾಸ್ ಭಟ್, ಮೋಹನ್ ಆಚಾರ್ಯ, ರಾಮ್ ಪೈ, ನಿಲೇಶ್ ಕಾಮತ್, ಪವನ್ ಶೆಣೈ, ಪೃಥ್ವಿರಾಜ್ ಮುಂತಾದವರು ಉಪಸ್ಥಿತರಿದ್ದರು.