12:22 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಸಂಪುಟ ಪುನಾರಚನೆಗೆ ಯಾವುದೇ ಪಟ್ಟಿ ಸಿದ್ಧವಾಗಿಲ್ಲ, ನಾನು ಯಾವುದೇ ಹೆಸರುಗಳನ್ನು ಅಮಿತ್ ಷಾಗೆ ಕೊಟ್ಟಿಲ್ಲ: ಸಿಎಂ 

11/05/2022, 17:41

ಹೊಸದಿಲ್ಲಿ(reporterkarnataka.com): ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಜತೆ ಚರ್ಚೆ ಮಾಡುವುದಾಗಿ ಗೃಹ ಸಚಿವ ಅಮಿತ್ ಷಾ ತಿಳಿಸಿದ್ದಾರೆ. ಸಂಪುಟ ಪುನಾರಚನೆಗೆ ಯಾವುದೇ ಪಟ್ಟಿ ಸಿದ್ಧವಾಗಿಲ್ಲ. ನಾನು ಯಾವುದೇ ಹೆಸರುಗಳನ್ನು ಅಮಿತ್ ಷಾ ಅವರಿಗೆ ಕೊಟ್ಟಿಲ್ಲ.ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹೊಸದಿಲ್ಲಿಯಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ರಾಜ್ಯ ರಾಜಕೀಯದ ಸ್ಥಿತಿಗತಿ ಆಧರಿಸಿ ಬದಲಾವಣೆ ಆಗಬಹುದು ಎಂದಷ್ಟೇ ಹೇಳಿದರು.

ಸಂಪುಟ ವಿಸ್ತರಣೆಯೋ, ಪುನರಚನೆಯೋ ಎನ್ನುವ ಬಗ್ಗೆ ಚರ್ಚೆಯಾಗಿದೆ. ನಿನ್ನೆಯ ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆಯೂ ಚರ್ಚೆಯಾಗಿದೆ. 2-3
ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.

ಇತ್ತೀಚೆಗೆ ರಾಜ್ಯಕ್ಕೆ ಆಗಮಿಸಿದ್ದ ಅಮಿತ್ ಷಾ ಅವರು ಸಚಿವ ಸಂಪುಟ ವಿಸ್ತರಣೆ ಮತ್ತು ಪುನರ್ ರಚನೆ ಸಂಬಂಧ ದೆಹಲಿಯಲ್ಲಿ ಚರ್ಚೆ ಮಾಡೋಣ ಎಂದಿದ್ದರು. ಈ ಹಿನ್ನೆಲೆಯಲ್ಲಿ ಮಂಗಳವಾರ ಸಿಎಂ ಬೊಮ್ಮಾಯಿ ದೆಹಲಿಗೆ ತೆರಳಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು