3:04 PM Tuesday14 - October 2025
ಬ್ರೇಕಿಂಗ್ ನ್ಯೂಸ್
ಅಕ್ರಮ ಗೋವು ಸಾಗಾಟ ಮಾಡುತ್ತಿದ್ದ ವಾಹನ ಪಲ್ಟಿ: ಗಾಯಗೊಂಡ ಗೋವುಗಳನ್ನು ಬಿಟ್ಟು ಆರೋಪಿಗಳು… ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೈಕಮಾಂಡ್ ನಡೆ ನಿಗೂಢ: ಸಚಿವ ಎಚ್. ಸಿ. ಮಹದೇವಪ್ಪ ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್…

ಇತ್ತೀಚಿನ ಸುದ್ದಿ

ಸಂಪುಟ ರಚನೆ ಬೆನ್ನಲ್ಲೇ ಅಸಮಾಧಾನ ಸ್ಫೋಟ: ಒಲೈಕಾರ್, ರಾಜು ಗೌಡ, ಹಾಲಾಡಿ ಬೆಂಬಲಿಗರಿಂದ ಪ್ರತಿಭಟನೆ; ರಸ್ತೆಯಲ್ಲಿ ಹೊರಳಾಡಿದ ಕಾರ್ಯಕರ್ತರು !!

04/08/2021, 16:29

ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಚೊಚ್ಚಲ ಸಂಪುಟದ ಸಚಿವರುಗಳು ಬುಧವಾರ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಇತ್ತ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. 

ಶಾಸಕರಾದ ರಾಜು ಗೌಡ, ನೆಹರೂ ಒಲೈಕಾರ್, ಹಾಲಾಡಿ ಶ್ರೀನಿವಾಸ ಶೆಟ್ಟಿ ಮುಂತಾದವರ  

ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ಕೆಲವು ಕಡೆ ಬಿಜೆಪಿ ಕಾರ್ಯಕರ್ತರು ರಸ್ತೆಯಲ್ಲಿ ಹೊರಳಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾವೇರಿಯ ಸಿದ್ದಪ್ಪ ವೃತ್ತ ಬಳಿ ಒಲೈಕಾರ್ ಬೆಂಬಲಿಗರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಕೆಲವು ಕಾರ್ಯಕರ್ತರು ರಸ್ತೆಯಲ್ಲಿ ಮಲಗಿ ಹೊರಳಾಡಿದರು. ಈ ಸಂದರ್ಭದಲ್ಲಿ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಸುರಪುರ ಶಾಸಕ ರಾಜು ಗೌಡ ಅವರ ಬೆಂಬಲಿಗರು ಬೆಂಗಳೂರಿನ ಗಾಂಧಿ ನಗರದಲ್ಲಿ ಪ್ರತಿಭಟನೆ ನಡೆಸಿದರು. ರಾಜು ಗೌಡ ಸಚಿವರಾಗುತ್ತಾರೆಂದು ಅವರ ಬೆಂಬಲಿಗರು ಬೆಂಗಳೂರಿಗೆ ಆಗಮಿಸಿದ್ದರು. ಸಚಿವರ ಪಟ್ಟಿ ಹೊರಬೀಳುತ್ತಿದ್ದಂತೆ ತಮ್ಮ ನಾಯಕನಿಗೆ ಸ್ಥಾನ ಸಿಗಲಿಲ್ಲ ಎಂಬ ಆಕ್ರೋಶದಿಂದ ಪ್ರತಿಭಟನೆ ನಡೆಸಿದರು. ಕಾರ್ಯಕರ್ತರು ಪಕ್ಷದ ವಿರುದ್ಧ ಘೋಷಣೆಗಳನ್ನು ಕೂಗಿದರು. ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ಬೆಂಬಲಿಗರು ಕೂಡ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.

ಬಿಜೆಪಿ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಅವರು ತನ್ನ ಹೆಸರು ಸಚಿವರ ಪಟ್ಟಿಯಲ್ಲಿರುವುದನ್ನು ಖಾತ್ರಿಪಡಿಸುತ್ತಿದ್ದಂತೆ ಕುಟುಂಬ ಸಮೇತರಾಗಿ ಬೆಂಗಳೂರಿನ ಕುಮಾರ ಪಾರ್ಕ್ ಬಳಿ ಇರುವ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈಶ್ವರಪ್ಪ ಅವರ ಜತೆ ಪತ್ನಿ ಜಯಲಕ್ಷ್ಮೀ, ಪುತ್ರ ಕಾಂತೇಶ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು