ಇತ್ತೀಚಿನ ಸುದ್ದಿ
ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ ಹಲವು ಗಣ್ಯರ ಸಂತಾಪ
29/04/2024, 10:51
ಬೆಂಗಳೂರು(reporterkarnataka.com): ಲೋಕಸಭಾ ಸದಸ್ಯ, ಮಾಜಿ ಕೇಂದ್ರ ಸಚಿವ, ಶ್ರೀನಿವಾಸ ಪ್ರಸಾದ್ (77) ಮೈಸೂರು ಸೋಮವಾರ ಮುಂಜಾನೆ ನಿಧನರಾದರು.
ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮುಂಜಾನೆ 2.30ಕ್ಕೆ ಅವರು ಕೊನೆಯುಸಿರೆಳೆದಿದ್ದಾರೆ.
ಶ್ರೀನಿವಾಸ ಪ್ರಸಾದ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಹಿತ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.